ಇತ್ತೀಚೆಗಷ್ಟೇ ಭಾರತ ತಂಡದ ಬ್ಯಾಟರ್ ಶಿಖರ್ ಧವನ್ ನಿವೃತ್ತಿ ಘೋಷಿಸಿದ್ರು!
ಇದರ ಬೆನ್ನಲ್ಲೇ ಮತ್ತೋರ್ವ ಟೀಮ್ ಇಂಡಿಯಾದ ಪ್ರಮುಖ ಕ್ರಿಕೆಟರ್ ನಿವೃತ್ತಿ
ಎಲ್ಲಾ ಮಾದರಿ ಕ್ರಿಕೆಟ್ಗೂ ನಿವೃತ್ತಿ ಘೋಷಿಸಿದ ಅಂತಾರಾಷ್ಟ್ರೀಯ ಕ್ರಿಕೆಟರ್
ಇತ್ತೀಚೆಗಷ್ಟೇ ಭಾರತ ತಂಡದ ಸ್ಪೋಟಕ ಎಡಗೈ ಬ್ಯಾಟರ್ ಶಿಖರ್ ಧವನ್ ನಿವೃತ್ತಿ ಘೋಷಿಸಿದ್ದರು. ಈಗ ಟೀಮ್ ಇಂಡಿಯಾದ ಮತ್ತೋರ್ವ ಕ್ರಿಕೆಟರ್ ಕ್ರಿಕೆಟ್‌ಗೆ ಗುಡ್ ಬೈ ಹೇಳಿದ್ದಾರೆ. ಭಾರತ ತಂಡದ ವೇಗದ ಬೌಲರ್ ಬರೀಂದರ್ ಸ್ರಾನ್ ಎಲ್ಲಾ ಮಾದರಿ ಕ್ರಿಕೆಟ್‌ಗೆ ವಿದಾಯ ಘೋಷಿಸಿದ್ದಾರೆ.
ಯಾರು ಈ ಬರೀಂದರ್?
ಒಂದು ಕಾಲದ ಸ್ಟಾರ್ ಬೌಲರ್ ಬರೀಂದರ್. ಇವರಿಗೆ ಬಹಳ ವರ್ಷಗಳಿಂದ ಟೀಮ್ ಇಂಡಿಯಾದಲ್ಲಿ ಆಡಲು ಅವಕಾಶ ಸಿಗದ ಕಾರಣ ಎಲ್ಲೂ ಕಾಣಿಸಿಕೊಂಡಿರಲಿಲ್ಲ. 2016ರಲ್ಲಿ ಭಾರತ ತಂಡಕ್ಕೆ ಪಾದಾರ್ಪಣೆ ಮಾಡಿದ್ದ ಇವರು, ತಮ್ಮ ಚೊಚ್ಚಲ ಟಿ20 ಪಂದ್ಯದಲ್ಲೇ ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿ ದಾಖಲೆ ಬರೆದಿದ್ದರು.
ಈ ಸಂಬಂಧ ಟ್ವೀಟ್ ಮಾಡಿರೋ ಸ್ರಾನ್, ನಾನು ಅಧಿಕೃತವಾಗಿ ಕ್ರಿಕೆಟ್‌ನಿಂದ ನಿವೃತ್ತಿ ಆಗುತ್ತಿದ್ದೇನೆ. ನನ್ನನ್ನು ಬೆಂಬಲಿಸಿ ಎಲ್ಲರಿಗೂ ಧನ್ಯಾವಾದಗಳು ಎಂದರು. ಕ್ರಿಕೆಟ್‌ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಲು ಅವಕಾಶ ಸಿಕ್ಕಿದ್ದು ನನಗೆ ತುಂಬಾ ಸಂತಸ ತಂದಿದೆ ಎಂದರು.
ಮೊದಲ ಪಂದ್ಯದಲ್ಲೇ ಅದ್ಭುತ ಸಾಧನೆ
ಸ್ರಾನ್ ಚೊಚ್ಚಲ ಪಂದ್ಯದಲ್ಲಿ 4 ಓವರ್‌ಗಳಲ್ಲಿ 10 ರನ್ಗೆ 4 ವಿಕೆಟ್ ಪಡೆದು ಮಿಂಚಿದ್ದರು. ಇವರು ಒಂದೇ ವರ್ಷದಲ್ಲಿ ಭಾರತ ಪರ 6 ಏಕದಿನ ಮತ್ತು 2 ಟಿ20 ಪಂದ್ಯಗಳನ್ನು ಆಡಿದ್ದಾರೆ. ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಒಟ್ಟು 13 ವಿಕೆಟ್‌ಗಳನ್ನು ಕಬಳಿಸಿದ್ದು, ಆಮೇಲೆ ಅವರಿಗೆ ಅವಕಾಶ ಸಿಗಲಿಲ್ಲ.
ಇದನ್ನೂ ಓದಿ: ಬಿಸಿಸಿಐನಿಂದ ಟೀಮ್ ಇಂಡಿಯಾ ಸ್ಟಾರ್ ಆಟಗಾರ ಶ್ರೇಯಸ್ ಅಯ್ಯರ್ಗೆ ಬಿಗ್ ಶಾಕ್; ಕಾರಣವೇನು?
ವಿಶೇಷ ಸೂಚನೆ: ಕ್ರಿಕೆಟ್ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್