Advertisment

ಚಾಂಪಿಯನ್ಸ್​ ಟ್ರೋಫಿ ಗೆದ್ದ ಭಾರತ ತಂಡಕ್ಕೆ ಸಿಕ್ಕಿದ್ದು ಎಷ್ಟು ಕೋಟಿ ರೂಪಾಯಿ..?

author-image
Ganesh
Updated On
ಚಾಂಪಿಯನ್ಸ್​ ಟ್ರೋಫಿ ಗೆದ್ದ ಭಾರತ ತಂಡಕ್ಕೆ ಸಿಕ್ಕಿದ್ದು ಎಷ್ಟು ಕೋಟಿ ರೂಪಾಯಿ..?
Advertisment
  • ಟೀಮ್ ಇಂಡಿಯಾ ಚಾಂಪಿಯನ್ಸ್ ಟ್ರೋಫಿ ಪ್ರಶಸ್ತಿ ಗೆದ್ದಿದೆ
  • ನ್ಯೂಜಿಲೆಂಡ್​ ತಂಡಕ್ಕೆ 9.74 ಕೋಟಿ ರೂಪಾಯಿ ಹಣ ಸಿಕ್ಕಿದೆ
  • ಸೆಮೀಸ್​ನಲ್ಲಿ ಸೋತ ತಂಡಕ್ಕೂ ಕೋಟಿ ಕೋಟಿ ಹಣ

ಟೀಮ್ ಇಂಡಿಯಾ ಚಾಂಪಿಯನ್ಸ್ ಟ್ರೋಫಿ ಪ್ರಶಸ್ತಿ ಗೆದ್ದಿದೆ. ಟ್ರೋಫಿ ಗೆದ್ದ ಬೆನ್ನಲ್ಲೇ ತಂಡಕ್ಕೆ ಕೋಟ್ಯಂತರ ರೂಪಾಯಿ ಬಹುಮಾನ ಹರಿದು ಬಂದಿದೆ. ಫೈನಲ್‌ನಲ್ಲಿ ಭಾರತ ತಂಡವು ನ್ಯೂಜಿಲೆಂಡ್ ಎದುರಿಸಿತು. ಸೋಲಿನ ಹೊರತಾಗಿಯೂ ನ್ಯೂಜಿಲೆಂಡ್‌ಗೆ ಭಾರೀ ಮೊತ್ತದ ಹಣ ಸಿಕ್ಕಿದೆ. ಸೆಮಿಫೈನಲ್ ತಲುಪಿದ ತಂಡಗಳಿಗೂ ಬಹುಮಾನ ಹಣ ನೀಡಲಾಗಿದೆ.

Advertisment

ಎಷ್ಟು ಕೋಟಿ ಹಣ ಸಿಕ್ಕಿದೆ..?

ರೋಹಿತ್ ಶರ್ಮಾ ನಾಯಕತ್ವದ ಟೀಮ್ ಇಂಡಿಯಾ 20 ಕೋಟಿ ರೂಪಾಯಿ ಬಹುಮಾನ ಪಡೆದಿದೆ. ನ್ಯೂಜಿಲೆಂಡ್ ತಂಡಕ್ಕೆ 9.74 ಕೋಟಿ ರೂಪಾಯಿ ಬಹುಮಾನ ಸಿಕ್ಕಿದೆ. ಸೆಮಿಫೈನಲ್‌ನಲ್ಲಿ ಸೋತ ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ತಂಡಕ್ಕೆ ತಲಾ 4.87 ಕೋಟಿ ರೂಪಾಯಿ ಸಿಕ್ಕಿದೆ.

ಇದನ್ನೂ ಓದಿ: ನಿವೃತ್ತಿ ಬಗ್ಗೆ ಮಾತನಾಡಿ ಸ್ಪಷ್ಟನೆ ಕೊಟ್ಟ ಕ್ಯಾಪ್ಟನ್ ರೋಹಿತ್ ಶರ್ಮಾ..!

publive-image

ಅಫ್ಘಾನ್, ಬಾಂಗ್ಲಾಗೂ ಹಣ..!

ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶ ತಂಡಗಳು ಗುಂಪು ಹಂತಕ್ಕೆ ಸೀಮಿತವಾಗಿದ್ದವು. ಆದರೂ ಎರಡು ತಂಡಗಳು ಹಣ ಪಡೆದಿವೆ. ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನ ತಲಾ 3 ಕೋಟಿಯಷ್ಟು ಹಣ ಪಡೆದಿವೆ. ಟೂರ್ನಿಯಲ್ಲಿ ಏಳನೇ ಮತ್ತು ಎಂಟನೇ ಸ್ಥಾನ ಪಡೆದ ಪಾಕಿಸ್ತಾನ ಮತ್ತು ಇಂಗ್ಲೆಂಡ್ ತಂಡಗಳಿಗೆ 1.22 ಕೋಟಿ ರೂಪಾಯಿ ಆರ್ಥಿಕ ನೆರವು ಸಿಕ್ಕಿದೆ.

Advertisment

2025ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ಅದ್ಭುತ ಪ್ರದರ್ಶನ ನೀಡಿತ್ತು. ಒಂದೇ ಒಂದು ಪಂದ್ಯದಲ್ಲಿಯೂ ಸೋಲನ್ನು ಎದುರಿಸಲಿಲ್ಲ. ಗ್ರೂಪ್ ಹಂತದ ಪಂದ್ಯಗಳಲ್ಲಿ ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ನ್ಯೂಜಿಲೆಂಡ್ ತಂಡಗಳನ್ನು ಸೋಲಿಸಿತ್ತು. ಸೆಮಿಫೈನಲ್‌ನಲ್ಲಿ ಆಸ್ಟ್ರೇಲಿಯಾವನ್ನು ಸೋಲಿಸಿತ್ತು. ಫೈನಲ್‌ನಲ್ಲಿ ನ್ಯೂಜಿಲೆಂಡ್ ಸೋಲಿಸಿ ಪ್ರಶಸ್ತಿ ಗೆದ್ದುಕೊಂಡಿತು.

ಇದನ್ನೂ ಓದಿ: ಕ್ರಿಕೆಟ್​ ಜಗತ್ತಿನ ರಿಯಲ್ ​​ಕಿಂಗ್ ಟೀಮ್​ ಇಂಡಿಯಾ.. ಹಿಟ್​​ಮ್ಯಾನ್​ ರೋಹಿತ್ ಕ್ಯಾಪ್ಟನ್ಸಿ ಹೇಗಿರುತ್ತೆ?

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment
Advertisment
Advertisment