ಚಾಂಪಿಯನ್ಸ್​ ಟ್ರೋಫಿಗೆ ಗಂಭೀರ್​​ ಕೃಪೆ ಯಾರ ಮೇಲೆ? ಟೀಮ್​ ಇಂಡಿಯಾದಲ್ಲಿ ಯಾರಿಗೆಲ್ಲಾ ಸ್ಥಾನ?

author-image
Ganesh Nachikethu
Updated On
ಚಾಂಪಿಯನ್ಸ್​ ಟ್ರೋಫಿಗೆ ಗಂಭೀರ್​​ ಕೃಪೆ ಯಾರ ಮೇಲೆ? ಟೀಮ್​ ಇಂಡಿಯಾದಲ್ಲಿ ಯಾರಿಗೆಲ್ಲಾ ಸ್ಥಾನ?
Advertisment
  • ಬಹುನಿರೀಕ್ಷಿತ ಐಸಿಸಿ ಚಾಂಪಿಯನ್ಸ್ ಟ್ರೋಫಿ 2025ರ ಟೂರ್ನಿ
  • ಟೂರ್ನಿ ಆರಂಭಕ್ಕೆ ಇನ್ನೇನು ಒಂದೂವರೆ ತಿಂಗಳು ಮಾತ್ರ ಬಾಕಿ
  • 3 ದಿನದಲ್ಲಿ ಚಾಂಪಿಯನ್ಸ್ ಟ್ರೋಫಿಗೆ ತಂಡ ಪ್ರಕಟವಾಗಬೇಕು!

ಬಹುನಿರೀಕ್ಷಿತ ಐಸಿಸಿ ಚಾಂಪಿಯನ್ಸ್ ಟ್ರೋಫಿ 2025ರ ಟೂರ್ನಿ ಆರಂಭಕ್ಕೆ ಇನ್ನೇನು ಒಂದೂವರೆ ತಿಂಗಳು ಮಾತ್ರ ಬಾಕಿ ಇದೆ. ಈ ಮೆಗಾ ಟೂರ್ನಿಗೆ ಎಲ್ಲಾ ರೀತಿಯ ಸಿದ್ಧತೆಗಳನ್ನು ಶುರುವಾಗಿವೆ. ಇನ್ನೂ 3 ದಿನದಲ್ಲಿ ಚಾಂಪಿಯನ್ಸ್ ಟ್ರೋಫಿಗೆ ಎಲ್ಲಾ ತಂಡಗಳು ಪ್ರಕಟಿಸಬೇಕು ಎಂದು ಐಸಿಸಿ ಗಡುವು ನೀಡಿದೆ.

ಇನ್ನು, ಬಿಸಿಸಿಐ ಕೂಡ ಬಲಿಷ್ಠ ಟೀಮ್​ ಇಂಡಿಯಾ ಪ್ರಕಟ ಮಾಡಬೇಕಿದೆ. ಇದರ ಭಾಗವಾಗಿ ಶನಿವಾರ ಬಿಸಿಸಿಐ ಸೆಲೆಕ್ಷನ್​ ಕಮಿಟಿ ಸಭೆ ನಡೆಸಲಿದೆ. ಟೀಮ್​ ಇಂಡಿಯಾದಲ್ಲಿ ಸ್ಥಾನಕ್ಕಾಗಿ ಸಾಕಷ್ಟು ಆಟಗಾರರ ಮಧ್ಯೆ ಪೈಪೋಟಿ ನಡೆಯುತ್ತಿದೆ. ಮುಖ್ಯ ಕೋಚ್​ ಗಂಭೀರ್​​ ಕೃಪೆ ಯಾರ ಮೇಲಿದೆ? ಅನ್ನೋ ಚರ್ಚೆ ಶುರುವಾಗಿದೆ.

ಪ್ಲೇಯಿಂಗ್​​ ಎಲೆವೆನ್​ ಆಯ್ಕೆ ಸವಾಲ್​​

ಚಾಂಪಿಯನ್ಸ್ ಟ್ರೋಫಿಗೆ ಟೀಮ್ ಇಂಡಿಯಾ ಪ್ಲೇಯಿಂಗ್​​ ಎಲೆವೆನ್ ಆಯ್ಕೆ ಮಾಡೋದು ಅಷ್ಟು ಸುಲಭವಲ್ಲ. ಇದಕ್ಕಾಗಿ ಬಿಸಿಸಿಐ ಸೆಲೆಕ್ಷನ್​ ಕಮಿಟಿ ಮತ್ತು ಗೌತಮ್ ಗಂಭೀರ್ ಮಹತ್ವದ ನಿರ್ಧಾರ ಕೈಗೊಳ್ಳಬೇಕಿದೆ.

ಯಾರಿಗೆ ಮಣೆ?

ಚಾಂಪಿಯನ್ಸ್ ಟ್ರೋಫಿಯಲ್ಲಿ ರೋಹಿತ್ ಶರ್ಮಾ ಮತ್ತು ಶುಭ್ಮನ್​ ಗಿಲ್​ ಓಪನಿಂಗ್​ ಮಾಡಬಹುದು. ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ 3ನೇ ಸ್ಥಾನದಲ್ಲಿ ಬ್ಯಾಟಿಂಗ್ ಮಾಡಬಹುದು. ಶ್ರೇಯಸ್ ಅಯ್ಯರ್ 4ನೇ ಸ್ಥಾನ ಮತ್ತು ಕೆಎಲ್ ರಾಹುಲ್ ಐದನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವ ಅವಕಾಶ ಪಡೆಯಬಹುದು.

ಹಾರ್ದಿಕ್ ಪಾಂಡ್ಯ ಚಾಂಪಿಯನ್ಸ್ ಟ್ರೋಫಿಯಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ಸ್ಪಿನ್ ಬೌಲರ್‌ಗಳಾಗಿ ಅಕ್ಸರ್ ಪಟೇಲ್ ಮತ್ತು ರವೀಂದ್ರ ಜಡೇಜಾ ಪ್ಲೇಯಿಂಗ್ ಇಲೆವೆನ್‌ನಲ್ಲಿ ಇರಬಹುದು. ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್ ಮತ್ತು ಜಸ್ಪ್ರೀತ್ ಬುಮ್ರಾ ಆಡುವ ಹನ್ನೊಂದರಲ್ಲಿ ಅವಕಾಶ ಪಡೆಯಬಹುದು.

ಟೀಮ್​ ಇಂಡಿಯಾ ಪ್ಲೇಯಿಂಗ್​ ಇಲೆವೆನ್​ ಹೀಗಿರಲಿದೆ!

ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಸರ್ ಪಟೇಲ್, ಮೊಹಮ್ಮದ್ ಶಮಿ, ಅರ್ಷ್‌ದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ.

ಇದನ್ನೂ ಓದಿ:‘ಗಂಭೀರ್​​ ಒಬ್ಬ ಮೋಸಗಾರ’- ಮುಖ್ಯ ಕೋಚ್​​ ವಿರುದ್ಧ ಸ್ಟಾರ್​ ಕ್ರಿಕೆಟರ್​​ ಆಕ್ರೋಶ

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment