/newsfirstlive-kannada/media/post_attachments/wp-content/uploads/2024/08/Team-India-1.jpg)
ಟೀಮ್ ಇಂಡಿಯಾ, ಇಂಗ್ಲೆಂಡ್ ನಡುವಿನ ಮಹತ್ವದ ಸರಣಿಗೂ ಮುನ್ನ ಆಘಾತಕಾರಿ ಸುದ್ದಿ ಒಂದು ಹೊರಬಿದ್ದಿದೆ.ಟೀಮ್ ಇಂಡಿಯಾದ ಸ್ಟಾರ್ ವೇಗದ ಬೌಲರ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿ ಅಚ್ಚರಿ ಮೂಡಿಸಿದ್ದಾರೆ. ಇತ್ತೀಚೆಗಷ್ಟೇ ಆರ್. ಅಶ್ವಿನ್ ನಿವೃತ್ತಿ ಘೋಷಿಸಿದ್ದರು. ಈಗ ಟೀಮ್ ಇಂಡಿಯಾದಲ್ಲಿ ಸ್ಥಾನ ಸಿಗದ ಕಾರಣ ಮತ್ತೊಬ್ಬ ಬೌಲರ್ ತಮ್ಮ ಅಂತಾರಾಷ್ಟ್ರೀಯ ಕ್ರಿಕೆಟ್ ವೃತ್ತಿಜೀವನಕ್ಕೆ ತೆರೆ ಎಳೆದಿದ್ದಾರೆ.
ಯಾರು ಈ ಸ್ಟಾರ್ ವೇಗಿ?
ಟೀಮ್ ಇಂಡಿಯಾದ ರೈಟ್ ಆರ್ಮ್ ಬೌಲರ್ ವರುಣ್ ಆರನ್. ಇವರು ತಮ್ಮ ಫಾಸ್ಟ್ ಬೌಲಿಂಗ್ನಿಂದಲೇ ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಂಡವರು. 35 ವರ್ಷದ ಆರನ್ 2011ರಲ್ಲಿ ಎಂಎಸ್ ಧೋನಿ ನಾಯಕತ್ವದಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಡೆಬ್ಯೂ ಮಾಡಿದ್ರು. ಕ್ರಿಕೆಟ್ ಲೋಕದಲ್ಲಿ ಸಂಚಲನ ಮೂಡಿಸಿದ್ದ ಇವರು ಆಗಾಗ ಗಾಯಕ್ಕೆ ಒಳಗಾಗಿ ತಂಡದಿಂದ ಹೊರಗುಳಿದಿದ್ರು. ಕೊನೆಗೂ ಅವಕಾಶ ಸಿಗದ ಕಾರಣ ಈ ನಿರ್ಧಾರಕ್ಕೆ ಬಂದಿದ್ದಾರೆ.
ಏನಂದ್ರು ಆರನ್?
ಅಂತರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಬಗ್ಗೆ ವರುಣ್ ಆರನ್ ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಹಾಕಿದ್ದಾರೆ. ಕಳೆದ 20 ವರ್ಷಗಳಿಂದ ನಾನು ಕ್ರಿಕೆಟರ್ ಆಗಿದ್ದೇನೆ. ನನ್ನ ವೇಗದ ಬೌಲಿಂಗ್ನಲ್ಲಿ ಸೋಲು ಗೆಲುವು ಕಂಡಿದ್ದೇನೆ. ಬದುಕಿದ್ದೇನೆ, ಉಸಿರಾಡಿದ್ದೇನೆ ಮತ್ತು ಯಶಸ್ಸು ಸಾಧಿಸಿದ್ದೇನೆ. ನನಗೆ ಸಹಕರಿಸಿದ ಎಲ್ಲರಿಗೂ ಧನ್ಯವಾದಗಳು. ನಾನು ಅಧಿಕೃತವಾಗಿ ಇಂದು ನಿವೃತ್ತಿ ಘೋಷಿಸುತ್ತಿದ್ದೇನೆ ಎಂದು ಬರೆದುಕೊಂಡಿದ್ದಾರೆ.
ವರುಣ್ ಆರನ್ ಸಾಧನೆ
ಟೀಮ್ ಇಂಡಿಯಾ ಪರ ವರುಣ್ ಒಟ್ಟು 18 ಪಂದ್ಯ ಆಡಿದ್ದಾರೆ. ಟೆಸ್ಟ್ ಮತ್ತು ಏಕದಿನ ಕ್ರಿಕೆಟ್‌ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದಾರೆ. ಇವರು ತಲಾ 9 ಏಕದಿನ ಮತ್ತು ಟೆಸ್ಟ್ ಪಂದ್ಯ ಆಡಿದ್ದಾರೆ. ಟೆಸ್ಟ್ ಕ್ರಿಕೆಟ್‌ನಲ್ಲಿ 18 ವಿಕೆಟ್ ಪಡೆದರೆ, ಏಕದಿನ ಮಾದರಿಯಲ್ಲಿ 11 ವಿಕೆಟ್ ಉರುಳಿಸಿದ್ದಾರೆ.
ಇದನ್ನೂ ಓದಿ:ಕೆ.ಎಲ್ ರಾಹುಲ್ ಬೆನ್ನಲ್ಲೇ ಟೀಮ್ ಇಂಡಿಯಾ ಸ್ಟಾರ್ ಆಟಗಾರನಿಗೆ ಕೊಕ್; ಆತಂಕದಲ್ಲಿ ಆಲ್ರೌಂಡರ್
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ