/newsfirstlive-kannada/media/post_attachments/wp-content/uploads/2024/11/Rohit-Sharma_IND-Test.jpg)
ಟೀಮ್​ ಇಂಡಿಯಾ, ಆಸ್ಟ್ರೇಲಿಯಾ ನಡುವಿನ ಕೊನೆಯ ಟೆಸ್ಟ್ ಪಂದ್ಯ ಸಿಡ್ನಿ ಇಂಟರ್​ ನ್ಯಾಷನಲ್​​ ಕ್ರಿಕೆಟ್ ಸ್ಟೇಡಿಯಮ್​​ನಲ್ಲಿ ನಡೆಯುತ್ತಿದೆ. ಕೊನೆ ಟೆಸ್ಟ್​ ಪಂದ್ಯದಿಂದ ಟೀಮ್​ ಇಂಡಿಯಾ ಕ್ಯಾಪ್ಟನ್​​ ರೋಹಿತ್​ ಶರ್ಮಾ ಅವರಿಗೆ ಕೊಕ್​ ನೀಡಲಾಗಿದೆ.
ಇನ್ನು, ಸಿಡ್ನಿ ಟೆಸ್ಟ್ ಪಂದ್ಯದಿಂದ ರೋಹಿತ್ ಶರ್ಮಾ ಅವರನ್ನು ಹೊರಗಿಟ್ಟ ಬಗ್ಗೆ ಟೀಮ್​ ಇಂಡಿಯಾದ ಮಾಜಿ ಕ್ರಿಕೆಟರ್​ ನವಜೋತ್ ಸಿಂಗ್ ಸಿಧು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕ್ಯಾಪ್ಟನ್​ ರೋಹಿತ್​ ಶರ್ಮಾ ಅವರನ್ನೇ ತಂಡದಿಂದ ಹೊರಗಿಟ್ಟಿರೋದು ನಾನ್​ಸೆನ್ಸ್​ ಎಂದಿದ್ದಾರೆ.
ಬಿಸಿಸಿಐ ವಿರುದ್ಧ ಆಕ್ರೋಶ
ಭಾರತ ಕ್ರಿಕೆಟ್ ಇತಿಹಾಸದಲ್ಲೇ ಮೊದಲ ಬಾರಿಗೆ ನಾಯಕನನ್ನು ತಂಡದಿಂದ ಹೊರಗಿಡಲಾಗಿದೆ. ರೋಹಿತ್ ಶ್ರೇಷ್ಠ ಆಟಗಾರ. ಇವರು ಭಾರತೀಯ ಕ್ರಿಕೆಟ್‌ಗೆ ಅಪಾರ ಸೇವೆ ಸಲ್ಲಿಸಿದ್ದಾರೆ. ಕ್ಯಾಪ್ಟನ್​​ ಕೆಟ್ಟ ಫಾರ್ಮ್​ನಲ್ಲಿದ್ರೂ ತೆಗೆಯಬಾರದು. ನಾಯಕನಿಗೆ ಪರ್ಯಾಯವಿಲ್ಲ, ಬೇರೆಯವರಿಗೆ ಕ್ಯಾಪ್ಟನ್ಸಿ ನೀಡುವುದು ತಪ್ಪು ಸಂದೇಶ ರವಾನಿಸುತ್ತದೆ ಎಂದರು.
ಬುಮ್ರಾಗೆ ಕ್ಯಾಪ್ಟನ್ಸಿ
ರೋಹಿತ್​ ಬದಲಿಗೆ ಜಸ್ಪ್ರೀತ್ ಬುಮ್ರಾ ಸಿಡ್ನಿ ಟೆಸ್ಟ್‌ನಲ್ಲಿ ನಾಯಕತ್ವ ವಹಿಸಿದ್ದಾರೆ. ಇವರು ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಮೊದಲ ಟೆಸ್ಟ್‌ನಲ್ಲಿ ಕ್ಯಾಪ್ಟನ್​ ಆಗಿದ್ರು. ಸದ್ಯ ನಡೆಯುತ್ತಿರೋ ಆಸ್ಟ್ರೇಲಿಯಾ ಪ್ರವಾಸದಲ್ಲಿ ರೋಹಿತ್ 3 ಟೆಸ್ಟ್‌ಗಳ 5 ಇನ್ನಿಂಗ್ಸ್‌ನಲ್ಲಿ 31 ರನ್ ಮಾತ್ರ ಗಳಿಸಿದ್ದಾರೆ.
ಕಳೆದ ವರ್ಷ ಹೀನಾಯ ಪ್ರದರ್ಶನ
ಟೀಮ್​ ಇಂಡಿಯಾ ಕ್ಯಾಪ್ಟನ್​ ರೋಹಿತ್​ ಶರ್ಮಾ ಕಳೆದ ವರ್ಷ ಕಳಪೆ ಪ್ರದರ್ಶನ ನೀಡಿದ್ದಾರೆ. ರೋಹಿತ್ 2024ರಲ್ಲಿ ಟೆಸ್ಟ್ ಕ್ರಿಕೆಟ್‌ನಲ್ಲಿ 14 ಪಂದ್ಯಗಳ 26 ಇನ್ನಿಂಗ್ಸ್ ಆಡಿದ್ದಾರೆ. ಈ ಪೈಕಿ 24.76 ಸರಾಸರಿಯಲ್ಲಿ 619 ರನ್ ಗಳಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us