/newsfirstlive-kannada/media/post_attachments/wp-content/uploads/2023/11/Travis-Head.jpg)
ಟಾಸ್ ಗೆದ್ದು ಬ್ಯಾಟಿಂಗ್ ಶುರು ಮಾಡಿರೋ ಆಸ್ಟ್ರೇಲಿಯಾ ಪರ ಸ್ಟಾರ್ ಬ್ಯಾಟರ್ ಟ್ರಾವಿಸ್ ಹೆಡ್ ಇನ್ನಿಂಗ್ಸ್ ಆರಂಭಿದರು. ಆರಂಭದಲ್ಲಿ ಬಿರುಸಿನ ಬ್ಯಾಟಿಂಗ್ ಮಾಡುವ ಮೂಲಕ ಟ್ರಾವಿಸ್ ಹೆಡ್ ಭಾರತ ತಂಡಕ್ಕೆ ತಲೆನೋವಾಗಿ ಪರಿಣಮಿಸಿದರು.
ಇನ್ನು, ಟ್ರಾವಿಸ್ ಹೆಡ್ ದೊಡ್ಡ ಇನಿಂಗ್ಸ್ ಕಟ್ಟೋ ಸೂಚನೆ ನೀಡಿದರು. ಅಷ್ಟೇ ಅಲ್ಲ ಕುಲ್ದೀಪ್ ಯಾದವ್ ಮತ್ತು ಹಾರ್ದಿಕ್ ಪಾಂಡ್ಯ ಅವರಿಗೆ ಹೆಡ್ ಬ್ಯಾಕ್ ಟು ಬ್ಯಾಕ್ ಸಿಕ್ಸರ್ ಸಿಡಿಸಿದರು. ಟ್ರಾವಿಸ್ ಹೆಡ್ ಬ್ಯಾಟಿಂಗ್ ಅಬ್ಬರಕ್ಕೆ ಟೀಮ್ ಇಂಡಿಯಾ ಬೆಚ್ಚಿಬಿದ್ದಿತ್ತು.
ಟೀಮ್ ಇಂಡಿಯಾ ಸ್ಪಿನ್ನರ್ ವರುಣ್ ಚಕ್ರವರ್ತಿ 9ನೇ ಓವರ್ ಎಸೆದರು. ಈ ಓವರ್ನಲ್ಲಿ ಟ್ರಾವಿಸ್ ಹೆಡ್ ಶುಭ್ಮನ್ ಗಿಲ್ಗೆ ಕ್ಯಾಚ್ ನೀಡಿದರು. ಆಗ ಆಸ್ಟ್ರೇಲಿಯಾ 10 ಓವರ್‌ಗಳಲ್ಲಿ 2 ವಿಕೆಟ್‌ಗೆ 63 ರನ್ ಸೇರಿಸಿದೆ.
ಟೀಮ್ ಇಂಡಿಯಾ ಹೀಗಿದೆ!
ರೋಹಿತ್ ಶರ್ಮಾ (ಕ್ಯಾಪ್ಟನ್), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಕುಲ್‌ದೀಪ್ ಯಾದವ್, ವರುಣ್ ಚಕ್ರವರ್ತಿ.
ಆಸ್ಟ್ರೇಲಿಯಾ ತಂಡ ಹೇಗಿದೆ!
ಕೂಪರ್ ಕಾನೊಲಿ, ಟ್ರಾವಿಸ್ ಹೆಡ್, ಸ್ಟೀವನ್ ಸ್ಮಿತ್ (ನಾಯಕ), ಮಾರ್ನಸ್ ಲಂಬುಶೇನ್, ಜೋಶ್ ಇಂಗ್ಲಿಸ್ (ವಿಕೆಟ್ ಕೀಪರ್), ಅಲೆಕ್ಸ್ ಕ್ಯಾರಿ, ಗ್ಲೆನ್ ಮ್ಯಾಕ್ಸ್‌ವೆಲ್, ಬೆನ್ ದ್ವಾರ್ಶುಯಿಸ್, ನಾಥನ್ ಎಲ್ಲಿಸ್, ಆಡಮ್ ಜಂಪಾ, ತನ್ವೀರ್ ಸಂಘ.
ಇದನ್ನೂ ಓದಿ:ಆಸಿಸ್ ತಂಡದಲ್ಲಿ ಭಾರೀ ಬದಲಾವಣೆ; ಬಲಿಷ್ಠ ತಂಡದೊಂದಿಗೆ ಫೀಲ್ಡ್ಗೆ ಇಳಿದ ಟೀಂ ಇಂಡಿಯಾ..!
ವಿಶೇಷ ಸೂಚನೆ: ಕ್ರಿಕೆಟ್ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್