/newsfirstlive-kannada/media/post_attachments/wp-content/uploads/2024/08/Team-India-1.jpg)
ಇತ್ತೀಚೆಗಷ್ಟೇ ಸೈಯದ್ ಮುಷ್ತಾಕ್ ಅಲಿ ಟಿ20 ಟ್ರೋಫಿ ಮುಗಿದಿದ್ದು, ಇದರ ಬೆನ್ನಲ್ಲೇ ವಿಜಯ್ ಹಜಾರೆ ಟ್ರೋಫಿ ಶುರುವಾಗಲಿದೆ. ಮುಂಬೈ ತಂಡವನ್ನು ಸೈಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲಿ ಕ್ಯಾಪ್ಟನ್ ಶ್ರೇಯಸ್ ಅಯ್ಯರ್ ಮುನ್ನಡೆಸಿದ್ರು. ಈಗ ವಿಜಯ್ ಹಜಾರೆ ಟ್ರೋಫಿಯಲ್ಲೂ ಮುಂಬೈ ತಂಡವನ್ನು ಶ್ರೇಯಸ್ ಅಯ್ಯರ್ ಲೀಡ್ ಮಾಡಲಿದ್ದಾರೆ.
ಇನ್ನು, ವಿಜಯ್ ಹಜಾರೆ ಟ್ರೋಫಿ ಬಲಿಷ್ಠ ಮುಂಬೈ ತಂಡ ಪ್ರಕಟವಾಗಿದೆ. ಸೈಯದ್ ಮುಷ್ತಾಕ್ ಅಲಿ ಟಿ20 ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದಿದ್ದ ಅಜಿಂಕ್ಯಾ ರಹಾನೆ ಅವರು ಬ್ರೇಕ್ ತೆಗೆದುಕೊಂಡಿದ್ದಾರೆ. ಶ್ರೇಯಸ್ ಅಯ್ಯರ್ಗೆ ಸೂರ್ಯಕುಮಾರ್ ಯಾದವ್ ಮತ್ತು ಶಿವಂ ದುಬೆ ರೀತಿಯ ಸ್ಟಾರ್ ಆಟಗಾರರು ಸಾಥ್ ನೀಡಲಿದ್ದಾರೆ. ಮುಂಬೈ ತಂಡದಿಂದ ಟೀಮ್ ಇಂಡಿಯಾ ಸ್ಟಾರ್ ಪ್ಲೇಯರ್ ಪೃಥ್ವಿ ಶಾ ಅವರನ್ನೇ ಕೈ ಬಿಡಲಾಗಿದೆ.
ದ್ವಿಶತಕ ವೀರನಿಗೆ ಕೊಕ್
ವಿಜಯ್ ಹಜಾರೆ ಸೇರಿ 50 ಓವರ್ಗಳ ಪಂದ್ಯಗಳಲ್ಲಿ 2 ದ್ವಿಶತಕ ಸಿಡಿಸಿ ಸಂಚಲನ ಸೃಷ್ಟಿಸಿದವರು ಪೃಥ್ವಿ ಶಾ. ಇವರನ್ನು ಮುಂಬೈ ಆಯ್ಕೆ ಸಮಿತಿ ತಂಡದಿಂದ ಕೈಬಿಟ್ಟಿದೆ. ಇತ್ತೀಚೆಗೆ ನಡೆದ ಸೈಯದ್ ಮುಷ್ತಾಕ್ ಅಲಿ ಟಿ20 ಟೂರ್ನಮೆಂಟ್ನಲ್ಲಿ ಕಳಪೆ ಪ್ರದರ್ಶನ ನೀಡಿದ್ದರು ಎನ್ನುವ ಕಾರಣಕ್ಕೆ ಕೈ ಬಿಡಲಾಗಿದೆ.
ಪೃಥ್ವಿ ಶಾ ಕಳಪೆ ಪ್ರದರ್ಶನ
ಪೃಥ್ವಿ ಶಾ ಇತ್ತೀಚೆಗೆ ಅನಗತ್ಯ ಕಾರಣಗಳಿಂದಲೇ ಸುದ್ದಿಯಾಗಿದ್ದಾರೆ. ಕಳೆದ ಅಕ್ಟೋಬರ್ ತಿಂಗಳಲ್ಲಿ ನಡೆದ ರಣಜಿ ಟ್ರೋಫಿ ಟೂರ್ನಿಯಿಂದಲೇ ಮುಂಬೈ ತಂಡದಿಂದ ಪೃಥ್ವಿ ಶಾಗೆ ಕೊಕ್ ನೀಡಲಾಗಿತ್ತು. 2024ರಲ್ಲಿ ಪೃಥ್ವಿ ಶಾ ರಣಜಿ ಟ್ರೋಫಿಯ ನಾಲ್ಕು ಇನ್ನಿಂಗ್ಸ್ಗಳಲ್ಲಿ ಕೇವಲ 59 ರನ್ ಗಳಿಸಿದ್ದರು.
ವಿಜಯ್ ಹಜಾರೆ ಟ್ರೋಫಿ ಯಾವಾಗ?
ಡಿಸೆಂಬರ್ 21ರಿಂದ ಟೂರ್ನಿ ಆರಂಭವಾಗಲಿದೆ. ಮುಂಬೈ ತನ್ನ ಮೊದಲ ಪಂದ್ಯ ಡಿಸೆಂಬರ್ 21ರಂದೇ ಆಡಲಿದೆ. ಮುಂಬೈ, ನಾಗಾಲ್ಯಾಂಡ್, ಹೈದರಾಬಾದ್, ಸೌರಾಷ್ಟ್ರ, ಪಂಜಾಬ್, ಪುದುಚೇರಿ, ಅರುಣಾಚಲ ಪ್ರದೇಶ ಮತ್ತು ಕರ್ನಾಟಕ ತಂಡಗಳು ಟೂರ್ನಿಯಲ್ಲಿ ಭಾಗಿಯಾಗಲಿವೆ.
ಇದನ್ನೂ ಓದಿ:ಆಸ್ಟ್ರೇಲಿಯಾ ವಿರುದ್ಧ 4ನೇ ಟೆಸ್ಟ್; ಈ ಮುನ್ನವೇ ಟೀಮ್ ಇಂಡಿಯಾಗೆ ಭರ್ಜರಿ ಗುಡ್ನ್ಯೂಸ್
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ