/newsfirstlive-kannada/media/post_attachments/wp-content/uploads/2024/06/Rohit-Bumrah.jpg)
ಇಂದು ವೆಸ್ಟ್ ಇಂಡೀಸ್ನ ಬಾರ್ಬಡೋಸ್ ಕೆನ್ಸಿಂಗ್ಟನ್ ಓವಲ್‌ನಲ್ಲಿ ನಡೆದ 2024ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಸೂಪರ್ 8ರ ಆರಂಭಿಕ ಪಂದ್ಯದಲ್ಲಿ ಅಫ್ಘಾನ್ ತಂಡದ ವಿರುದ್ಧ ಟೀಮ್ ಇಂಡಿಯಾ ಗೆದ್ದು ಬೀಗಿದೆ.
ಟೀಮ್ ಇಂಡಿಯಾ ನೀಡಿದ ಬೃಹತ್ ರನ್ಗಳ ಬೆನ್ನತ್ತಿದ ಅಫ್ಘಾನ್ ತಂಡವು ನಿಗದಿತ 20 ಓವರ್ಗಳಲ್ಲಿ 134 ರನ್ಗಳಿಗೆ ಆಲೌಟ್ ಆಗಿದೆ. ಅಫ್ಘಾನ್ ತಂಡದ ಪರ ಗುರ್ಬಾಜ್ 11, ನಯಾಬ್ 17, ಓಮರ್ಝೈ 26, ನೂರ್ 12 ರನ್ ಗಳಿಸಿದ್ರು. ಟೀಮ್ ಇಂಡಿಯಾ ಪರ ಬೂಮ್ರಾ ಮತ್ತು ಅರ್ಷ್ದೀಪ್ ಸಿಂಗ್ ತಲಾ 3 ವಿಕೆಟ್ ಪಡೆದ್ರು. ಅಫ್ಘಾನ್ ತಂಡ ಟೀಮ್ ಇಂಡಿಯಾ ವಿರುದ್ಧ 47 ರನ್ಗಳಿಂದ ಸೋತಿದೆ.
ಮೊದಲು ಬ್ಯಾಟಿಂಗ್ ಮಾಡಿದ ಟೀಮ್ ಇಂಡಿಯಾ ಪರ ಕೊಹ್ಲಿ 24, ಪಂತ್ 20 ರನ್ ಗಳಿಸಿದ್ರು. ಸೂರ್ಯಕುಮಾರ್ ಯಾದವ್ ಕೇವಲ 28 ಬಾಲ್ನಲ್ಲಿ 3 ಸಿಕ್ಸರ್, 5 ಫೋರ್ ಸಮೇತ 53 ರನ್ ಸಿಡಿಸಿದ್ರು. ಹಾರ್ದಿಕ್ ಪಾಂಡ್ಯ 32, ಅಕ್ಷರ್ ಪಟೇಲ್ 12 ರನ್ ಗಳಿಸಿದ್ರು. ಟೀಮ್ ಇಂಡಿಯಾ ನಿಗದಿತ 20 ಓವರ್ನಲ್ಲಿ 8 ವಿಕೆಟ್ ನಷ್ಟಕ್ಕೆ 181 ರನ್ ಕಲೆ ಹಾಕಿತ್ತು.
ಇದನ್ನೂ ಓದಿ ಓದಿ:ಶ್ರೇಯಸ್ ಅಯ್ಯರ್ ಟೀಮ್ ಇಂಡಿಯಾದ ಮುಂದಿನ ಕ್ಯಾಪ್ಟನ್.. ಏನಿದು ಇನ್ಸೈಡ್ ಸ್ಟೋರಿ?
ವಿಶೇಷ ಸೂಚನೆ: ಕ್ರಿಕೆಟ್ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್