/newsfirstlive-kannada/media/post_attachments/wp-content/uploads/2024/10/ROHIT_SHARMA-2.jpg)
ಬಾರ್ಡರ್-ಗವಾಸ್ಕರ್ ಟ್ರೋಫಿಗೆ ಮುನ್ನ ನಡೆದ ಟೆಸ್ಟ್ ಸರಣಿಯಲ್ಲಿ ನ್ಯೂಜಿಲೆಂಡ್ ವಿರುದ್ಧ ಟೀಮ್ ಇಂಡಿಯಾ ಹೀನಾಯ ಸೋಲು ಕಂಡಿತ್ತು. 20 ವರ್ಷಗಳ ನಂತರ ತವರಿನಲ್ಲಿ ಟೀಮ್ ಇಂಡಿಯಾ ನ್ಯೂಜಿಲೆಂಡ್ ವಿರುದ್ಧ 3-0 ಅಂತರದಿಂದ ಟೆಸ್ಟ್ ಸೀರೀಸ್ನಲ್ಲಿ ವೈಟ್ ವಾಶ್ ಆಗಿತ್ತು. ಈ ಬೆನ್ನಲ್ಲೇ ಟೀಮ್ ಇಂಡಿಯಾ 3-1 ಅಂತರದಲ್ಲಿ ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಟೆಸ್ಟ್ ಸರಣಿ ಸೋತಿದೆ.
ಇನ್ನು, ಈ ಸೋಲಿನೊಂದಿಗೆ ಟೀಮ್ ಇಂಡಿಯಾದ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಹಾದಿ ಕ್ಲೋಸ್ ಆಗಿದೆ. ಆಸ್ಟ್ರೇಲಿಯಾ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ನಾಲ್ಕು ಗೆದ್ದರಷ್ಟೇ ಫೈನಲ್ಗೆ ಸುಗಮವಾಗಿ ಅರ್ಹತೆ ಪಡೆಯಲು ಟೀಮ್ ಇಂಡಿಯಾಗೆ ಅವಕಾಶ ಇತ್ತು. ಈಗ ಟೆಸ್ಟ್ ಸರಣಿ ಸೋತಿದ್ದು, 3ನೇ ಬಾರಿಗೆ ಫೈನಲ್ ಆಡುವ ಟೀಮ್ ಇಂಡಿಯಾ ಕನಸು ಭಗ್ನಗೊಂಡಿದೆ.
ರೋಹಿತ್ ನಾಯಕತ್ವದ ಬಗ್ಗೆ ಪ್ರಶ್ನೆ
ಆಸ್ಟ್ರೇಲಿಯಾ ವಿರುದ್ಧ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡವನ್ನು ಜಸ್‌ಪ್ರೀತ್ ಬುಮ್ರಾ ಲೀಡ್ ಮಾಡಿದ್ರು. ಜಸ್‌ಪ್ರೀತ್ ಬುಮ್ರಾ ನಾಯಕತ್ವದಲ್ಲಿ ಟೀಮ್ ಇಂಡಿಯಾ ಐತಿಹಾಸಿಕ ಗೆಲುವು ಸಾಧಿಸಿ ದಾಖಲೆ ಬರೆದಿತ್ತು. 2ನೇ ಟೆಸ್ಟ್ ಪಂದ್ಯದಲ್ಲಿ ಕ್ಯಾಪ್ಟನ್ ರೋಹಿತ್ ನೇತೃತ್ವದಲ್ಲಿ ಟೀಮ್ ಇಂಡಿಯಾ ಸೋತಿದೆ. ಇಷ್ಟೇ ಅಲ್ಲ 3 ಮತ್ತು 4ನೇ ಟೆಸ್ಟ್ ಪಂದ್ಯದಲ್ಲೂ ಟೀಮ್ ಇಂಡಿಯಾಗೆ ಭಾರೀ ಹಿನ್ನಡೆ ಆಗಿತ್ತು. ಇದರ ಪರಿಣಾಮ 5ನೇ ಟೆಸ್ಟ್ನಿಂದ ರೋಹಿತ್ ದೂರ ಉಳಿದಿದ್ರು. ಬುಮ್ರಾ ನಾಯಕತ್ವದಲ್ಲೂ ಟೀಮ್ ಇಂಡಿಯಾ ಕೊನೆ ಟೆಸ್ಟ್ ಸೋತಿದೆ.
ನಾಯಕತ್ವದಿಂದ ಕೆಳಗಿಳಿಸುವಂತೆ ಆಗ್ರಹ
ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಕ್ಯಾಪ್ಟನ್ ರೋಹಿತ್ ಶರ್ಮಾ ಬ್ಯಾಟ್ ಸಾಕಷ್ಟು ಮೌನವಾಗಿತ್ತು. ಯಾವ ಪಂದ್ಯದಲ್ಲೂ ರೋಹಿತ್ ಹೇಳಿಕೊಳ್ಳುವ ಪ್ರದರ್ಶನ ನೀಡಲಿಲ್ಲ. ಹೀಗಾಗಿ ರೋಹಿತ್ ಶರ್ಮಾರನ್ನು ಟೆಸ್ಟ್ ನಾಯಕತ್ವದಿಂದ ಕೆಳಗಿಳಿಸಬೇಕು ಎಂಬ ಕೂಗು ಜೋರಾಗಿದೆ.
ಈ ಬಾರಿ ಟೀಮ್ ಇಂಡಿಯಾ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಹೋಗುವ ದಾರಿ ಕ್ಲೋಸ್ ಆಗಿದೆ. ಆಸ್ಟ್ರೇಲಿಯಾ ವಿರುದ್ಧ ಸರಣಿ ಸೋತಿದ್ದು, ರೋಹಿತ್ ಅವರಿಗೆ ಕ್ಯಾಪ್ಟನ್ಸಿಯಿಂದ ಕೊಕ್ ನೀಡಬೇಕು ಎನ್ನುವ ಮಾತುಗಳು ಕೇಳಿಬಂದಿವೆ. ಬಿಸಿಸಿಐ ಈ ವಿಚಾರದಲ್ಲಿ ಯಾವುದೇ ಅಚ್ಚರಿ ನಿರ್ಧಾರ ಕೈಗೊಳ್ಳಬಹುದು.
ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ಫಸ್ಟ್ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ