/newsfirstlive-kannada/media/post_attachments/wp-content/uploads/2023/12/Team-India-6.jpg)
ಇತ್ತೀಚೆಗೆ ಗ್ವಾಲಿಯರ್ ಇಂಟರ್ ನ್ಯಾಷನಲ್ ಸ್ಟೇಡಿಯಮ್ನಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ಬಾಂಗ್ಲಾದೇಶದ ವಿರುದ್ಧ ಟೀಮ್ ಇಂಡಿಯಾ 7 ವಿಕೆಟ್ಗಳ ಭರ್ಜರಿ ಜಯ ಸಾಧಿಸಿತ್ತು. ನಾಳೆ ಡೆಲ್ಲಿ ಅರುಣ್ ಜೇಟ್ಲಿ ಸ್ಟೇಡಿಯಮ್ನಲ್ಲಿ 2ನೇ ಮಹತ್ವದ ಟಿ20 ಪಂದ್ಯ ನಡೆಯಲಿದ್ದು, ಟೀಮ್ ಇಂಡಿಯಾ ಮತ್ತು ಬಾಂಗ್ಲಾದೇಶ ತಂಡಗಳು ಮುಖಾಮುಖಿ ಆಗಲಿವೆ.
ಇನ್ನು, 2ನೇ ಪಂದ್ಯದಲ್ಲಿ ಹೇಗಾದ್ರೂ ಮಾಡಿ ಗೆಲ್ಲಲೇಬೇಕು ಎಂದು ಬಾಂಗ್ಲಾದೇಶ ಪಣ ತೊಟ್ಟಿದೆ. ಹಾಗಾಗಿ ಪ್ಲೇಯಿಂಗ್ ಎಲೆವೆನ್ನಲ್ಲಿ ಭಾರೀ ಬದಲಾವಣೆ ಮಾಡಲಿದೆ. ಇದಕ್ಕೆ ಕೌಂಟರ್ ನೀಡಲು ಮುಂದಾದ ಟೀಮ್ ಇಂಡಿಯಾ ನಾಳೆ ಗೆದ್ದು ಟಿ20 ಟ್ರೋಫಿ ಮಡಿಗೇರಿಸಿಕೊಳ್ಳಲು ಕಾತುರದಿಂದ ಕಾಯುತ್ತಿದೆ.
ಪಂದ್ಯ ಸಂಜೆ 7 ಗಂಟೆಗೆ ಶುರುವಾಗಲಿದೆ. ಸದ್ಯಕ್ಕೆ ಸಿಕ್ಕಿರೋ ಮಾಹಿತಿ ಪ್ರಕಾರ ಪಂದ್ಯಕ್ಕೆ ಯಾವುದೇ ಮಳೆ ಅಡ್ಡಿ ಇಲ್ಲ ಎಂದು ಭಾರತದ ಹವಾಮಾನ ಇಲಾಖೆ ಭವಿಷ್ಯ ನುಡಿದಿದೆ. ಹಾಗಾಗಿ ಕ್ಯಾಪ್ಟನ್ ಸೂರ್ಯಕುಮಾರ್ ಯಾದವ್ ನೇತೃತ್ವದ ಟೀಮ್ ಇಂಡಿಯಾ ಸರಣಿ ಗೆಲ್ಲಬೇಕು ಎಂದು ಭರ್ಜರಿ ಸ್ಟ್ರಾಟರ್ಜಿ ಮಾಡಿಕೊಂಡಿದೆ. ಕಳೆದ ಪಂದ್ಯದಲ್ಲೂ ಗೆದ್ದಿರೋ ಟೀಮ್ ಇಂಡಿಯಾದ ಪ್ಲೇಯಿಂಗ್ ಎಲೆವೆನ್ನಲ್ಲಿ 2ನೇ ಪಂದ್ಯಕ್ಕೆ ಯಾವುದೇ ಬದಲಾವಣೆ ಇಲ್ಲ ಎಂದು ವರದಿಯಾಗಿದೆ.
ಬಾಂಗ್ಲಾ ವಿರುದ್ಧ 2ನೇ ಟಿ20 ಪಂದ್ಯಕ್ಕೆ ಟೀಮ್ ಇಂಡಿಯಾ ಹೀಗಿದೆ!
ಅಭಿಶೇಕ್ ಶರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ನಿತೀಶ್ ಕುಮಾರ್ ರೆಡ್ಡಿ, ಹಾರ್ದಿಕ್ ಪಾಂಡ್ಯ, ರಿಯಾನ್ ಪರಾಗ್, ರಿಂಕು ಸಿಂಗ್, ವಾಷಿಂಗ್ಟನ್ ಸುಂದರ್, ವರುಣ್ ಚಕ್ರವರ್ತಿ, ಅರ್ಷ್ದೀಪ್ ಸಿಂಗ್, ಮಯಾಂಕ್ ಯಾದವ್.
ಇದನ್ನೂ ಓದಿ:ಗೆಲ್ಲೋ ಮುಂಚೆ ಜಿಲೇಬಿ ಹಂಚಿ ಸಂಭ್ರಮಿಸಿದ್ದ ಕಾಂಗ್ರೆಸ್ಗೆ ಹೀನಾಯ ಸೋಲು; ರಾಹುಲ್ ಗಾಂಧಿ ಫುಲ್ ಟ್ರೋಲ್
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ