ಬರೋಬ್ಬರಿ 12 ವರ್ಷಗಳ ನಂತರ ತವರಿನಲ್ಲಿ ಹೀನಾಯ ಸೋಲು
ನ್ಯೂಜಿಲೆಂಡ್ ವಿರುದ್ಧ ಟೆಸ್ಟ್ ಸರಣಿ ಸೋತ ಟೀಮ್ ಇಂಡಿಯಾ..!
ಆಸೀಸ್ ವಿರುದ್ಧ 5 ಪಂದ್ಯಗಳ ಟೆಸ್ಟ್ ಸರಣಿ ಆಡಲಿರೋ ಭಾರತ
ಸುಮಾರು 12 ವರ್ಷಗಳ ಬಳಿಕ ತವರಿನಲ್ಲೇ ಟೀಮ್ ಇಂಡಿಯಾ ನ್ಯೂಜಿಲೆಂಡ್ ವಿರುದ್ಧ ಟೆಸ್ಟ್ ಸರಣಿಯಲ್ಲಿ ಹೀನಾಯ ಸೋಲು ಕಂಡಿದೆ. ಟೀಮ್ ಇಂಡಿಯಾದ ಹೀನಾಯ ಸೋಲಿಗೆ ಕಾರಣ ಮಾಜಿ ಕ್ಯಾಪ್ಟನ್ ವಿರಾಟ್ ಕೊಹ್ಲಿ ಎಂಬ ಮಾತುಗಳು ಕೇಳಿ ಬಂದಿವೆ.
ಇತ್ತೀಚೆಗೆ ನಡೆದ ನ್ಯೂಜಿಲೆಂಡ್ ವಿರುದ್ಧದ 3 ಪಂದ್ಯಗಳ ಟೆಸ್ಟ್ ಸರಣಿಯ 2ನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ 113 ರನ್ ಗಳಿಂದ ಸೋಲು ಕಂಡಿತು. ಈ ಮೂಲಕ ಭಾರತ ಟೆಸ್ಟ್ ಸರಣಿಯನ್ನು ಕೈಚೆಲ್ಲಿದೆ.
ಪುಣೆಯಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ಫಸ್ಟ್ ಬ್ಯಾಟಿಂಗ್ ಮಾಡಿದ್ದ ನ್ಯೂಜಿಲೆಂಡ್ 259 ರನ್ಗಳಿಗೆ ಆಲೌಟ್ ಆಗಿತ್ತು. ನಂತರ ಇನ್ನಿಂಗ್ಸ್ ಆರಂಭಿಸಿದ್ದ ಭಾರತ ತಂಡ ಕೇವಲ 156 ರನ್ಗಳಿಗೆ ಆಲೌಟ್ ಆಗುವ ಮೂಲಕ 103 ರನ್ ಗಳ ಹಿನ್ನಡೆ ಅನುಭವಿಸಿತ್ತು. 2ನೇ ಇನ್ನಿಂಗ್ಸ್ ಆರಂಭಿಸಿದ್ದ ನ್ಯೂಜಿಲೆಂಡ್ 255 ರನ್ ಕಲೆ ಹಾಕಿ ಆಲೌಟ್ ಆಗಿತ್ತು. ಇದರೊಂದಿಗೆ ಭಾರತಕ್ಕೆ ಗೆಲ್ಲಲು 359 ರನ್ ಗುರಿ ನೀಡಿತ್ತು. ಈ ರನ್ ಗುರಿ ಬೆನ್ನಟ್ಟಿದ ಭಾರತ 245 ರನ್ಗಳಿಗೆ ಆಲೌಟ್ ಆಗುವ ಮೂಲಕ 113 ರನ್ ಗಳಿಂದ ಪಂದ್ಯ ಸೋತಿದೆ.
ಕೊಹ್ಲಿ ಕಳಪೆ ಬ್ಯಾಟಿಂಗ್
ನ್ಯೂಜಿಲೆಂಡ್ ವಿರುದ್ಧ ನಡೆದ 2 ಟೆಸ್ಟ್ ಪಂದ್ಯಗಳಲ್ಲೂ ಕೊಹ್ಲಿ ಫಾರ್ಮ್ ಸಮಸ್ಯೆ ಎದುರಿಸಿದ್ರು. ಇದಕ್ಕೂ ಮೊದಲು ಬಾಂಗ್ಲಾದೇಶ ವಿರುದ್ಧ ತವರಿನಲ್ಲಿ ನಡೆದ ಟೆಸ್ಟ್ ಸರಣಿಯಲ್ಲೂ ಕೊಹ್ಲಿ ಕಳಪೆ ಬ್ಯಾಟಿಂಗ್ ಮಾಡಿದ್ರು. ಈಗ ಆಸ್ಟ್ರೇಲಿಯಾ ಪ್ರವಾಸಕ್ಕೂ ಮುನ್ನ ಕೊಹ್ಲಿ ಫಾರ್ಮ್ ಸಮಸ್ಯೆ ಎದುರಿಸುತ್ತಿರುವುದು ಟೀಮ್ ಇಂಡಿಯಾಗೆ ಭಾರೀ ಆತಂಕ ತಂದೊಡ್ಡಿದೆ.
ಕೊಹ್ಲಿ ಈ ವರ್ಷ ತಮ್ಮ ಕಳಪೆ ಫಾರ್ಮ್ ಮುಂದುವರೆಸಿದ್ದಾರೆ. ತಾನು ಆಡಿರೋ 9 ಇನ್ನಿಂಗ್ಸ್ನಲ್ಲಿ ಆವರೇಜ್ 28.50 ಜತೆಗೆ ಕೇವಲ 228 ರನ್ ಗಳಿಸಿದ್ದಾರೆ. ಇದರಲ್ಲಿ ಕೇವಲ 1 ಅರ್ಧಶತಕ ಮಾತ್ರ ಸೇರಿದೆ.
ಭಾರತ ತಂಡ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ತಲುಪಲು ಉಳಿದಿರೋ 6 ಪಂದ್ಯಗಳ ಪೈಕಿ 4 ರಲ್ಲಿ ಗೆಲುವು ಸಾಧಿಸಬೇಕು. ಈ ಗೆಲುವು ಭಾರತಕ್ಕೆ ಅಷ್ಟೂ ಸುಲಭವಾಗಿಲ್ಲ. ಕಾರಣ ಟೀಮ್ ಇಂಡಿಯಾ 6 ಟೆಸ್ಟ್ ಪಂದ್ಯಗಳಲ್ಲಿ ಆಸ್ಟ್ರೇಲಿಯಾ ವಿರುದ್ದ 5 ಪಂದ್ಯ ಆಡಲಿದೆ. ಹೀಗಾಗಿ ಆಸ್ಟ್ರೇಲಿಯಾ ಪ್ರವಾಸದಲ್ಲಿ ವಿರಾಟ್ ಕೊಹ್ಲಿ ಪ್ರದರ್ಶನ ತಂಡದ ಮೇಲೆ ಪರಿಣಾಮ ಬೀರಲಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ