/newsfirstlive-kannada/media/post_attachments/wp-content/uploads/2024/09/TEAM-INDIA-1.jpg)
ನವೆಂಬರ್ 22ನೇ ತಾರೀಕಿನಿಂದ ಎಂದರೆ ನಾಳೆಯಿಂದ ಪರ್ತ್ ಇಂಟರ್ ನ್ಯಾಷನಲ್ ಸ್ಟೇಡಿಯಮ್ನಲ್ಲಿ ಟೀಮ್ ಇಂಡಿಯಾ, ಆಸ್ಟ್ರೇಲಿಯಾ ನಡುವೆ ಮೊದಲ ಟೆಸ್ಟ್ ಶುರುವಾಗಲಿದೆ. ಈ ಮಹತ್ವದ ಮೊದಲ ಟೆಸ್ಟ್ ಪಂದ್ಯಕ್ಕೆ ಟೀಮ್ ಇಂಡಿಯಾ ಭರ್ಜರಿ ತಯಾರಿ ಮಾಡಿಕೊಂಡಿದೆ.
ಮೊದಲ ಟೆಸ್ಟ್ ಹೇಗಾದ್ರೂ ಮಾಡಿ ಗೆಲ್ಲಲೇಬೇಕು ಎಂದು ಟೀಮ್ ಇಂಡಿಯಾ ಜಿದ್ದಿಗೆ ಬಿದ್ದಿದೆ. ಇದರ ಮಧ್ಯೆ ಟೀಮ್ ಇಂಡಿಯಾಗೆ ಗಾಯದ ಸಮಸ್ಯೆ ಕಾಡುತ್ತಿದೆ. ಹಲವು ಆಟಗಾರರು ತೀವ್ರವಾಗಿ ಗಾಯಕ್ಕೆ ತುತ್ತಾಗಿದ್ದಾರೆ.
ಅತ್ತ ಟೀಮ್ ಇಂಡಿಯಾ ಕ್ಯಾಪ್ಟನ್ ರೋಹಿತ್ ಶರ್ಮಾ ಅವರು ವೈಯಕ್ತಿಕ ಕಾರಣಗಳಿಂದಾಗಿ ಮೊದಲ ಟೆಸ್ಟ್ ಆಡುತ್ತಿಲ್ಲ. ಹಾಗಾಗಿ ಇವರ ಅನುಪಸ್ಥಿತಿಯಲ್ಲಿ ಜಸ್ಪ್ರಿತ್ ಬುಮ್ರಾ ಟೀಮ್ ಇಂಡಿಯಾವನ್ನು ಲೀಡ್ ಮಾಡಲಿದ್ದಾರೆ. ಇತ್ತ ಮಿಡಲ್ ಆರ್ಡರ್ ಬ್ಯಾಟರ್ ಶುಭ್ಮನ್ ಗಿಲ್ ಬೆರಳಿಗೆ ಬಲವಾದ ಪೆಟ್ಟು ಬಿದ್ದ ಕಾರಣ ಇವರು ಮೊದಲ ಟೆಸ್ಟ್ನಿಂದಲೇ ದೂರ ಉಳಿದಿದ್ದಾರೆ ಎನ್ನುವ ಚರ್ಚೆ ಜೋರಾಗಿದೆ. ಈ ಬಗ್ಗೆ ಟೀಮ್ ಇಂಡಿಯಾದ ಕೋಚ್ ಮಾತಾಡಿದ್ದಾರೆ.
ಈ ಬಗ್ಗೆ ಕೋಚ್ ಏನಂದ್ರು?
ಟೆಸ್ಟ್ ಪಂದ್ಯಕ್ಕೂ ಮುನ್ನ ಮಾತಾಡಿದ ಕೋಚ್ ಮೋರ್ಕೆಲ್, ಶುಭಮನ್ ಗಿಲ್ ಗಾಯದಿಂದ ಇನ್ನೂ ಚೇತರಿಸಿಕೊಳ್ಳಬೇಕಿದೆ. ಅವರ ಮೇಲೆ ತೀವ್ರ ನಿಗಾ ಇಡಲಾಗಿದೆ. ಟೆಸ್ಟ್ ಆರಂಭಕ್ಕೂ ಮುನ್ನ ಗಿಲ್ ಆಟದ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದರು.
ದೇವದತ್ ಪಡಿಕ್ಕಲ್ಗೆ ಸ್ಥಾನ
ಇತ್ತೀಚೆಗೆ ನಡೆದ ಅನಧಿಕೃತ ಟೆಸ್ಟ್ನಲ್ಲಿ ಟೀಮ್ ಇಂಡಿಯಾ ಪರ ದೇವದತ್ ಪಡಿಕ್ಕಲ್ ಸ್ಥಿರ ಪ್ರದರ್ಶನ ನೀಡಿದ್ರು. ಹಾಗಾಗಿ ಇವರಿಗೆ ಟೀಮ್ ಇಂಡಿಯಾದಲ್ಲಿ ಸ್ಥಾನ ಸಿಕ್ಕಿದ್ದು, ಮೂರನೇ ಕ್ರಮಾಂಕದಲ್ಲಿ ಶುಭ್ಮನ್ ಗಿಲ್ ಬದಲಿಗೆ ಬ್ಯಾಟ್ ಬೀಸಬಹುದು.
ಆಸ್ಟ್ರೇಲಿಯಾ ವಿರುದ್ಧ ಟೀಮ್ ಇಂಡಿಯಾ ಗೆಲ್ಲಲೇಬೇಕು
ಹೇಗಾದ್ರೂ ಮಾಡಿ ವಿಶ್ವಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗೆ ಟೀಂ ಇಂಡಿಯಾ ಅರ್ಹತೆ ಪಡೆಯಬೇಕು ಎಂದು ಚರ್ಚಿಸಿದ್ರು. ಟೀಮ್ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ 5 ಟೆಸ್ಟ್ ಪಂದ್ಯಗಳ ಸರಣಿ ಗೆಲ್ಲಲೇಬೇಕು. ಅದರಲ್ಲೂ 4 ಪಂದ್ಯ ಗೆದ್ರೆ ಮಾತ್ರ ವಿಶ್ವಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗೆ ಪ್ರವೇಶ ಸಿಗಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಇದನ್ನೂ ಓದಿ: ಆಸ್ಟ್ರೇಲಿಯಾ ಟೆಸ್ಟ್ ಸೀರೀಸ್; KL ರಾಹುಲ್ ಅಲ್ಲ, ಟೀಮ್ ಇಂಡಿಯಾಗೆ ಕರ್ನಾಟಕ ಕ್ರಿಕೆಟರ್ ಎಂಟ್ರಿ
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ