/newsfirstlive-kannada/media/post_attachments/wp-content/uploads/2025/01/Gambhir_Pooje.jpg)
ನಾಳೆಯಿಂದ ಟೀಮ್ ಇಂಡಿಯಾ, ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟಿ20 ಸರಣಿ ಶುರುವಾಗಲಿದೆ. ಈ ಮುನ್ನ ಭಾರತ ತಂಡದ ಮುಖ್ಯ ಕೋಚ್ ಗೌತಮ್ ಗಂಭೀರ್ ಕೋಲ್ಕತ್ತಾದ ಕಾಳಿಘಾಟ್ ದೇವಸ್ಥಾನಕ್ಕೆ ಭೇಟಿ ನೀಡಿದ್ರು.
ಇನ್ನು, ಇಂಗ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯಕ್ಕೆ ಮುನ್ನ ಭಾರತ ಗೆಲ್ಲಲಿ ಎಂದು ಮುಖ್ಯ ಕೋಚ್ ಗೌತಮ್ ಗಂಭೀರ್ ಕಾಳಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ದೇವಸ್ಥಾನದಲ್ಲಿ ಗಂಭೀರ್ ಪೂಜೆ ಮಾಡುತ್ತಿರೋ ವಿಡಿಯೋ ಈಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ.
ವಿಡಿಯೋದಲ್ಲೇನಿದೆ?
ಕಾಳಿ ದೇವಿಗೆ ಆರತಿ ಬೆಳಗಿದ ಗಂಭೀರ್ ನಂತರ ಪುಷ್ಪಾರ್ಚನೆ ಮಾಡಿದ್ರು. ಇದೇ ವೇಳೆ ಅರ್ಚಕರು ಗಂಭೀರ್ ಅವರಿಗೆ ತಿಲಕವಿಟ್ಟು ಆಶೀರ್ವಾದಿಸಿದ್ದಾರೆ. ಭಾರತ ತಂಡ ಈ ಸೀರೀಸ್ ಗೆಲ್ಲಲಿ ಎಂದು ದೇವಿ ಬಳಿ ಬೇಡಿಕೊಂಡಿದ್ದಾರೆ ಎಂದು ವರದಿಯಾಗಿದೆ.
Head coach Gautam Gambhir visited Kalighat Temple for blessings in Kolkata ♥️ [PTI] pic.twitter.com/jk6TbnYf8E
— Johns. (@CricCrazyJohns)
Head coach Gautam Gambhir visited Kalighat Temple for blessings in Kolkata ♥️ [PTI] pic.twitter.com/jk6TbnYf8E
— Johns. (@CricCrazyJohns) January 21, 2025
">January 21, 2025
ಇತ್ತೀಚೆಗೆ ಟೀಮ್ ಇಂಡಿಯಾದ ಹೊಸ ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ ನೇಮಕಗೊಂಡರು. ಇವರ ಕೋಚಿಂಗ್ ಅವಧಿಯಲ್ಲಿ ಟೀಮ್ ಇಂಡಿಯಾ ಹೇಳಿಕೊಳ್ಳುವಂತಹ ಪ್ರದರ್ಶನ ನೀಡಿಲ್ಲ. ತವರಿನಲ್ಲಿ ನ್ಯೂಜಿಲೆಂಡ್ ಹಾಗೂ ಆಸ್ಟ್ರೇಲಿಯಾ ಪ್ರವಾಸದಲ್ಲಿ 2 ಟೆಸ್ಟ್ ಸರಣಿಗಳಲ್ಲಿ ಭಾರತ ಸೋಲು ಕಂಡಿದೆ. ಅಲ್ಲದೆ ಶ್ರೀಲಂಕಾ ವಿರುದ್ದವೂ ಏಕದಿನ ಸರಣಿ ಸೋತಿದೆ.
ಐಸಿಸಿ ಚಾಂಪಿಯನ್ಸ್ ಟ್ರೋಫಿ ಮುಂದಿನ ತಿಂಗಳು ಆರಂಭವಾಗಲಿದೆ. ಅದಕ್ಕೂ ಮುನ್ನ ನಡೆಯಲಿರೋ ಇಂಗ್ಲೆಂಡ್ ವಿರುದ್ಧ ಟಿ20 ಮತ್ತು ಏಕದಿನ ಸರಣಿ ಗೆಲ್ಲಲೇಬೇಕಾದ ಪರಿಸ್ಥಿತಿ ಇದೆ. ಹೀಗಾಗಿ ಗಂಭೀರ್ ಕಾಳಿಘಾಟ್ ದೇವಸ್ಥಾನಕ್ಕೆ ಆಗಮಿಸಿ ತಾಯಿಯ ಆಶೀರ್ವಾದ ಪಡೆದರು.
ಇದನ್ನೂ ಓದಿ:ಭಾರತ, ಇಂಗ್ಲೆಂಡ್ ಮಧ್ಯೆ ಟಿ20 ಪಂದ್ಯ; ಆರ್ಸಿಬಿಯ ಮೂವರು ಸ್ಟಾರ್ ಆಟಗಾರರಿಗೆ ಜಾಕ್ಪಾಟ್
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ