ಅ. 24ರಿಂದ ಟೀಮ್ ಇಂಡಿಯಾ, ನ್ಯೂಜಿಲೆಂಡ್ ಮಧ್ಯೆ 2 ಟೆಸ್ಟ್
ಮೊದಲ ಟೆಸ್ಟ್ ಪಂದ್ಯದಲ್ಲಿ ಕೆ.ಎಲ್ ರಾಹುಲ್ ಕಳಪೆ ಪ್ರದರ್ಶನ
ಮುಂದಿನ ಟೆಸ್ಟ್ಗೆ ತಂಡದಲ್ಲಿ ಕೆ.ಎಲ್ ರಾಹುಲ್ ಸ್ಥಾನ ಡೌಟ್!
ಬೆಂಗಳೂರಿನ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ವಿರುದ್ಧ ನ್ಯೂಜಿಲೆಂಡ್ ಬರೋಬ್ಬರಿ 8 ವಿಕೆಟ್ಗಳಿಂದ ಗೆದ್ದು ಬೀಗಿದೆ. ಈ ಮೂಲಕ 3 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ನ್ಯೂಜಿಲೆಂಡ್ ತಂಡ 1-0 ಅಂತರದ ಮುನ್ನಡೆ ಸಾಧಿಸಿದೆ.
ಇನ್ನು, 2ನೇ ಟೆಸ್ಟ್ ಪಂದ್ಯವೂ ಪುಣೆಯಲ್ಲಿರೋ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಮ್ನಲ್ಲಿ ನಡೆಯಲಿದೆ. ಇದಕ್ಕೆ ಟೀಮ್ ಇಂಡಿಯಾ ಭರ್ಜರಿ ತಯಾರಿ ಮಾಡಿಕೊಂಡಿದೆ. ಅಕ್ಟೋಬರ್ 24ನೇ ತಾರೀಕಿನಿಂದ ಶುರುವಾಗೋ ಈ ಟೆಸ್ಟ್ ಪಂದ್ಯ 28ರ ವರೆಗೆ ನಡೆಯಲಿದೆ. ಈ ಪಂದ್ಯಕ್ಕೆ ಟೀಮ್ ಇಂಡಿಯಾದ ಪ್ಲೇಯಿಂಗ್ ಎಲೆವೆನ್ನಲ್ಲಿ ಮೇಜರ್ ಸರ್ಜರಿ ಆಗಲಿದೆ.
2ನೇ ಟೆಸ್ಟ್ನಿಂದ ಕೆ.ಎಲ್ ರಾಹುಲ್ಗೆ ಗೇಟ್ ಪಾಸ್
ಮೊದಲ ಟೆಸ್ಟ್ನಲ್ಲಿ ಹೀನಾಯ ಸೋಲಿನ ಬಳಿಕ ಟೀಮ್ ಇಂಡಿಯಾ ಸ್ಟಾರ್ ಬ್ಯಾಟರ್ ಕೆ.ಎಲ್ ರಾಹುಲ್ ಹೆಚ್ಚು ಟೀಕೆಗೆ ಒಳಗಾಗಿದ್ದಾರೆ. ತವರಿನಲ್ಲಿ ನಡೆದ ಪಂದ್ಯದಲ್ಲಿ ಬ್ಯಾಟಿಂಗ್ ವೈಫಲ್ಯ ಅನುಭವಿಸೋ ಮೂಲಕ ರಾಹುಲ್ ಹೆಚ್ಚು ನಿರಾಸೆ ಮೂಡಿಸಿದ್ರು. ಮೊದಲ ಇನ್ನಿಂಗ್ಸ್‌ನಲ್ಲಿ ಶೂನ್ಯಕ್ಕೆ ಔಟಾದ ಇವರು 2ನೇ ಇನ್ನಿಂಗ್ಸ್‌ನಲ್ಲಿ ಕೇವಲ 12 ರನ್ಗೆ ವಿಕೆಟ್ ಒಪ್ಪಿಸಿದ್ರು. ಹೀಗಾಗಿ ಇವರು 2ನೇ ಟೆಸ್ಟ್ ಪಂದ್ಯದಿಂದ ಔಟ್ ಆಗಬಹುದು.
ಸುವರ್ಣಾವಕಾಶ ಕೈಚೆಲ್ಲಿದ ರಾಹುಲ್
ಕೆ.ಎಲ್ ರಾಹುಲ್ ಟೀಮ್ ಇಂಡಿಯಾದ ಸ್ಟಾರ್ ಪ್ಲೇಯರ್. ಇತ್ತೀಚೆಗೆ ನಡೆದ ಬಾಂಗ್ಲಾದೇಶ ವಿರುದ್ಧ ಟೆಸ್ಟ್ ಸೀರೀಸ್ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ರು. ಹಾಗಾಗಿ ಇವರನ್ನು ನ್ಯೂಜಿಲೆಂಡ್ ತಂಡದ ವಿರುದ್ಧದ ಟೆಸ್ಟ್ ಸರಣಿಗೆ ಆಯ್ಕೆ ಮಾಡಲಾಯ್ತು. ಆದರೀಗ, ಮೊದಲ ಟೆಸ್ಟ್ನಲ್ಲೇ ಸಂಕಷ್ಟದಲ್ಲಿದ್ದ ಟೀಮ್ ಇಂಡಿಯಾಗೆ ರಾಹುಲ್ ಕೈ ಕೊಟ್ಟರು. ಈ ಮೂಲಕ ತನಗೆ ಸಿಕ್ಕ ಸುವರ್ಣಾವಕಾಶ ಕೈಚೆಲ್ಲಿದರು.
ಆಸ್ಟ್ರೇಲಿಯಾ ವಿರುದ್ಧ ಸೀರೀಸ್ಗೆ ಕೆ.ಎಲ್ ರಾಹುಲ್ ಡೌಟ್
ನ್ಯೂಜಿಲೆಂಡ್ ವಿರುದ್ಧ ಟೆಸ್ಟ್ ಸೀರೀಸ್ ಬೆನ್ನಲ್ಲೇ ಟೀಮ್ ಇಂಡಿಯಾ ಆಸ್ಟ್ರೇಲಿಯಾ ಪ್ರವಾಸ ಕೈಗೊಳ್ಳಲಿದೆ. ವರ್ಷದ ಕೊನೆಗೆ ಆಸ್ಟ್ರೇಲಿಯಾದಲ್ಲಿ ಆಸೀಸ್ ತಂಡದ ವಿರುದ್ಧ ಟೀಮ್ ಇಂಡಿಯಾ 5 ಪಂದ್ಯಗಳ ಟೆಸ್ಟ್ ಸರಣಿ ಆಡಲಿದೆ. ಈ ಸರಣಿಗೆ ರಾಹುಲ್ ಆಯ್ಕೆ ಆಗೋದು ಡೌಟ್ ಎನ್ನಲಾಗುತ್ತಿದೆ.
ಇದನ್ನೂ ಓದಿ: 2ನೇ ಟೆಸ್ಟ್ಗೆ ಟೀಮ್ ಇಂಡಿಯಾದಲ್ಲಿ ಮೇಜರ್ ಸರ್ಜರಿ; ಮೂವರು ಸ್ಟಾರ್ ಆಟಗಾರರು ಔಟ್!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ