/newsfirstlive-kannada/media/post_attachments/wp-content/uploads/2025/03/Shreyas-Iyer.jpg)
ಸದ್ಯ ನಡೆಯುತ್ತಿರೋ ಬಹುನಿರೀಕ್ಷಿತ 2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ನಾಕೌಟ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡಕ್ಕೆ ಟೀಮ್ ಇಂಡಿಯಾ 250 ರನ್ಗಳ ಗುರಿ ನೀಡಿದೆ.
ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡಿದ ಟೀಮ್ ಇಂಡಿಯಾ ಪರ ಓಪನಿಂಗ್ ಮಾಡಿದ ಕ್ಯಾಪ್ಟನ್ ರೋಹಿತ್ ಶರ್ಮಾ ಮತ್ತು ಶುಭ್ಮನ್ ಗಿಲ್ ಬೇಗ ಔಟ್ ಆದರು. ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಟೀಮ್ ಇಂಡಿಯಾದ ಟಾಪ್ ಆರ್ಡರ್ ಬ್ಯಾಟರ್ಸ್ ವೈಫಲ್ಯ ಅನುಭವಿಸಿದ್ರು.
ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್ಸ್ ಆದ ರೋಹಿತ್ ಶರ್ಮಾ (15), ಶುಭಮನ್ ಗಿಲ್ (2) ರನ್ ಗಳಿಸಿ ವಿಕೆಟ್ ಒಪ್ಪಿಸಿದ್ರು. ತಮ್ಮ ಏಕದಿನ ವೃತ್ತಿ ಜೀವನದ 300ನೇ ಏಕದಿನ ಪಂದ್ಯವನ್ನು ಆಡಿದ ಕೊಹ್ಲಿ ಕೇವಲ 11 ರನ್ಗೆ ಔಟಾದ್ರು.
ಕೇವಲ 30 ರನ್ಗೆ 3 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದ ಟೀಮ್ ಇಂಡಿಯಾಗೆ ಆಸರೆ ಆಗಿದ್ದು ಶ್ರೇಯಸ್ ಅಯ್ಯರ್ ಮತ್ತು ಅಕ್ಷರ್ ಪಟೇಲ್. ಮಿಡ್ಲ್ ಓವರ್‌ನಲ್ಲಿ ವಿಕೆಟ್ ಬೀಳದಂತೆ ಬ್ಯಾಟ್ ಬೀಸಿದರು. ಸ್ಥಿರ ಬ್ಯಾಟಿಂಗ್ ಪ್ರದರ್ಶನ ನೀಡಿದ ಅಕ್ಷರ್ ಪಟೇಲ್ 42 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು.
ಮಿಡಲ್ ಆರ್ಡರ್ನಲ್ಲಿ ಶ್ರೇಯಸ್ ಅಬ್ಬರ
ಮಿಡ್ಲ್ ಆರ್ಡರ್ ಬ್ಯಾಟರ್ ಶ್ರೇಯಸ್ ಅಯ್ಯರ್ ಅಬ್ಬರಿಸಿದರು. ಇವರು 98 ಎಸೆತಗಳಲ್ಲಿ 4 ಬೌಂಡರಿ, 2 ಸಿಕ್ಸರ್ ಸಹಾಯದಿಂದ 79 ರನ್ ಸಿಡಿಸಿದರು. ತಾಳ್ಮೆ ಕಳೆದುಕೊಂಡು ಇಲ್ಲದ ಶಾಟ್ ಹೊಡೆಯಲು ಹೋಗಿ ಔಟ್ ಆದರು. ರಾಹುಲ್ 23 ರನ್ ಬಾರಿಸಿ ಪೆವಿಲಿಯನ್ ಸೇರಿದರು.
ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಜವಾಬ್ದಾರಿಯುತ ಆಟವಾಡಿದ್ರು. 45 ರನ್ ಚಚ್ಚಿದ ಇವರಿಗೆ ಜಡೇಜಾ 16 ರನ್ ಬಾರಿಸಿದರು. ಟೀಮ್ ಇಂಡಿಯಾವನ್ನು ನ್ಯೂಜಿಲೆಂಡ್ 249 ರನ್‌ಗಳಿಗೆ ಕಟ್ಟಿ ಹಾಕಿತು.
ಇದನ್ನೂ ಓದಿ:ಖೋ-ಖೋ ಸಂಸ್ಥೆಯ ಕಾರ್ಯಕಾರಿ ಸಮಿತಿಗೆ ಅಧ್ಯಕ್ಷರಾಗಿ ಲೋಕೇಶ್ವರ ಅವಿರೋಧ ಆಯ್ಕೆ
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ