/newsfirstlive-kannada/media/post_attachments/wp-content/uploads/2023/10/Kohli-Century_1.jpg)
ಏಕದಿನ ಕ್ರಿಕೆಟ್‌ನಲ್ಲಿ ಟೀಮ್ ಇಂಡಿಯಾದ ಸ್ಟಾರ್ ಕ್ರಿಕೆಟರ್ ವಿರಾಟ್ ಕೊಹ್ಲಿ ಐತಿಹಾಸಿಕ ಸಾಧನೆ ಮಾಡಿದ್ದಾರೆ. ತಾನು ಆಡಿರೋ 287 ಏಕದಿನ ಇನ್ನಿಂಗ್ಸ್ನಲ್ಲಿ 14 ಸಾವಿರ ರನ್ ಪೂರೈಸಿದ್ದಾರೆ. ಪಾಕ್ ವಿರುದ್ಧದ ಏಕದಿನ ಪಂದ್ಯದಲ್ಲೇ ಕೊಹ್ಲಿ ಈ ದಾಖಲೆ ಸೃಷ್ಟಿಸಿದ್ದಾರೆ.
ಪ್ರಸ್ತುತ ಕಾಲದ ಅತ್ಯುತ್ತಮ ಏಕದಿನ ಬ್ಯಾಟರ್‌ಗಳಲ್ಲಿ ವಿರಾಟ್ ಕೊಹ್ಲಿ ಒಬ್ಬರು. ಇವರು ಟೀಮ್ ಇಂಡಿಯಾ ದಿಗ್ಗಜ ಬ್ಯಾಟರ್ ಸಚಿನ್ ತೆಂಡೂಲ್ಕರ್ ಮತ್ತು ಶ್ರೀಲಂಕಾ ಮಾಜಿ ಕ್ಯಾಪ್ಟನ್ ಕುಮಾರ್ ಸಂಗಕ್ಕಾರ ಅವರಿಂದ ಸಾಧ್ಯವಾಗದ ಸಾಧನೆಯನ್ನು ಮಾಡಿದ್ದಾರೆ. ಏಕದಿನ ಕ್ರಿಕೆಟ್‌ನಲ್ಲಿ ಅತಿವೇಗವಾಗಿ 14000 ರನ್‌ಗಳನ್ನು ಪೂರ್ಣಗೊಳಿಸಿದ ವಿಶ್ವದ ಮೊದಲ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಸಚಿನ್, ಸಂಗಕ್ಕಾರ ದಾಖಲೆ ಮುರಿದ ಕೊಹ್ಲಿ
ಇದುವರೆಗೆ ಏಕದಿನ ಕ್ರಿಕೆಟ್‌ನಲ್ಲಿ 14000 ರನ್ ಪೂರೈಸಿದ ಇಬ್ಬರು ಬ್ಯಾಟರ್ಸ್ ಸಚಿನ್ ತೆಂಡೂಲ್ಕರ್ ಮತ್ತು ಕುಮಾರ್ ಸಂಗಕ್ಕಾರ. ಇವರ ಸಾಲಿಗೆ ಕೊಹ್ಲಿ ಕೂಡ ಸೇರ್ಪಡೆ ಆಗಿದ್ದಾರೆ. ಸಚಿನ್ 14000 ರನ್ 350 ಇನ್ನಿಂಗ್ಸ್ನಲ್ಲಿ ಪೂರೈಸಿದರು. ಸಂಗಕ್ಕಾರ 378 ಇನ್ನಿಂಗ್ಸ್‌ಗಳಲ್ಲಿ ದಾಖಲೆ ಮಾಡಿದರು. ಈಗ ಕೊಹ್ಲಿ ಕೇವಲ 287 ಇನ್ನಿಂಗ್ಸ್ನಲ್ಲಿ 57.88 ಸರಾಸರಿಯಲ್ಲಿ 14000 ರನ್ ಗಳಿಸಿದ್ದಾರೆ.
ವಿರಾಟ್ ಕೊಹ್ಲಿ ಏಕದಿನ ಇತಿಹಾಸದಲ್ಲಿ ಅತಿ ಹೆಚ್ಚು ಶತಕ ಗಳಿಸಿದ ಬ್ಯಾಟರ್. ಸಚಿನ್ ತೆಂಡೂಲ್ಕರ್ ಅವರ 49 ಏಕದಿನ ಶತಕಗಳನ್ನು ಹಿಂದಿಕ್ಕುವ ಮೂಲಕ ಅವರು ಈ ಸಾಧನೆ ಮಾಡಿದ್ದಾರೆ. ಕೊಹ್ಲಿ ಏಕದಿನ ಕ್ರಿಕೆಟ್‌ನಲ್ಲಿ 50 ಶತಕಗಳು ಮತ್ತು 72 ಅರ್ಧಶತಕಗಳನ್ನು ಹೊಂದಿದ್ದಾರೆ.
ಇದನ್ನೂ ಓದಿ:ಪಾಕ್ ವಿರುದ್ಧ ಪಂದ್ಯದಲ್ಲಿ ರೋಹಿತ್ನಿಂದ ಮತ್ತೆ ತಪ್ಪು; ಕ್ಯಾಪ್ಟನ್ ವಿರುದ್ಧ ಬಹಿರಂಗ ಆಕ್ರೋಶ
ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ