newsfirstkannada.com

ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ಟೀಂ ಇಂಡಿಯಾ ಕ್ರಿಕೆಟಿಗ ಕೆ.ಎಲ್. ರಾಹುಲ್

Share :

Published February 19, 2024 at 8:01am

Update February 19, 2024 at 10:19am

    ಪ್ರಸಿದ್ದ ಪುಣ್ಯ ಕ್ಷೇತ್ರವಾದ ಸಿದ್ದಗಂಗಾ ಮಠ

    ಸಿದ್ದಲಿಂಗ ಮಹಾಸ್ವಾಮೀಜಿಗಳ ಆಶಿರ್ವಾದ ಪಡೆದ ಕ್ರಿಕೆಟಿಗ

    ತಂದೆ, ತಾಯಿಯೊಂದಿಗೆ ಮಠಕ್ಕೆ ಭೇಟಿ ನೀಡಿದ ಕೆ. ಎಲ್​ ರಾಹುಲ್​

ತುಮಕೂರು: ಭಾರತ ತಂಡದ ಖ್ಯಾತ ಕ್ರಿಕೆಟಿಗ ಕನ್ನಡಿಗ ಕೆ.ಎಲ್.ರಾಹುಲ್ ತುಮಕೂರಿನ ಕ್ಯಾತಸಂದ್ರ ಬಳಿಯ ಪ್ರಸಿದ್ದ ಪುಣ್ಯ ಕ್ಷೇತ್ರ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ್ದಾರೆ.

ಮೊದಲಿಗೆ ನಡೆದಾಡುವ ದೇವರು ಶಿವಕುಮಾರ ಶ್ರೀಗಳ ಗದ್ದುಗೆ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಸಿದ್ದಗಂಗಾ ಮಠಾಧಿಪತಿ ಸಿದ್ದಲಿಂಗ ಮಹಾಸ್ವಾಮೀಜಿಗಳ ಆಶಿರ್ವಾದ ಪಡೆದರು.

ತಂದೆ ಲೋಕೇಶ್, ತಾಯಿ ಲೋಕೇಶ್ವರಿ ಅವರೊಂದಿಗೆ ಕೆ. ಎಲ್​ ರಾಹುಲ್​ ಮಠಕ್ಕೆ ಭೇಟಿ ನೀಡಿದ್ದಾರೆ. ರಾಹುಲ್ ತಂದೆ ಲೋಕೇಶ್ ಕೂಡ ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಕಣ್ಣೂರು ಮೂಲದವರಾಗಿದ್ದು. ಸಿದ್ಧಗಂಗಾ ಮಠದ ಪರಮ ಭಕ್ತರಾಗಿದ್ದಾರೆ.

ಸಿದ್ಧಲಿಂಗ ಶ್ರೀಗಳು ಕ್ರಿಕೆಟ್ ಬಗ್ಗೆ ವಿಶೇಷ ಆಸಕ್ತಿ ಹೊಂದಿದ್ದು, ರಾಹುಲ್ ಪ್ರತಿಭೆಯನ್ನು ಪ್ರಶಂಸಿಸಿ ಇನ್ನು ಎತ್ತರಕ್ಕೆ ಬೆಳೆಯುವಂತೆ ಆಶಿರ್ವಾದ ಮಾಡಿದರು.

ಇನ್ನು ಸಿದ್ದಗಂಗಾ ಮಠಕ್ಕೆ ಆಗಮಿಸಿದ ಕ್ರಿಕೆಟ್ ಆಟಗಾರ ಕೆ.ಎಲ್‌.ರಾಹುಲ್‌ ನೋಡಲು ಅಭಿಮಾನಿಗಳು ಮುಗಿಬಿದ್ದಿದ್ದರು. ಅಲ್ಲದೇ ರಾಹುಲ್ ಜೊತೆ ಸೆಲ್ಫಿ ತೆಗೆದುಕೊಳ್ಳಲು ಅಭಿಮಾನಿಗಳು ಹರಸಾಹಸಪಟ್ಟರು.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ಟೀಂ ಇಂಡಿಯಾ ಕ್ರಿಕೆಟಿಗ ಕೆ.ಎಲ್. ರಾಹುಲ್

https://newsfirstlive.com/wp-content/uploads/2024/02/K-L-Rahul.jpg

Load More