/newsfirstlive-kannada/media/post_attachments/wp-content/uploads/2024/08/Team-India-1.jpg)
ಬಹುನಿರೀಕ್ಷಿತ 2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಕ್ಷಣಗಣನೆ ಶುರುವಾಗಿದೆ. ಪಾಕಿಸ್ತಾನ ಆಯೋಜಿಸುತ್ತಿರೋ ಐಸಿಸಿ ಮೆಗಾ ಟೂರ್ನಿಯಲ್ಲಿ ಅಬ್ಬರಿಸಲು ಎಲ್ಲರೂ ಸಜ್ಜಾಗಿದ್ದಾರೆ. ಅದಕ್ಕಾಗಿ ಎಲ್ಲಾ ತಂಡಗಳ ಬ್ಯಾಟರ್ ಮತ್ತು ಬೌಲರ್ಗಳು ಭರ್ಜರಿ ತಯಾರಿ ನಡೆಸಿಕೊಂಡಿದ್ದಾರೆ.
ಮೊದಲ ಪಂದ್ಯದಲ್ಲಿ ಪಾಕ್ ಹಾಗೂ ನ್ಯೂಜಿಲೆಂಡ್ ತಂಡಗಳು ಕಾದಾಟ ನಡೆಸಲಿವೆ. ವಿಶೇಷ ಎಂದರೆ ಟೀಮ್ ಇಂಡಿಯಾ ಈ ಟೂರ್ನಿಯ ಎಲ್ಲಾ ಪಂದ್ಯಗಳನ್ನು ದುಬೈನಲ್ಲೇ ಆಡಲಿದೆ. ನಾಳೆ ಅಲ್ಲ ನಾಡಿದ್ದು ಎಂದರೆ ಫೆಬ್ರವರಿ 20ನೇ ತಾರೀಕಿನಂದು ಟೀಮ್ ಇಂಡಿಯಾ ಚಾಂಪಿಯನ್ಸ್ ಟ್ರೋಫಿಯ ತನ್ನ ಮೊದಲ ಪಂದ್ಯ ಆಡಲಿದೆ. ಹೀಗಾಗಿ ಟೀಮ್ ಇಂಡಿಯಾ ಪ್ಲೇಯಿಂಗ್ ಎಲೆವೆನ್ ಹೇಗಿದೆ ಅನ್ನೋ ಚರ್ಚೆ ಜೋರಾಗಿದೆ.
ಬಾಂಗ್ಲಾ ವಿರುದ್ಧ ಸೆಣಸಾಟ
ಗುರುವಾರ ಮಧ್ಯಾಹ್ನ ದುಬೈನಲ್ಲಿ ನಡೆಯಲಿರೋ ಚಾಂಪಿಯನ್ಸ್ ಟ್ರೋಫಿ ಮಹತ್ವದ ಪಂದ್ಯದಲ್ಲಿ ಟೀಮ್ ಇಂಡಿಯಾ, ಬಾಂಗ್ಲಾದೇಶ ತಂಡಗಳು ಮುಖಾಮುಖಿ ಆಗಲಿವೆ. ಟೀಮ್ ಇಂಡಿಯಾ ಗೆಲುವಿನೊಂದಿಗೆ ಶುಭಾರಂಭ ಮಾಡಲು ಎದುರು ನೋಡುತ್ತಿದೆ.
ಪ್ಲೇಯಿಂಗ್ ಎಲೆವೆನ್ನಲ್ಲಿ ಯಾರಿಗೆ ಸ್ಥಾನ?
ಮೊದಲ ಪಂದ್ಯದಲ್ಲಿ ಬಾಂಗ್ಲಾ ವಿರುದ್ಧ ಟೀಮ್ ಇಂಡಿಯಾದ ಪ್ಲೇಯಿಂಗ್ ಎಲೆವೆನ್ ಹೇಗಿರಲಿದೆ? ಅನ್ನೋ ಚರ್ಚೆ ಶುರುವಾಗಿದೆ. ಓಪನರ್ಸ್ ಆಗಿ ಕ್ಯಾಪ್ಟನ್ ರೋಹಿತ್ ಶರ್ಮಾ, ಶುಭ್ಮನ್ ಗಿಲ್ ಕಣಕ್ಕಿಳಿಯಲಿದ್ದಾರೆ. ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ ಮಿಡಲ್ ಆರ್ಡರ್ನಲ್ಲಿ ಬ್ಯಾಟ್ ಬೀಸಲಿದ್ದಾರೆ. ಕನ್ನಡಿಗ ಕೆಎಲ್ ರಾಹುಲ್ 5ನೇ ಕ್ರಮಾಂಕದಲ್ಲಿ ಕಣಕ್ಕಿಳಿಯುವ ಸಾಧ್ಯತೆ ಇದೆ.
ಆಲ್‌ರೌಂಡರ್ ಸ್ಥಾನದಲ್ಲಿ ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ರವೀಂದ್ರ ಜಡೇಜಾ ಕಾಣಿಸಿಕೊಳ್ಳಲಿದ್ದಾರೆ. ಇನ್ನು ಕುಲದೀಪ್ ಯಾದವ್ ತಂಡದ ಭಾಗವಾಗಲಿದ್ದಾರೆ. ವೇಗದ ಬೌಲಿಂಗ್ ವಿಭಾಗದಲ್ಲಿ ಮೊಹಮ್ಮದ್ ಶಮಿ ಹಾಗೂ ಅರ್ಷದೀಪ್ ಸಿಂಗ್ ಆಡುವ ಸಾಧ್ಯತೆ ಇದೆ.
ಇದನ್ನೂ ಓದಿ: ನಾಳೆಯೇ iPhone SE4 ಲಾಂಚ್; ಕಡಿಮೆ ಬೆಲೆಗೆ ಆ್ಯಪಲ್ ಫೋನ್; ರೇಟ್ ಕೇಳಿದ್ರೆ ಶಾಕ್ ಆಗ್ತೀರಾ!
ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ಫಸ್ಟ್ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ