ಇಂಗ್ಲೆಂಡ್​​ ವಿರುದ್ಧ ಮೊದಲ ಟಿ20 ಪಂದ್ಯ; ಟೀಮ್​ ಇಂಡಿಯಾದಿಂದ ಸ್ಟಾರ್​ ಆಟಗಾರರಿಗೆ ಕೊಕ್

author-image
Ganesh Nachikethu
Updated On
ಟೀಮ್​​ ಇಂಡಿಯಾಗೆ ಸ್ಫೋಟಕ ಆಟಗಾರನಿಂದ ಆನೆಬಲ; ಯುವ ಬ್ಯಾಟರ್​ಗೆ ಸುವರ್ಣಾವಕಾಶ
Advertisment
  • ಟೀಮ್​ ಇಂಡಿಯಾ, ಇಂಗ್ಲೆಂಡ್ ನಡುವಿನ ಮೊದಲ ಟಿ20 ಪಂದ್ಯ!
  • ಇಂದು ಕೋಲ್ಕತ್ತಾದ ಈಡನ್ ಗಾರ್ಡನ್‌ನಲ್ಲಿ ನಡೆಯಲಿರೋ ಮ್ಯಾಚ್​​​
  • ಟೀಮ್​ ಇಂಡಿಯಾದಿಂದ ಸ್ಟಾರ್​ ಆಟಗಾರರಿಗೆ ಕೊಕ್​​ ನೀಡಿದ್ಯಾಕೆ?

ಟೀಮ್​ ಇಂಡಿಯಾ, ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟಿ20 ಸರಣಿ ಇಂದಿನಿಂದ ಶುರುವಾಗಲಿದೆ. ಇಂದು ಕೋಲ್ಕತ್ತಾದ ಈಡನ್ ಗಾರ್ಡನ್‌ನಲ್ಲಿ ಮೊದಲ ಟಿ20 ಪಂದ್ಯ ನಡೆಯುತ್ತಿದೆ.

ಇನ್ನು, ಟಾಸ್​ ಗೆದ್ದ ಟೀಮ್​ ಇಂಡಿಯಾದ ಕ್ಯಾಪ್ಟನ್​ ಸೂರ್ಯಕುಮಾರ್​ ಯಾದವ್​ ಅವರು ಬೌಲಿಂಗ್​ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ ಜೋಸ್​ ಬಟ್ಲರ್​ ನೇತೃತ್ವದ ಇಂಗ್ಲೆಂಡ್​ ಫಸ್ಟ್​ ಬ್ಯಾಟಿಂಗ್​ ಮಾಡಲಿದೆ.

ಟೀಮ್​ ಇಂಡಿಯಾದಿಂದ ಸ್ಟಾರ್​ ಆಟಗಾರರಿಗೆ ಕೊಕ್​ ನೀಡಲಾಗಿದೆ. ಮೊಹಮ್ಮದ್​ ಶಮಿ, ವಾಷಿಂಗ್ಟನ್​ ಸುಂದರ್​, ಧೃವ್​ ಜುರೆಲ್​ ಸೇರಿದಂತೆ ಹಲವರನ್ನು ಕೈ ಬಿಡಲಾಗಿದೆ.

ಕೋಲ್ಕತ್ತಾದಲ್ಲಿ ಟೀಂ ಇಂಡಿಯಾದ ದಾಖಲೆ ಅದ್ಭುತವಾಗಿದೆ. ಇಲ್ಲಿ ಆಡಿದ 7 ಪಂದ್ಯಗಳಲ್ಲಿ 6ರಲ್ಲಿ ಗೆಲುವು ಸಾಧಿಸಿದೆ. ಟೀಮ್​ ಇಂಡಿಯಾ ಪರ ಬ್ಯಾಟಿಂಗ್‌ನಲ್ಲಿ ಸಂಜು ಸ್ಯಾಮ್ಸನ್ ಮತ್ತು ತಿಲಕ್ ವರ್ಮಾ ಅತ್ಯುತ್ತಮ ಫಾರ್ಮ್‌ನಲ್ಲಿದ್ದಾರೆ. ಮತ್ತೊಂದೆಡೆ ಇಂಗ್ಲೆಂಡ್‌ ತಂಡ ತುಂಬಾ ಬಲಿಷ್ಠವಾಗಿದೆ. ಫಿಲ್ ಸಾಲ್ಟ್, ಜೋಸ್ ಬಟ್ಲರ್, ಲಿಯಾಮ್ ಲಿವಿಂಗ್‌ಸ್ಟೋನ್ ಇಂಗ್ಲೆಂಡ್​ ಪರ ಇದ್ದಾರೆ.

ಟೀಮ್​ ಇಂಡಿಯಾ ಪ್ಲೇಯಿಂಗ್​ ಎಲೆವೆನ್​​ ಹೀಗಿದೆ!

ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್ (ನಾಯಕ), ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ರಿಂಕು ಸಿಂಗ್, ನಿತೀಶ್ ಕುಮಾರ್ ರೆಡ್ಡಿ, ಅಕ್ಷರ್ ಪಟೇಲ್, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ.

ಇದನ್ನೂ ಓದಿ:ಟೀಮ್​ ಇಂಡಿಯಾದ ಯುವ ಬ್ಯಾಟರ್​​ ಅಭಿಷೇಕ್​​ ಶರ್ಮಾಗೆ ಕೊನೆಯ ಅವಕಾಶ; ಬಿಸಿಸಿಐ ಎಚ್ಚರಿಕೆ!

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment