Advertisment

ಆಸ್ಟ್ರೇಲಿಯಾ ವಿರುದ್ಧ ಮಹತ್ವದ ಟೆಸ್ಟ್​; ಟೀಮ್​ ಇಂಡಿಯಾಗೆ ಸ್ಟಾರ್​ ಪ್ಲೇಯರ್​ ಎಂಟ್ರಿ

author-image
Ganesh Nachikethu
Updated On
ಬಾಕ್ಸಿಂಗ್ ಡೇ ಟೆಸ್ಟ್​ನಲ್ಲಿ ಟೀಮ್ ಇಂಡಿಯಾಕ್ಕೆ ಕ್ರಿಸ್​ಮಸ್ ಗಿಫ್ಟ್ ಸಿಗೋದು​ ಗ್ಯಾರಂಟಿನಾ?
Advertisment
  • ಟೀಮ್​ ಇಂಡಿಯಾ, ಆಸ್ಟ್ರೇಲಿಯಾ ಮಧ್ಯೆ 2ನೇ ಟೆಸ್ಟ್​!
  • ಭಾರತ ಕ್ರಿಕೆಟ್​ ತಂಡಕ್ಕೆ ಸ್ಟಾರ್​​ ಪ್ಲೇಯರ್​ ಎಂಟ್ರಿ ಕೊಟ್ರು
  • 2ನೇ ಪಂದ್ಯಕ್ಕೆ ಟೀಮ್​ ಇಂಡಿಯಾಗೆ ಬಂತು ಆನೆಬಲ

ಇತ್ತೀಚೆಗೆ ಆಸ್ಟ್ರೇಲಿಯಾ ವಿರುದ್ಧ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್​ ಇಂಡಿಯಾ 295 ರನ್​ಗಳ ಭರ್ಜರಿ ಜಯ ಸಾಧಿಸಿದೆ. ಇದರೊಂದಿಗೆ ಟೀಮ್​​ ಇಂಡಿಯಾ ಐಸಿಸಿ ವಿಶ್ವಟೆಸ್ಟ್ ಚಾಂಪಿಯನ್ಶಿಪ್ ಪಾಯಿಂಟ್ಸ್ ಟೇಬಲ್​​ನಲ್ಲಿ ಮೊದಲ ಸ್ಥಾನಕ್ಕೇರಿದೆ.

Advertisment

ಒಂದೆಡೆ ಟೀಮ್​ ಇಂಡಿಯಾ ಮೊದಲ ಸ್ಥಾನಕ್ಕೇರಿದ್ರೆ, ಇನ್ನೊಂದೆಡೆ ಆಸ್ಟ್ರೇಲಿಯಾಗೆ ಭಾರೀ ಹಿನ್ನಡೆ ಆಗಿದೆ. ಪ್ಯಾಟ್ ಕಮ್ಮಿನ್ಸ್ ನೇತೃತ್ವದ ಕಾಂಗರೂ ಪಡೆ 2ನೇ ಸ್ಥಾನಕ್ಕೆ ಕುಸಿದಿದೆ. ಪರ್ತ್ ಟೆಸ್ಟ್ ಪಂದ್ಯದ ನಂತರ ಡಬ್ಲ್ಯುಟಿಸಿ ಫೈನಲ್ ತಲುಪುವ ಸನ್ನಿವೇಶ ಬದಲಾಗಿದೆ.

ರೋಹಿತ್ ಶರ್ಮಾ ನಾಯಕತ್ವದ ಟೀಮ್​ ಇಂಡಿಯಾಗೆ ಆಸ್ಟ್ರೇಲಿಯಾ ವಿರುದ್ಧ ಇನ್ನೂ 4 ಟೆಸ್ಟ್ ಪಂದ್ಯಗಳು ಮಾತ್ರ ಬಾಕಿ ಉಳಿದಿವೆ. ಇದಲ್ಲದೆ, ಆಸ್ಟ್ರೇಲಿಯಾ ತವರಿನಲ್ಲಿ ಭಾರತದ ವಿರುದ್ಧ ನಾಲ್ಕು ಟೆಸ್ಟ್ ಮತ್ತು ಶ್ರೀಲಂಕಾದಲ್ಲಿ ಎರಡು ಟೆಸ್ಟ್ ಪಂದ್ಯಗಳನ್ನು ಆಡಬೇಕಾಗಿದೆ. ಟೀಮ್ ಇಂಡಿಯಾದ ಗೆಲುವಿನ ಶೇಕಡಾವಾರು ಪ್ರಸ್ತುತ 61.11 ರಷ್ಟಿದ್ದರೆ, ಆಸ್ಟ್ರೇಲಿಯಾದ ಗೆಲುವಿನ ಶೇಕಡಾವಾರು 57.69 ಕ್ಕೆ ಇಳಿದಿದೆ. ಟೀಮ್​ ಇಂಡಿಯಾ ಒಂದು ಪಂದ್ಯ ಸೋತ್ರೂ ಬಹಳ ತೊಂದರೆಯಾಗಲಿದೆ. ಇದರ ಮಧ್ಯೆ ಟೀಮ್​ ಇಂಡಿಯಾ ಸ್ಟಾರ್​ ಪ್ಲೇಯರ್​ ಎಂಟ್ರಿ ನೀಡಿದ್ದಾರೆ.

publive-image

ಶಮಿ ಭರ್ಜರಿ ಕಮ್​ಬ್ಯಾಕ್​

ಗಾಯದಿಂದ ಚೇತರಿಸಿಕೊಂಡು ಸುಮಾರು ಒಂದು ವರ್ಷದ ನಂತರ ವೇಗದ ಸ್ಟಾರ್ ಬೌಲರ್ ಮೊಹಮ್ಮದ್ ಶಮಿ ಕ್ರಿಕೆಟ್​ಗೆ ಮರಳಿದ್ದಾರೆ. ಇತ್ತೀಚೆಗೆ ಭರ್ಜರಿ ಕಮ್​ಬ್ಯಾಕ್​ ನಂತರ ನಡೆದ ಪಂದ್ಯವೊಂದರಲ್ಲಿ ಶಮಿ 7 ವಿಕೆಟ್ ಪಡೆದು ತಂಡಕ್ಕೆ ರೋಮಾಂಚಕ ಗೆಲುವು ತಂದುಕೊಟ್ಟರು.

Advertisment

ರಣಜಿ ಟ್ರೋಫಿಯಲ್ಲಿ ಬಂಗಾಳ ಪರ ಆಡಿದ್ದ ಅವರು ಮಧ್ಯಪ್ರದೇಶದ ವಿರುದ್ಧ ಅದ್ಭುತ ಬೌಲಿಂಗ್ ಮಾಡಿದರು. ಅಂತರರಾಷ್ಟ್ರೀಯ ಕ್ರಿಕೆಟ್​ಗೆ ಮರಳುವ ಮೊದಲು, ಅವರು ದೇಶೀಯ ಕ್ರಿಕೆಟ್​ನಲ್ಲಿ ತಮ್ಮ ಫಿಟ್ನೆಸ್ ಅನ್ನು ಸಾಬೀತುಪಡಿಸಲು ಮೈದಾನಕ್ಕೆ ಇಳಿದಿದ್ದರು.

ಮಧ್ಯಪ್ರದೇಶ ವಿರುದ್ಧದ ಮೊದಲ ಇನ್ನಿಂಗ್ಸ್​ನಲ್ಲಿ 4 ವಿಕೆಟ್ ಪಡೆದರೆ, ಎರಡನೇ ಇನ್ನಿಂಗ್ಸ್​ನಲ್ಲಿ 3 ವಿಕೆಟ್ ಪಡೆದರು. ಶಮಿ ಅವರ ಅದ್ಭುತ ಬೌಲಿಂಗ್​ ನೆರವಿನಿಂದ ಬಂಗಾಳ ತಂಡವು ಮಧ್ಯಪ್ರದೇಶವನ್ನು 11 ರನ್​ಗ​ಳಿಂದ ಸೋಲಿಸಿತು.

2ನೇ ಟೆಸ್ಟ್​ ಯಾವಾಗ?

ಡಿಸೆಂಬರ್​​ 6ರಿಂದ ಆಸ್ಟ್ರೇಲಿಯಾದಲ್ಲಿ ಬಾರ್ಡರ್ ಗವಾಸ್ಕರ್ ಟ್ರೋಫಿಯ 2ನೇ ಟೆಸ್ಟ್​ ಪಂದ್ಯ ನಡೆಯಲಿದೆ. ಕೌಟುಂಬಿಕ ಕಾರಣಕ್ಕೆ ಮೊದಲ ಪಂದ್ಯದಿಂದ ಹೊರಗುಳಿದಿದ್ದ ಕ್ಯಾಪ್ಟನ್ ರೋಹಿತ್ ಅವರು ಈಗಾಗಲೇ ತಂಡ ಸೇರಿಕೊಂಡಿದ್ದಾರೆ. ಇವರ ಜತೆಗೆ ಶಮಿ ಕೂಡ ಟೀಮ್​ ಇಂಡಿಯಾ ಸೇರಿದ್ದು, 2ನೇ ಟೆಸ್ಟ್​ ಪಂದ್ಯಕ್ಕೆ ಲಭ್ಯರಾಗಿದ್ದಾರೆ.

Advertisment

ಇದನ್ನೂ ಓದಿ:2ನೇ ಮಹತ್ವದ ಟೆಸ್ಟ್​​; ಟೀಮ್​ ಇಂಡಿಯಾದ ಸ್ಟಾರ್​​​ ಪ್ಲೇಯರ್​​ ಬುಮ್ರಾಗೆ ಬಿಗ್​ ಶಾಕ್​​

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment
Advertisment
Advertisment