/newsfirstlive-kannada/media/post_attachments/wp-content/uploads/2025/04/Gautam-Gambhir.jpg)
ಪೆಹಲ್ಗಾಮ್ ದಾಳಿ ಬೆನ್ನಲ್ಲೇ ದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣ ಆಗಿದೆ. ಕರ್ನಾಟಕದ ಪ್ರಮುಖ ಪ್ರವಾಸಿ ತಾಣಗಳಲ್ಲಿ ಹೈ-ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಆತಂಕದ ನಡುವೆಯೇ ಟೀಮ್ ಇಂಡಿಯಾದ ಹೆಡ್ ಕೋಚ್ ಗೌತಮ್ ಗಂಭೀರ್‌ಗೆ ಜೀವ ಬೆದರಿಕೆ ಬಂದಿದೆ.
ಇದನ್ನೂ ಓದಿ:ಪಾಕ್ಗೆ ಹೋದವರು ಮೇ 1ರೊಳಗೆ ಬರ್ಬೇಕು; ಭಾರತದಲ್ಲಿರೋ ಪಾಕಿಸ್ತಾನಿಯರಿಗೆ ತೊಲಗಲು ಡೆಡ್ಲೈನ್..!
ಗೌತಮ್ ಗಂಭೀರ್ ಅವರಿಗೆ ಐಸಿಸ್ (Islamic State) ಸಂಘಟನೆಯಿಂದ ಕೊಲೆ ಬೆದರಿಕೆ ಬಂದಿದೆ. ಇ-ಮೇಲ್ ಸಂದೇಶದ ಮೂಲಕ ಜೀವ ಬೆದರಿಕೆ ಹಾಕಲಾಗಿದ್ದು, ಈ ಸಂಬಂಧ ದೆಹಲಿಯ ರಾಜೇಂದ್ರ ನಗರ ಠಾಣೆಯಲ್ಲಿ ಗಂಭೀರ್ ದೂರು ನೀಡಿದ್ದಾರೆ. ಅಲ್ಲದೇ ತಮ್ಮ ಕುಟುಂಬದ ಭದ್ರತೆ ಕೈಗೊಳ್ಳುವಂತೆ ಪೊಲೀಸರಿಗೆ ಗೌತಮ್ ಗಂಭೀರ್ ಮನವಿ ಮಾಡಿಕೊಂಡಿದ್ದಾರೆ.
ಮಾಹಿತಿಗಳ ಪ್ರಕಾರ, ಏಪ್ರಿಲ್ 22ರಂದು ಗೌತಮ್ ಗಂಭೀರ್‌ಗೆ ಇ-ಮೇಲ್ ಮೂಲಕ ಕೊಲೆ ಬೆದರಿಕೆ ಬಂದಿದೆ. Islamic State ಕಾಶ್ಮೀರ ಘಟಕ ಎಂಬ ಹೆಸರಿನಡಿ ಮೇಲ್ ಬಂದಿವೆ. ಒಂದು ಇ ಮೇಲ್ ಮಧ್ಯಾಹ್ನ ಮತ್ತು ಇನ್ನೊಂದು ಸಂಜೆ ಬಂದಿದೆ. ಎರಡೂ ಸಂದೇಶಗಳಲ್ಲೂ ಮೂರು ಪದ ಬಳಸಲಾಗಿದೆ. ಐ ಕಿಲ್ ಯು ಅಂತಾ ಮೇಲ್ನಲ್ಲಿ ಬರೆಯಲಾಗಿದೆ ಎಂದು ವರದಿಯಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ