/newsfirstlive-kannada/media/post_attachments/wp-content/uploads/2024/08/Team-India-1.jpg)
ನಾಳೆ ಮಧ್ಯಾಹ್ನ ದುಬೈನಲ್ಲಿ ನಡೆಯಲಿರೋ ಚಾಂಪಿಯನ್ಸ್ ಟ್ರೋಫಿ ಸೆಮಿಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ, ಆಸ್ಟ್ರೇಲಿಯಾ ತಂಡಗಳು ಮುಖಾಮುಖಿ ಆಗಲಿವೆ. ಟೀಮ್ ಇಂಡಿಯಾ ಗೆಲುವಿನೊಂದಿಗೆ ಫೈನಲ್ಗೆ ಎಂಟ್ರಿ ನೀಡಲು ಮುಂದಾಗಿದೆ. ಆಸ್ಟ್ರೇಲಿಯಾ ಕೂಡ ಭಾರತದ ವಿರುದ್ಧ ಗೆಲ್ಲಲು ಭರ್ಜರಿ ಪ್ಲಾನ್ ಮಾಡಿಕೊಂಡಿದೆ.
ಈ ಹಿಂದೆ ಹಲವು ಬಾರಿ ಐಸಿಸಿ ಮೆಗಾ ಟೂರ್ನಿ ಫೈನಲ್ ಪಂದ್ಯಗಳಲ್ಲಿ ಟೀಮ್ ಇಂಡಿಯಾ, ಆಸ್ಟ್ರೇಲಿಯಾ ಮುಖಾಮುಖಿ ಆಗಿವೆ. ಕಳೆದ ಎರಡು ಸಲ ಐಸಿಸಿ ಟೂರ್ನಿಗಳಲ್ಲಿ ಉಭಯ ತಂಡಗಳು ಸೆಣಸಾಡಿದ್ದವು. ಆ ಎರಡೂ ಪಂದ್ಯಗಳಲ್ಲಿ ಟೀಮ್ ಇಂಡಿಯಾ ಹೀನಾಯ ಸೋಲು ಕಂಡಿದೆ. ಈ ಎರಡು ಸೋಲಿಗೆ ಸೇಡು ತೀರಿಸಿಕೊಳ್ಳಲು ಮತ್ತು ಆಸ್ಟ್ರೇಲಿಯಾಗೆ ಮಣ್ಣು ಮುಕ್ಕಿಸಲು ಟೀಮ್ ಇಂಡಿಯಾಗೆ ಇದು ಸುವರ್ಣಾವಕಾಶ ಆಗಿದೆ. ಹಾಗಾಗಿ ಟೀಮ್ ಇಂಡಿಯಾ ಪ್ಲೇಯಿಂಗ್ ಎಲೆವೆನ್ ಹೇಗಿರಲಿದೆ? ಅನ್ನೋ ಚರ್ಚೆ ನಡೆಯುತ್ತಿದೆ.
ಪ್ಲೇಯಿಂಗ್ ಎಲೆವೆನ್ನಲ್ಲಿ ಯಾರಿಗೆ ಸ್ಥಾನ?
ಆಸ್ಟ್ರೇಲಿಯಾ ವಿರುದ್ಧ ಟೀಮ್ ಇಂಡಿಯಾದ ಪ್ಲೇಯಿಂಗ್ ಎಲೆವೆನ್ ಹೀಗಿರಲಿದೆ. ಓಪನರ್ಸ್ ಆಗಿ ಕ್ಯಾಪ್ಟನ್ ರೋಹಿತ್ ಶರ್ಮಾ, ಶುಭ್ಮನ್ ಗಿಲ್ ಕಣಕ್ಕಿಳಿಯಲಿದ್ದಾರೆ. ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ ಮಿಡಲ್ ಆರ್ಡರ್ನಲ್ಲಿ ಬ್ಯಾಟ್ ಬೀಸಲಿದ್ದಾರೆ. ಕನ್ನಡಿಗ ಕೆಎಲ್ ರಾಹುಲ್ ಮತ್ತು ರಿಷಬ್ ಪಂತ್ ಕ್ರಮವಾಗಿ 5 ಮತ್ತು 6ನೇ ಕ್ರಮಾಂಕದಲ್ಲಿ ಕಣಕ್ಕಿಳಿಯುವ ಸಾಧ್ಯತೆ ಇದೆ.
ಆಲ್‌ರೌಂಡರ್ ಸ್ಥಾನದಲ್ಲಿ ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ರವೀಂದ್ರ ಜಡೇಜಾ ಕಾಣಿಸಿಕೊಳ್ಳಲಿದ್ದಾರೆ. ವೇಗದ ಬೌಲಿಂಗ್ ವಿಭಾಗದಲ್ಲಿ ಮೊಹಮ್ಮದ್ ಶಮಿ ಹಾಗೂ ಅರ್ಷದೀಪ್ ಸಿಂಗ್ ಆಡುವ ಸಾಧ್ಯತೆ ಇದೆ.
ಇದನ್ನೂ ಓದಿ:ಕೇವಲ 19 ರೂ.ಗೆ ಪ್ರೀಪೇಯ್ಡ್ ಪ್ಲಾನ್; ವೊಡಾಫೋನ್ನಿಂದ ಭರ್ಜರಿ ಆಫರ್
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ