ಟೀಮ್ ಇಂಡಿಯಾ, ಬಾಂಗ್ಲಾದೇಶ ನಡುವಿನ ಮೊದಲ ಟೆಸ್ಟ್ ಮುಕ್ತಾಯ!
ಮೊದಲ ಟೆಸ್ಟ್ನಲ್ಲಿ ಬಾಂಗ್ಲಾ ವಿರುದ್ಧ 280 ರನ್‌ಗಳಿಂದ ಗೆದ್ದು ಬೀಗಿದ ಭಾರತ
ಬಾಂಗ್ಲಾ ವಿರುದ್ಧ ಗೆಲ್ಲಲು ಅಸಲಿ ಕಾರಣ ಯಾರು? ಎಂದು ಬಿಚ್ಚಿಟ್ಟ ರೋಹಿತ್
ಟೀಮ್ ಇಂಡಿಯಾ, ಬಾಂಗ್ಲಾದೇಶ ನಡುವಿನ ಮೊದಲ ಟೆಸ್ಟ್ ಮುಗಿದಿದೆ. ಚೆನ್ನೈನ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ನಡೆದ ಪಂದ್ಯದಲ್ಲಿ ಬಾಂಗ್ಲಾ ವಿರುದ್ಧ ಬರೋಬ್ಬರಿ 280 ರನ್‌ಗಳಿಂದ ರೋಹಿತ್ ಪಡೆ ಗೆದ್ದು ಬೀಗಿದೆ. ಗೆದ್ದ ಬಳಿಕ ಟೀಮ್ ಇಂಡಿಯಾ ಕ್ಯಾಪ್ಟನ್ ರೋಹಿತ್ ಶರ್ಮಾ ಮಾತಾಡಿದ್ದಾರೆ.
ರೋಹಿತ್ ಶರ್ಮಾ ಏನಂದ್ರು?
ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಸಂಕಷ್ಟಕ್ಕೆ ಸಿಲುಕಿದಾಗ ನೆರವಿಗೆ ಬಂದಿದ್ದು ಸ್ಟಾರ್ ಆಲ್‌ರೌಂಡರ್ ಆರ್. ಅಶ್ವಿನ್. ಇದಕ್ಕಾಗಿ ಅವರಿಗೆ ‘ಪ್ಲೇಯರ್ ಆಫ್ ದಿ ಮ್ಯಾಚ್’ ಪ್ರಶಸ್ತಿ ಕೂಡ ಸಿಕ್ಕಿದೆ. ಹೀಗಾಗಿ ಅಶ್ವಿನ್ ಟೀಮ್ ಇಂಡಿಯಾದ ಗೆಲುವಿನ ಹೀರೋ ಎಂದರು ರೋಹಿತ್.
ಅಶ್ವಿನ್ ತಂಡದ ಗೆಲುವಿಗಾಗಿ ಏನು ಮಾಡಿದ್ದಾರೆ ಎಂದು ಹೇಳಲು ನನ್ನ ಬಳಿ ಪದಗಳೇ ಇಲ್ಲ. ಅವರು ಯಾವಾಗಲೂ ನಮ್ಮೊಂದಿಗೆ ಇರುತ್ತಾರೆ. ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂದು ಅಶ್ವಿನ್ ನಮಗೆ ಹೇಳುತ್ತಲೇ ಇರುತ್ತಾರೆ. ಎಂದೂ ಅಶ್ವಿನ್ ಪಂದ್ಯದಿಂದ ಹೊರಗುಳಿದಿಲ್ಲ ಎಂದರು.
ಯಾವುದೇ ಸಂದರ್ಭದಲ್ಲೂ ನಾವು ಇದೇ ರೀತಿ ಆಟವಾಡಲು ಬಯಸುತ್ತೇವೆ. ವೇಗದ ಬೌಲಿಂಗ್ ಅಥವಾ ಸ್ಪಿನ್‌ನಲ್ಲಿ ನಮಗೆ ಯಾವುದೇ ಆಯ್ಕೆಗಳ ಕೊರತೆಯಿಲ್ಲ. ಈ ಪಿಚ್ ತುಂಬಾ ಸುಲಭವಾಗಿತ್ತು. ಇಲ್ಲಿ ವೇಗದ ಬೌಲರ್‌ಗಳಿಗೆ ಸಹಾಯವಿತ್ತು ಎಂದರು.
ಅಶ್ವಿನ್ ಅಬ್ಬರ!
ಮೊದಲ ಇನಿಂಗ್ಸ್‌ನಲ್ಲಿ ಆರ್. ಅಶ್ವಿನ್ ತಮ್ಮ ತವರಿನ ಪಿಚ್‌ನಲ್ಲಿ ಅಮೋಘ ಬ್ಯಾಟಿಂಗ್ ಮಾಡಿದ್ರು. ಭರ್ಜರಿ ಶತಕ ಸಿಡಿಸಿ ಟೀಮ್ ಇಂಡಿಯಾವನ್ನು ಸಂಕಷ್ಟದಿಂದ ಪಾರು ಮಾಡಿದ್ರು. ಬಳಿಕ 2ನೇ ಇನ್ನಿಂಗ್ಸ್ನಲ್ಲಿ ಬೌಲಿಂಗ್ ಮೂಲಕ ತಂಡಕ್ಕೆ ಆಧಾರವಾಗಿದ್ದಾರೆ.
ಟೀಮ್ ಇಂಡಿಯಾದ ಸ್ಪಿನ್ ಮಾಂತ್ರಿಕ ರವಿಚಂದ್ರನ್ ಅಶ್ವಿನ್ 2ನೇ ಇನಿಂಗ್ಸ್‌ನಲ್ಲಿ ಬಾಂಗ್ಲಾ ಬ್ಯಾಟರ್‌ಗಳಿಗೆ ಕಾಟ ಕೊಟ್ಟರು. 515 ರನ್‌ಗಳ ಗುರಿಯನ್ನು ಬೆನ್ನಟ್ಟಿದ್ದ ಬಾಂಗ್ಲಾ ಕೇವಲ 234 ರನ್ಗಳಿಗೆ ಆಲೌಟ್ ಆಗಿತ್ತು. ಅಶ್ವಿನ್ ಬರೋಬ್ಬರಿ 6 ವಿಕೆಟ್ ಅಬ್ಬರಿಸಿದ್ರು.
ಇದನ್ನೂ ಓದಿ: 2ನೇ ಟೆಸ್ಟ್ ಪಂದ್ಯಕ್ಕೆ ಬಲಿಷ್ಠ ಟೀಮ್ ಇಂಡಿಯಾ ಪ್ರಕಟ; ಸ್ಟಾರ್ ಆಟಗಾರರಿಗೆ ಕೊಕ್
ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ಫಸ್ಟ್ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ