/newsfirstlive-kannada/media/post_attachments/wp-content/uploads/2024/10/Rishabh_Pant-1.jpg)
ಬೆಂಗಳೂರಿನ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡದ ವಿರುದ್ಧ ಟೀಮ್ ಇಂಡಿಯಾ ಹೀನಾಯ ಸೋಲು ಕಂಡಿದೆ. ನ್ಯೂಜಿಲೆಂಡ್ ತಂಡ ಭಾರತದ ವಿರುದ್ಧ ಗೆಲ್ಲೋ ಮೂಲಕ 3 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-0 ಅಂತರದ ಮುನ್ನಡೆ ಸಾಧಿಸಿದೆ.
ಇನ್ನು, 2ನೇ ಟೆಸ್ಟ್ ಪಂದ್ಯ ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಮ್ನಲ್ಲಿ ನಡೆಯಲಿದೆ. ಇದಕ್ಕೆ ಟೀಮ್ ಇಂಡಿಯಾ ಭರ್ಜರಿ ತಯಾರಿ ಮಾಡಿಕೊಂಡಿದೆ. ಅಕ್ಟೋಬರ್ 24ನೇ ತಾರೀಕಿನಿಂದ ಶುರುವಾಗೋ ಈ ಟೆಸ್ಟ್ ಪಂದ್ಯ 28ರ ವರೆಗೆ ನಡೆಯಲಿದೆ. ಈ ಪಂದ್ಯಕ್ಕೆ ಮುನ್ನ ಟೀಮ್ ಇಂಡಿಯಾಗೆ ಸ್ಟಾರ್ ಆಲ್‌ರೌಂಡರ್ ಎಂಟ್ರಿಯಾಗಿದೆ.
2ನೇ ಟೆಸ್ಟ್ನಿಂದ ಪಂತ್ ಔಟ್
ನ್ಯೂಜಿಲೆಂಡ್ ವಿರುದ್ಧದ 2ನೇ ಟೆಸ್ಟ್ನಿಂದ ಟೀಮ್ ಇಂಡಿಯಾ ವಿಕೆಟ್ ಕೀಪರ್ ಬ್ಯಾಟರ್ ರಿಷಬ್ ಪಂತ್ ಔಟ್ ಆಗೋ ಸಾಧ್ಯತೆ ಇದೆ. ಮೊದಲ ಟೆಸ್ಟ್‌ನಲ್ಲಿ ಪಂತ್ ಕೀಪಿಂಗ್ ಮಾಡುವಾಗ ತೀವ್ರವಾಗಿ ಗಾಯಗೊಂಡಿದ್ದರು. ಮೊಣಕಾಲಿಗೆ ಎಲ್ಲಿ ಸರ್ಜರಿ ಆಗಿತ್ತೋ ಅದೇ ಜಾಗಕ್ಕೆ ಗಾಯ ಆಗಿದೆ. ಬಾಲ್ ಬಲವಾಗಿ ಬಿದ್ದ ಕಾರಣ ಪಂತ್ ನೋವಿನಿಂದ ಕುಸಿದು ಬಿದ್ದಿದ್ದರು. ಬಳಿಕ ಮೈದಾನದಿಂದ ಹೊರ ನಡೆದಿದ್ದು, ಇವರ ಬದಲಿಗೆ ಧ್ರುವ್ ಜುರೆಲ್ ವಿಕೆಟ್ ಕೀಪಿಂಗ್ ಮಾಡಿದ್ದರು.
ಪಂತ್ ಬದಲಿಗೆ ಸ್ಟಾರ್ ಆಲ್ರೌಂಡರ್ಗೆ ಸ್ಥಾನ
ಮೊದಲ ಟೆಸ್ಟ್ ಪಂದ್ಯ ಸೋಲಿನ ಬಳಿಕ ಸ್ಟಾರ್ ಆಲ್‌ರೌಂಡರ್ ವಾಷಿಂಗ್ಟನ್ ಸುಂದರ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಈಗ ಪಂತ್ಗೆ ಇಂಜೂರಿ ಆಗಿರೋ ಕಾರಣ ಇವರಿಗೆ ತಂಡದಲ್ಲಿ ಸ್ಥಾನ ನೀಡಲಾಗುವುದು ಎಂದು ತಿಳಿದು ಬಂದಿದೆ. ಪುಣೆ ಪಿಚ್ ಸ್ಪಿನ್ ಬೌಲರ್‌ಗಳಿಗೆ ಹೇಳಿ ಮಾಡಿಸಿದಂತಿದೆ. ಪಿಚ್ ತುಂಬಾ ಸ್ಲೋ ಇರುವುದರಿಂದ ಚೆಂಡು ತಿರುಗಲಿದೆ. ಸ್ಪಿನ್ನರ್‌ಗಳು ಈ ಪಿಚ್‌ನಲ್ಲಿ ಪ್ರಾಬಲ್ಯ ಸಾಧಿಸುವ ಅವಕಾಶ ಹೊಂದಿದ್ದಾರೆ. ಅದರಿಂದ ಭಾರತ ಹೆಚ್ಚುವರಿ ಸ್ಪಿನ್ನರ್‌ನೊಂದಿಗೆ ಕಣಕ್ಕಿಳಿಯುವ ಸಾಧ್ಯತೆಯಿದೆ. ಕುಲದೀಪ್ ಯಾದವ್, ರವಿಚಂದ್ರನ್ ಅಶ್ವಿನ್ ಮತ್ತು ರವೀಂದ್ರ ಜಡೇಜಾ ಜತೆಗೆ ವಾಷಿಂಗ್ಟನ್ ಸುಂದರ್ ಕೂಡ ಕಣಕ್ಕಿಳಿಯಲಿದ್ದಾರೆ.
ನೋವಿನಲ್ಲೇ ಬ್ಯಾಟಿಂಗ್ ಮಾಡಿದ್ದ ಪಂತ್
ಮೊದಲ ಪಂದ್ಯದ 2ನೇ ಇನ್ನಿಂಗ್ಸ್ನಲ್ಲಿ ಟೀಮ್ ಇಂಡಿಯಾ ಬರೋಬ್ಬರಿ 462 ರನ್ ಕಲೆ ಹಾಕಿತ್ತು. ಟೀಮ್ ಇಂಡಿಯಾದ ಭರವಸೆಯ ಬ್ಯಾಟರ್ ಸರ್ಫರಾಜ್ ಖಾನ್ ಅವರು ಸುಮಾರು 150 ರನ್ ಚಚ್ಚಿದ್ರು. ಇವರಿಗೆ ಸಾಥ್ ನೀಡಿದ ಪಂತ್ ತೀವ್ರವಾಗಿ ಗಾಯಗೊಂಡಿದ್ರೂ ನೋವಿನಲ್ಲೇ ಭರ್ಜರಿ ಬ್ಯಾಟಿಂಗ್ ಮಾಡಿದ್ರು. ಪಾಸಿಟಿವ್ ಇಂಟೆಂಟ್ ಜತೆ ಬ್ಯಾಟಿಂಗ್ ಮಾಡಿದ ಪಂತ್ ಕೇವಲ 1 ರನ್ನಿಂದ ಶತಕ ವಂಚಿತರಾಗಿ 99 ರನ್ ಗಳಿಸಿದ್ರು.
ಇದನ್ನೂ ಓದಿ: 4,4,4,4,4,4,4,4,4,4,4,4,4,4,4,4,4,4,4,4,4,4,4,4,4; ಭರ್ಜರಿ ದ್ವಿಶತಕ ಸಿಡಿಸಿ ಬಿಸಿಸಿಐಗೆ ಎಚ್ಚರಿಕೆ ಕೊಟ್ಟ ಪೂಜಾರ
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ