ನಾಳೆ ಬಾಂಗ್ಲಾ ವಿರುದ್ಧ ಬಲಿಷ್ಠ ಟೀಮ್​ ಇಂಡಿಯಾ ಕಣಕ್ಕೆ; ತಂಡದಿಂದ ಸ್ಟಾರ್​ ಆಟಗಾರರಿಗೆ ಕೊಕ್​​

author-image
Ganesh Nachikethu
Updated On
ಬಾಂಗ್ಲಾ ವಿರುದ್ಧ ಟಿ20 ಸರಣಿಗೆ ಬಲಿಷ್ಠ ಟೀಮ್​ ಇಂಡಿಯಾ ಪ್ರಕಟ; ಸ್ಟಾರ್​ ಆಟಗಾರರೇ ಔಟ್​
Advertisment
  • ಇಂದಿನಿಂದಲೇ 2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿ ಶುರು
  • ಐಸಿಸಿ ಮೆಗಾ ಟೂರ್ನಿಯಲ್ಲಿ ಅಬ್ಬರಿಸಲು ಭಾರತ ತಂಡ ಸಜ್ಜು
  • ನಾಳೆ ಟೀಮ್​ ಇಂಡಿಯಾ, ಬಾಂಗ್ಲಾದೇಶ ತಂಡ ಮುಖಾಮುಖಿ

ಇಂದಿನಿಂದಲೇ 2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿ ಶುರುವಾಗಿದೆ. ಪಾಕಿಸ್ತಾನ ಆಯೋಜಿಸಿರೋ ಐಸಿಸಿ ಮೆಗಾ ಟೂರ್ನಿಯಲ್ಲಿ ಅಬ್ಬರಿಸಲು ಎಲ್ಲಾ ತಂಡಗಳು ಸಜ್ಜಾಗಿವೆ.

ಮೊದಲ ಪಂದ್ಯದಲ್ಲಿ ಪಾಕ್ ಹಾಗೂ ನ್ಯೂಜಿಲೆಂಡ್ ತಂಡಗಳು ಕಾದಾಟ ನಡೆಸಿದವು. ನಾಳೆ ಟೀಮ್ ಇಂಡಿಯಾ ಚಾಂಪಿಯನ್ಸ್ ಟ್ರೋಫಿಯ ತನ್ನ ಮೊದಲ ಪಂದ್ಯ ಆಡಲಿದೆ. ವಿಶೇಷ ಎಂದರೆ ಟೀಮ್​ ಇಂಡಿಯಾ ಈ ಟೂರ್ನಿಯ ಎಲ್ಲಾ ಪಂದ್ಯಗಳನ್ನು ದುಬೈನಲ್ಲೇ ಆಡಲಿದೆ.

ಬಾಂಗ್ಲಾ ವಿರುದ್ಧ ಸೆಣಸಾಟ

ಗುರುವಾರ ಮಧ್ಯಾಹ್ನ ದುಬೈನಲ್ಲಿ ನಡೆಯಲಿರೋ ಚಾಂಪಿಯನ್ಸ್​ ಟ್ರೋಫಿ ಮಹತ್ವದ ಪಂದ್ಯದಲ್ಲಿ ಟೀಮ್​ ಇಂಡಿಯಾ, ಬಾಂಗ್ಲಾದೇಶ ತಂಡಗಳು ಮುಖಾಮುಖಿ ಆಗಲಿವೆ. ಟೀಮ್​​​ ಇಂಡಿಯಾ ಗೆಲುವಿನೊಂದಿಗೆ ಶುಭಾರಂಭ ಮಾಡಲು ಎದುರು ನೋಡುತ್ತಿದೆ.

ಪ್ಲೇಯಿಂಗ್​ ಎಲೆವೆನ್​ನಲ್ಲಿ ಯಾರಿಗೆ ಸ್ಥಾನ?

ಮೊದಲ ಪಂದ್ಯದಲ್ಲಿ ಬಾಂಗ್ಲಾ ವಿರುದ್ಧ ಟೀಮ್​ ಇಂಡಿಯಾ ಪರ ಓಪನರ್ಸ್​ ಆಗಿ ಕ್ಯಾಪ್ಟನ್​ ರೋಹಿತ್ ಶರ್ಮಾ, ಶುಭ್ಮನ್​ ಗಿಲ್​ ಕಣಕ್ಕಿಳಿಯಲಿದ್ದಾರೆ. ವಿರಾಟ್‌ ಕೊಹ್ಲಿ, ಶ್ರೇಯಸ್‌ ಅಯ್ಯರ್‌ ಮಿಡಲ್​ ಆರ್ಡರ್​​ನಲ್ಲಿ ಬ್ಯಾಟ್​ ಬೀಸಲಿದ್ದಾರೆ. ಕನ್ನಡಿಗ ಕೆಎಲ್ ರಾಹುಲ್​​ 5ನೇ ಕ್ರಮಾಂಕದಲ್ಲಿ ಕಣಕ್ಕಿಳಿಯುವ ಸಾಧ್ಯತೆ ಇದೆ.

ಆಲ್‌ರೌಂಡರ್ ಸ್ಥಾನದಲ್ಲಿ ಹಾರ್ದಿಕ್ ಪಾಂಡ್ಯ, ಅಕ್ಷರ್‌ ಪಟೇಲ್‌, ರವೀಂದ್ರ ಜಡೇಜಾ ಕಾಣಿಸಿಕೊಳ್ಳಲಿದ್ದಾರೆ. ಇನ್ನು ಕುಲದೀಪ್ ಯಾದವ್ ತಂಡದ ಭಾಗವಾಗಲಿದ್ದಾರೆ. ವೇಗದ ಬೌಲಿಂಗ್ ವಿಭಾಗದಲ್ಲಿ ಮೊಹಮ್ಮದ್‌ ಶಮಿ ಹಾಗೂ ಅರ್ಷದೀಪ್‌ ಸಿಂಗ್‌ ಆಡುವ ಸಾಧ್ಯತೆ ಇದೆ. ಸ್ಟಾರ್​ ವೇಗಿ ಬುಮ್ರಾ, ಪಂತ್​ ತಂಡದಿಂದಲೇ ಹೊರಬಿದ್ದಿದ್ದಾರೆ. ಇದು ಭಾರತ ತಂಡಕ್ಕೆ ಶಾಕಿಂಗ್​ ನ್ಯೂಸ್​ ಆಗಿದೆ.

ಟೀಮ್​ ಇಂಡಿಯಾ ಪ್ಲೇಯಿಂಗ್​ ಎಲೆವೆನ್​ ಹೀಗಿದೆ!

ರೋಹಿತ್ ಶರ್ಮಾ (ಕ್ಯಾಪ್ಟನ್)​, ಶುಭ್ಮನ್​ ಗಿಲ್, ​ವಿರಾಟ್‌ ಕೊಹ್ಲಿ, ಶ್ರೇಯಸ್‌ ಅಯ್ಯರ್‌, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ಅಕ್ಷರ್‌ ಪಟೇಲ್‌, ರವೀಂದ್ರ ಜಡೇಜಾ, ಕುಲದೀಪ್ ಯಾದವ್, ಮೊಹಮ್ಮದ್‌ ಶಮಿ ಹಾಗೂ ಅರ್ಷದೀಪ್‌ ಸಿಂಗ್‌.

ಇದನ್ನೂ ಓದಿ:ನಂಬಿದ್ರೆ ನಂಬಿ ಬಿಟ್ರೆ ಬಿಡಿ: 21 ವರ್ಷ ಯುವಕನ ಶ್ವಾಸಕೋಶದಲ್ಲೇ ಸಿಲುಕಿದ್ದ ಪೆನ್ ಕ್ಯಾಪ್; ಆಮೇಲೇನಾಯ್ತು?

ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್‌ಫಸ್ಟ್‌ಚಾನೆಲ್​​ನಲ್ಲಿ ‘ರನ್ ಭೂಮಿ’ ವೀಕ್ಷಿಸಿ

Advertisment