/newsfirstlive-kannada/media/post_attachments/wp-content/uploads/2024/11/Team-India-Women-2.jpg)
ಇತ್ತೀಚೆಗಷ್ಟೇ ಟೀಮ್ ಇಂಡಿಯಾ ವೆಸ್ಟ್ ಇಂಡೀಸ್ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯನ್ನು 2-1 ಅಂತರದಿಂದ ಗೆದ್ದುಕೊಂಡಿತ್ತು. ಈ ಬೆನ್ನಲ್ಲೇ ನಡೆದ ಮೊದಲ ಏಕದಿನ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಭಾರತ ಮಹಿಳಾ ತಂಡ ಗೆಲುವು ಸಾಧಿಸಿದೆ. ವಡೋದರ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ನಡೆದ ಮೊದಲ ಪಂದ್ಯದಲ್ಲಿ ಕ್ಯಾಪ್ಟನ್ ಹರ್ಮನ್‌ಪ್ರೀತ್ ಕೌರ್ ನೇತೃತ್ವದ ಟೀಮ್ ಇಂಡಿಯಾ ವೆಸ್ಟ್ ಇಂಡೀಸ್ ತಂಡವನ್ನು 211 ರನ್ಗಳಿಂದ ಸೋಲಿಸಿದೆ.
ಶತಕದ ಜೊತೆಯಾಟ
ಮೊದಲು ಬ್ಯಾಟಿಂಗ್ ಮಾಡಿದ ಟೀಮ್ ಇಂಡಿಯಾ ಪರ ಯುವ ಬ್ಯಾಟರ್ ಪ್ರತೀಕಾ ರಾವಲ್ ಹಾಗೂ ಮಂಧಾನ ಜೋಡಿ ಅಬ್ಬರಿಸಿತು. ಮೊದಲ ವಿಕೆಟ್‌ಗೆ 110 ರನ್‌ಗಳ ಅತ್ಯುತ್ತಮ ಜೊತೆಯಾಟದ ಕಾಣಿಕೆ ನೀಡಿತು. ವೆಸ್ಟ್ ಇಂಡೀಸ್ ವಿರುದ್ಧ ಅಮೋಘ ಬ್ಯಾಟಿಂಗ್ ಮಾಡಿದ ಮಧಾನ ಅರ್ಧಶತಕದ ಇನ್ನಿಂಗ್ಸ್ ಆಡಿದರು.
ಶತಕ ವಂಚಿತ ಸ್ಮೃತಿ
ಮಂಧಾನ ಶತಕ ಪೂರೈಸಲು ಸಾಧ್ಯವಾಗದೆ 91 ರನ್ ಗಳಿಸಿ ಔಟಾದರು. ಬಳಿಕ ಬಂದ ಕ್ಯಾಪ್ಟನ್ ಹರ್ಮನ್‌ಪ್ರೀತ್ ಕೌರ್, ರಿಚಾ ಘೋಷ್ ಮತ್ತು ಜೆಮಿಮಾ ರೋಡ್ರಿಗಸ್ ಕೂಡ ವೇಗದ ಇನ್ನಿಂಗ್ಸ್ ಆಡಿದ್ರು. ಉಪನಾಯಕಿ ಸ್ಮೃತಿ ಮಂಧಾನ 91 ರನ್‌ಗಳ ನೆರವಿನಿಂದ ಟೀಮ್ ಇಂಡಿಯಾ 50 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 314 ರನ್ ಗಳಿಸಿತು.
ವಿಂಡೀಸ್ ಆಲೌಟ್
ಇನ್ನು, ಟೀಮ್ ಇಂಡಿಯಾ ಟಾರ್ಗೆಟ್ ಬೆನ್ನತ್ತಿದ ವೆಸ್ಟ್ ಇಂಡೀಸ್ ಕೇವಲ 103 ರನ್ಗಳಿಗೆ ಆಲೌಟ್ ಆಯಿತು. ರೇಣುಕಾ ಸಿಂಗ್ ಮತ್ತು ಟೈಟಾಸ್ ಸಾಧು ಸ್ವಿಂಗ್ ದಾಳಿಗೆ ನಲುಗಿದ ವೆಸ್ಟ್ ಇಂಡೀಸ್ ಬ್ಯಾಟ್ಸ್‌ಮನ್‌ಗಳು ವೇಗವಾಗಿ ಪೆವಿಲಿಯನ್ ಸೇರಿದರು.
ಇದನ್ನೂ ಓದಿ:ಭಾರತ, ಇಂಗ್ಲೆಂಡ್ ಮಧ್ಯೆ T20 ಮತ್ತು ಏಕದಿನ ಸರಣಿ; ಬಲಿಷ್ಠ ತಂಡ ಪ್ರಕಟ; ಯಾರಿಗೆ ಸ್ಥಾನ?
ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ಫಸ್ಟ್ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ