/newsfirstlive-kannada/media/post_attachments/wp-content/uploads/2025/01/KL_RAHUL_PANT-1.jpg)
ಟೀಮ್ ಇಂಡಿಯಾ, ಇಂಗ್ಲೆಂಡ್ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿ ಶುರುವಾಗಿದೆ. ನಾಗ್ಪುರದ ವಿಸಿಎ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ನಡೆಯುತ್ತಿರೋ ಮೊದಲ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡ ಬ್ಯಾಟಿಂಗ್ ಮಾಡುತ್ತಿದೆ.
ಮೊದಲ ಪಂದ್ಯಕ್ಕೆ ಟೀಮ್ ಇಂಡಿಯಾದಲ್ಲಿ ಮೇಜರ್ ಸರ್ಜರಿ ಆಗಿದೆ. ಪ್ಲೇಯಿಂಗ್ ಎಲೆವೆನ್ನಲ್ಲಿ ರಿಷಬ್ ಪಂತ್ ಬದಲಿಗೆ ಕೆ.ಎಲ್ ರಾಹುಲ್ ಅವರನ್ನೇ ಮೊದಲ ವಿಕೆಟ್ ಕೀಪರ್ ಆಯ್ಕೆ ಮಾಡಿದ್ದಾರೆ.
ಕೆ.ಎಲ್ ರಾಹುಲ್ಗೆ ಚಾನ್ಸ್ ನೀಡಿದ್ದೇಕೆ?
ಭಾರತ ಕ್ರಿಕೆಟ್ ತಂಡದ ಸ್ಟಾರ್ ವಿಕೆಟ್ ಕೀಪರ್ ಬ್ಯಾಟರ್ ಕೆ.ಎಲ್ ರಾಹುಲ್. ಇವರು 2023ರ ವಿಶ್ವಕಪ್‌ನಲ್ಲಿ ಪಂತ್ ಅನುಪಸ್ಥಿತಿಯಲ್ಲಿ ವಿಕೆಟ್ ಕೀಪಿಂಗ್ ಮಾಡಿದರು. ಜತೆಗೆ ರಾಹುಲ್ ಅದ್ಭುತ ಕ್ಯಾಚ್‌ಗಳನ್ನು ಹಿಡಿಯುವ ಮೂಲಕ ಬಿಸಿಸಿಐ ಸೆಲೆಕ್ಷನ್ ಕಮಿಟಿ ಗಮನ ಸೆಳೆದಿದ್ರು. ಈಗ ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಕೆ.ಎಲ್ ರಾಹುಲ್ ಸ್ಥಾನ ಪಡೆದಿದ್ದಾರೆ.
ಪಂತ್ ಕೈ ಬಿಡಲು ಕಾರಣ ಬಿಚ್ಚಿಟ್ಟ ರೋಹಿತ್
ಕಳೆದ ಹಲವು ವರ್ಷಗಳಿಂದ ಕೆಎಲ್ ರಾಹುಲ್ ಏಕದಿನ ಮಾದರಿಯಲ್ಲಿ ವಿಕೆಟ್ ಕೀಪಿಂಗ್ ಮಾಡುತ್ತಿದ್ದಾರೆ. ವಿಕೆಟ್ ಕೀಪಿಂಗ್ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದಾರೆ. ಕಳೆದ 10 ಏಕದಿನ ಪಂದ್ಯದಲ್ಲೂ ತಂಡದ ನಿರೀಕ್ಷೆಯಂತೆಯೇ ಪ್ರದರ್ಶನ ನೀಡಿದ್ದು, ಪಂತ್ ಬದಲಿಗೆ ಕೆ.ಎಲ್ ರಾಹುಲ್ ಅವರನ್ನೇ ಆಡಿಸುತ್ತೇವೆ ಎಂದರು.
ಪಂತ್, ಕೆ.ಎಲ್ ರಾಹುಲ್ ಇಬ್ಬರಲ್ಲಿ ಒಬ್ಬರನ್ನು ಆಯ್ಕೆ ಮಾಡಬೇಕಾಗಿದೆ. ಇಬ್ಬರೂ ಸ್ವಂತ ಬಲದಿಂದ ಪಂದ್ಯವನ್ನು ಗೆಲ್ಲಿಸುವ ಸಾಮರ್ಥ್ಯ ಹೊಂದಿದ್ದಾರೆ. ರಾಹುಲ್ ಮತ್ತು ಪಂತ್ ನಡುವೆ ಯಾರನ್ನು ಆಡಿಸಬೇಕು ಎಂದು ನಿರ್ಧರಿಸೋದು ಕಷ್ಟ ಎಂದರು.
ಇದನ್ನೂ ಓದಿ: ಭಾರತ, ಇಂಗ್ಲೆಂಡ್ ಮೊದಲ ಏಕದಿನ ಪಂದ್ಯ; ಬಲಿಷ್ಠ ತಂಡ ಪ್ರಕಟ; ಮೂವರು RCB ಸ್ಟಾರ್ ಆಟಗಾರರಿಗೆ ಅವಕಾಶ
ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ಫಸ್ಟ್ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ