/newsfirstlive-kannada/media/post_attachments/wp-content/uploads/2024/07/Sanju-Samson.jpg)
ಇಂದು ಹರಾರೆ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ಟೀಮ್ ಇಂಡಿಯಾ, ಜಿಂಬಾಬ್ವೆ ಕ್ರಿಕೆಟ್ ತಂಡ ಮುಖಾಮುಖಿ ಆಗುತ್ತಿವೆ. ಟಾಸ್ ಗೆದ್ದ ಟೀಮ್ ಇಂಡಿಯಾದ ಕ್ಯಾಪ್ಟನ್ ಶುಭ್ಮನ್ ಗಿಲ್ ಅವರು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಹಾಗಾಗಿ ಜಿಂಬಾಬ್ವೆ ಕ್ರಿಕೆಟ್ ತಂಡ ಬೌಲಿಂಗ್ ಮಾಡಲಿದೆ.
ಮೊದಲ ಪಂದ್ಯದಲ್ಲಿ ಸೋತಿದ್ದ ಟೀಮ್ ಇಂಡಿಯಾ 2ನೇ ಅಂತರಾಷ್ಟ್ರೀಯ ಟಿ20 ಮ್ಯಾಚ್ನಲ್ಲಿ ಗೆಲ್ಲೋ ಮೂಲಕ ಸೇಡಿಗೆ ಸೇಡು ತೀರಿಸಿಕೊಂಡಿದೆ. 3ನೇ ಪಂದ್ಯದಲ್ಲೂ ಜಿಂಬಾಬ್ವೆ ವಿರುದ್ಧ ಗೆಲುವು ಸಾಧಿಸಬೇಕು ಎಂದು ಟೀಮ್ ಇಂಡಿಯಾ ಸಜ್ಜಾಗಿದೆ.
ಇನ್ನು, ಟಿ20 ವಿಶ್ವಕಪ್ ಚಾಂಪಿಯನ್ಗಳಾದ ಶಿವಂ ದುಬೆ, ಸಂಜು ಸ್ಯಾಮ್ಸನ್ ಮತ್ತು ಯಶಸ್ವಿ ಜೈಸ್ವಾಲ್ ಭಾರತ ತಂಡವನ್ನು ಸೇರಿಕೊಂಡಿದ್ದಾರೆ. ಈ ಮೂವರು 3ನೇ ಟಿ20 ಅಂತರಾಷ್ಟ್ರೀಯ ಪಂದ್ಯಕ್ಕೆ ಲಭ್ಯರಾಗಿದ್ದಾರೆ.
ಜಿಂಬಾಬ್ವೆ ವಿರುದ್ಧ ಬಲಿಷ್ಠ ಟೀಮ್ ಇಂಡಿಯಾ ಕಣಕ್ಕೆ!
ಯಶಸ್ವಿ ಜೈಸ್ವಾಲ್, ಅಭಿಷೇಕ್ ಶರ್ಮಾ, ಶುಭ್ಮನ್ ಗಿಲ್ (ಕ್ಯಾಪ್ಟನ್), ರುತುರಾಜ್ ಗಾಯಕ್ವಾಡ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಶಿವಂ ದುಬೆ, ರಿಂಕು ಸಿಂಗ್, ವಾಶಿಂಗ್ಟನ್ ಸುಂದರ್, ರವಿ ಬಿಷ್ನೋಯ್, ಆವೇಶ್ ಖಾನ್, ಖಲೀಲ್ ಅಹ್ಮದ್.
ಇದನ್ನೂ ಓದಿ:ರೋಹಿತ್-ಕೊಹ್ಲಿ ಫ್ಯಾನ್ಸ್ಗೆ ಶಾಕಿಂಗ್ ನ್ಯೂಸ್.. ಜೋಡೆತ್ತುಗಳಿಂದ ಮತ್ತೊಂದು ನಿರ್ಧಾರ..!
ವಿಶೇಷ ಸೂಚನೆ: ಕ್ರಿಕೆಟ್ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್