ಪಂದ್ಯಕ್ಕೂ ಮುನ್ನವೇ ಟೀಮ್​ ಇಂಡಿಯಾಗೆ ಬಿಗ್​ ಶಾಕ್​; ತಂಡದಿಂದಲೇ ಸ್ಟಾರ್​ ಆಲ್​ರೌಂಡರ್​ ಔಟ್​

author-image
Ganesh Nachikethu
Updated On
ಪಂದ್ಯಕ್ಕೂ ಮುನ್ನವೇ ಟೀಮ್​ ಇಂಡಿಯಾಗೆ ಬಿಗ್​ ಶಾಕ್​; ತಂಡದಿಂದಲೇ ಸ್ಟಾರ್​ ಆಲ್​ರೌಂಡರ್​ ಔಟ್​
Advertisment
  • ಟೀಮ್​ ಇಂಡಿಯಾ, ಬಾಂಗ್ಲಾ ನಡುವಿನ ಟೆಸ್ಟ್​ ಸರಣಿ ಮುಕ್ತಾಯ
  • ಅಕ್ಟೋಬರ್​​ 6ನೇ ತಾರೀಕಿನಿಂದ ಮಹತ್ವದ ಟಿ20 ಸರಣಿ ಶುರು..!
  • ಮೊದಲ ಪಂದ್ಯಕ್ಕೂ ಮುನ್ನವೇ ಕೈ ಕೊಟ್ಟ ಸ್ಟಾರ್​​ ಪ್ಲೇಯರ್​ ಯಾರು?

ಇಂದು ಟೀಮ್​ ಇಂಡಿಯಾ, ಬಾಂಗ್ಲಾದೇಶದ ನಡುವೆ ಮೊದಲ ಟಿ20 ಪಂದ್ಯ ನಡೆಯಲಿದೆ. ಈ ಮಹತ್ವದ ಪಂದ್ಯಕ್ಕೆ ಗ್ವಾಲಿಯರ್​​ ಇಂಟರ್​ ನ್ಯಾಷನಲ್​ ಕ್ರಿಕೆಟ್​ ಸ್ಟೇಡಿಯಮ್​ ಸಾಕ್ಷಿಯಾಗಲಿದೆ. ಈ ಮಧ್ಯೆ ಟೀಮ್​ ಇಂಡಿಯಾಗೆ ಶಾಕಿಂಗ್​ ನ್ಯೂಸ್​ ಒಂದಿದೆ.

ಪಂದ್ಯಕ್ಕೂ ಮುನ್ನವೇ ಟೀಮ್ ಇಂಡಿಯಾದ ಸ್ಟಾರ್‌ ಆಲ್‌ರೌಂಡರ್‌ ಗಾಯಕ್ಕೆ ತುತ್ತಾಗಿದ್ದಾರೆ. ತೀವ್ರ ಗಾಯಕ್ಕೆ ತುತ್ತಾದ ಕಾರಣ ತಂಡದಿಂದಲೇ ಇವರು ಹೊರಬಿದ್ದಿದ್ದಾರೆ. ಗಾಯ ಮಾಡಿಕೊಂಡು ತಂಡದಿಂದ ಹೊರನಡೆದ ಪ್ಲೇಯರ್​​ ಮತ್ಯಾರು ಅಲ್ಲ ಶಿವಂ ದುಬೆ.

ಅಸಲಿಗೆ ಆಗಿದ್ದೇನು?

ಇತ್ತೀಚಿಗೆ ವೆಸ್ಟ್‌ ಇಂಡೀಸ್ ಹಾಗೂ ಯುಎಸ್​ನಲ್ಲಿ ನಡೆದ ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ ಪಡೆದ ಆಲ್‌ರೌಂಡರ್ ಶಿವಂ ದುಬೆ. ಕಳೆದ ಕೆಲವು ತಿಂಗಳುಗಳಿಂದ ಮಾತ್ರ ಶಿವಂ ದುಬೆ ಟೀಮ್ ಇಂಡಿಯಾ ಪರ ಆಡುತ್ತಿದ್ದಾರೆ. ಬಾಂಗ್ಲಾದೇಶದ ವಿರುದ್ಧದ ಪಂದ್ಯಕ್ಕೂ ಮುನ್ನ ಶಿವಂ ದುಬೆ ಅಭ್ಯಾಸದ ವೇಳೆ ಗಾಯಕ್ಕೆ ತುತ್ತಾಗಿದ್ದಾರೆ. ಇವರ ಗಾಯದಿಂದ ಟೀಮ್ ಇಂಡಿಯಾ ಬೌಲಿಂಗ್‌ ವಿಭಾಗಕ್ಕೆ ದೊಡ್ಡ ಪೆಟ್ಟು ಬಿದ್ದಿದೆ.

ಭಾರತ ಸಂಭಾವ್ಯ ಪ್ಲೇಯಿಂಗ್-11

ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್ (ನಾಯಕ), ರಿಯಾನ್ ಪರಾಗ್, ಹಾರ್ದಿಕ್ ಪಾಂಡ್ಯ, ರಿಂಕು ಸಿಂಗ್, ಶಿವಂ ದುಬೆ, ರವಿ ಬಿಷ್ಣೋಯ್, ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್, ಮಯಾಂಕ್ ಯಾದವ್.

ಇದನ್ನೂ ಓದಿ: ಬಾಂಗ್ಲಾ ವಿರುದ್ಧ ಟಿ20; ಟೀಮ್​ ಇಂಡಿಯಾಗೆ ಬೆಂಕಿ ಬೌಲರ್​​ ಎಂಟ್ರಿ; ಭಾರತಕ್ಕೆ ಬಂತು ಆನೆಬಲ!

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment