/newsfirstlive-kannada/media/post_attachments/wp-content/uploads/2025/02/Kohli-Team-India.jpg)
ಇಂದು ದುಬೈ ಇಂಟರ್​ ನ್ಯಾಷನಲ್​ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿ 2025ರ ಹೈವೋಲ್ಟೇಜ್ ಪಂದ್ಯದಲ್ಲಿ ಪಾಕ್​ ತಂಡದ ವಿರುದ್ಧ ಟೀಮ್​ ಇಂಡಿಯಾ ಗೆದ್ದು ಬೀಗಿದೆ.
ಕ್ಯಾಪ್ಟನ್​ ರೋಹಿತ್​ ಶರ್ಮಾ ಔಟಾದ ಬಳಿಕ ಟೀಮ್​ ಇಂಡಿಯಾ ಪರ ಕಣಕ್ಕಿಳಿದ ಸ್ಟಾರ್​ ಬ್ಯಾಟರ್​ ವಿರಾಟ್​ ಕೊಹ್ಲಿ ಅಬ್ಬರಿಸಿದರು. ಚಾಂಪಿಯನ್ಸ್ ಟ್ರೋಫಿಯಲ್ಲಿ ಸ್ಫೋಟಕ ಶತಕ ಸಿಡಿಸಿ ದಾಖಲೆ ಬರೆದರು.
ಕೊಹ್ಲಿ ಅಬ್ಬರದ ಶತಕ
ತಾಳ್ಮೆಯಿಂದಲೇ ಬ್ಯಾಟ್​ ಬೀಸಿದ ಕೊಹ್ಲಿ ಉತ್ತಮ ಇನ್ನಿಂಗ್ಸ್​​ ಕಟ್ಟಿದರು. ಪಾಕ್​ ತಂಡದ ಬೌಲರ್​​ಗಳನ್ನು ಕಾಡಿದ ಇವರು ಜವಾಬ್ದಾರಿಯುತ ಬ್ಯಾಟಿಂಗ್​ ಮಾಡಿದರು. ತಾನು ಆಡಿದ 111 ಎಸೆತಗಳಲ್ಲಿ 7 ಫೋರ್​ ಸಮೇತ ಅಜೇಯ 100 ರನ್ ಚಚ್ಚಿದ್ರು. ಇವರ ಬ್ಯಾಟಿಂಗ್​ ಸ್ಟ್ರೈಕ್​ ರೇಟ್​ 90ಕ್ಕೂ ಹೆಚ್ಚಿತ್ತು.
ಏಕದಿನ ಕ್ರಿಕೆಟ್​​ನಲ್ಲಿ ಟೀಮ್​ ಇಂಡಿಯಾದ ಸ್ಟಾರ್​​ ಕ್ರಿಕೆಟರ್​ ವಿರಾಟ್​ ಕೊಹ್ಲಿ ಐತಿಹಾಸಿಕ ಸಾಧನೆ ಮಾಡಿದ್ದಾರೆ. ತಾನು ಆಡಿರೋ 287 ಏಕದಿನ ಇನ್ನಿಂಗ್ಸ್​ನಲ್ಲಿ 14 ಸಾವಿರ ರನ್​​ ಪೂರೈಸಿದ್ದಾರೆ. ಪಾಕ್​​ ವಿರುದ್ಧದ ಏಕದಿನ ಪಂದ್ಯದಲ್ಲೇ ಕೊಹ್ಲಿ ಈ ದಾಖಲೆ ಸೃಷ್ಟಿಸಿದ್ದಾರೆ.
ಪ್ರಸ್ತುತ ಕಾಲದ ಅತ್ಯುತ್ತಮ ಏಕದಿನ ಬ್ಯಾಟರ್‌ಗಳಲ್ಲಿ ವಿರಾಟ್ ಕೊಹ್ಲಿ ಒಬ್ಬರು. ಇವರು ಟೀಮ್ ಇಂಡಿಯಾ ದಿಗ್ಗಜ ಬ್ಯಾಟರ್ ಸಚಿನ್ ತೆಂಡೂಲ್ಕರ್ ಮತ್ತು ಶ್ರೀಲಂಕಾ ಮಾಜಿ ಕ್ಯಾಪ್ಟನ್​ ಕುಮಾರ್ ಸಂಗಕ್ಕಾರ ಅವರಿಂದ ಸಾಧ್ಯವಾಗದ ಸಾಧನೆಯನ್ನು ಮಾಡಿದ್ದಾರೆ. ಏಕದಿನ ಕ್ರಿಕೆಟ್‌ನಲ್ಲಿ ಅತಿವೇಗವಾಗಿ 14000 ರನ್‌ಗಳನ್ನು ಪೂರ್ಣಗೊಳಿಸಿದ ವಿಶ್ವದ ಮೊದಲ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ವಿರಾಟ್ ಕೊಹ್ಲಿ ಏಕದಿನ ಇತಿಹಾಸದಲ್ಲಿ ಅತಿ ಹೆಚ್ಚು ಶತಕ ಗಳಿಸಿದ ಬ್ಯಾಟರ್. ಸಚಿನ್ ತೆಂಡೂಲ್ಕರ್ ಅವರ 49 ಏಕದಿನ ಶತಕಗಳನ್ನು ಹಿಂದಿಕ್ಕುವ ಮೂಲಕ ಅವರು ಈ ಸಾಧನೆ ಮಾಡಿದ್ದಾರೆ. ಕೊಹ್ಲಿ ಏಕದಿನ ಕ್ರಿಕೆಟ್‌ನಲ್ಲಿ 51 ಶತಕಗಳು ಮತ್ತು 72 ಅರ್ಧಶತಕಗಳನ್ನು ಬಾರಿಸಿದ್ದಾರೆ.
ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್​​ನಲ್ಲಿ ‘ರನ್ ಭೂಮಿ’ ವೀಕ್ಷಿಸಿ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us