ಟೀಮ್ ಇಂಡಿಯಾ ಬರೋಬ್ಬರಿ 6 ತಿಂಗಳ ನಂತರ ಟೆಸ್ಟ್ ಸೀರೀಸ್ಗೆ ಕಮ್ಬ್ಯಾಕ್!
ಸೆಪ್ಟೆಂಬರ್ 19ನೇ ತಾರೀಕಿನಿಂದ ಚೆನ್ನೈನಲ್ಲಿ ಬಾಂಗ್ಲಾದೇಶದ ವಿರುದ್ಧದ ಟೆಸ್ಟ್ ಸರಣಿ
ಬಾಂಗ್ಲಾದೇಶದ ವಿರುದ್ಧದ ಟೆಸ್ಟ್ ಸರಣಿ ಮೊದಲ ಪಂದ್ಯಕ್ಕೆ ಟೀಮ್ ಇಂಡಿಯಾ ಪ್ರಕಟ
ಟೀಮ್ ಇಂಡಿಯಾ ಬರೋಬ್ಬರಿ 6 ತಿಂಗಳ ನಂತರ ಟೆಸ್ಟ್ ಸೀರೀಸ್ ಆಡುತ್ತಿದೆ. ಟೀಂ ಇಂಡಿಯಾದ ಹೊಸ ಕೋಚ್ ಆಗಿರೋ ಗೌತಮ್ ಗಂಭೀರ್ಗೆ ರೆಡ್ ಬಾಲ್ ಕ್ರಿಕೆಟ್‌ನಲ್ಲಿ ಇದು ಮೊದಲ ಸರಣಿ ಆಗಿದೆ. 2025ರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಟೇಬಲ್‌ನಲ್ಲಿ ಅಗ್ರಸ್ಥಾನ ಖಾತ್ರಿ ಮಾಡಿಕೊಳ್ಳಲು ಟೀಮ್ ಇಂಡಿಯಾಗೆ ಬಾಂಗ್ಲಾದೇಶ ವಿರುದ್ದ ಸರಣಿ ಅತ್ಯಂತ ಮಹತ್ವದ್ದಾಗಿದೆ.
ಸೆಪ್ಟೆಂಬರ್ 19ನೇ ತಾರೀಕಿನಿಂದ ಚೆನ್ನೈನಲ್ಲಿ ಬಾಂಗ್ಲಾದೇಶದ ವಿರುದ್ಧದ ಟೆಸ್ಟ್ ಸರಣಿ ಆರಂಭವಾಗಲಿದೆ. ಕಳೆದ ಮಾರ್ಚ್ ತಿಂಗಳಲ್ಲಿ ಇಂಗ್ಲೆಂಡ್ ವಿರುದ್ಧ ಕೊನೆಯದಾಗಿ ಭಾರತ ತಂಡ ಟೆಸ್ಟ್ ಸರಣಿ ಆಡಿತ್ತು. ಟೀಮ್ ಇಂಡಿಯಾ ಈ ಸರಣಿಯನ್ನು 4-1ರ ಅಂತರದಲ್ಲಿ ಗೆದ್ದಿತ್ತು. ಈಗ ಸತತ 6 ತಿಂಗಳ ಬಳಿಕ ಟೀಮ್ ಇಂಡಿಯಾ ರೆಡ್ ಬಾಲ್ ಕ್ರಿಕೆಟ್‌ಗೆ ಕಮ್ಬ್ಯಾಕ್ ಮಾಡಿದೆ.
ಇತ್ತೀಚೆಗಷ್ಟೇ ಬಾಂಗ್ಲಾದೇಶ ಪಾಕಿಸ್ತಾನ ವಿರುದ್ಧ ನಡೆದ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿತ್ತು. ಹಾಗಾಗಿ ಅಳೆದು ತೂಗಿ ಬಿಸಿಸಿಐ ಸೆಲೆಕ್ಷನ್ ಕಮಿಟಿ ಬಾಂಗ್ಲಾದೇಶದ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಪಂದ್ಯಕ್ಕೆ ಬಲಿಷ್ಠ ಟೀಮ್ ಇಂಡಿಯಾ ಪ್ರಕಟಿಸಿದೆ.
ದುಲೀಪ್ ಟ್ರೋಫಿ ಮೊದಲ ಸುತ್ತಿನ ಪ್ರದರ್ಶನ ತಂಡದ ಆಯ್ಕೆ ಮಾಡಲಾಗಿದೆ. ದುರಂತ ಎಂದರೆ ಶ್ರೇಯಸ್ ಅಯ್ಯರ್, ಸಂಜು ಸ್ಯಾಮ್ಸನ್, ರಹಾನೆ, ಮಯಾಂಕ್ ಅಗರ್ವಾಲ್, ಕರುಣ್ ನಾಯರ್ ಯಾರಿಗೂ ತಂಡದಲ್ಲಿ ಅವಕಾಶ ಸಿಕ್ಕಿಲ್ಲ. ಕನ್ನಡಿಗ ಕೆ.ಎಲ್ ರಾಹುಲ್ ಮತ್ತು ಪಂತ್ ಇಬ್ಬರಿಗೂ ಅವಕಾಶ ನೀಡಿ ಬೀಸೋ ದೊಣ್ಣೆಯಿಂದ ಬಿಸಿಸಿಐ ತಪ್ಪಿಸಿಕೊಂಡಿದೆ.
ಬಾಂಗ್ಲಾ ವಿರುದ್ಧದ ಟೆಸ್ಟ್ಗೆ ಟೀಮ್ ಇಂಡಿಯಾ ಹೀಗಿದೆ!
ರೋಹಿತ್ ಶರ್ಮಾ (ಕ್ಯಾಪ್ಟನ್), ಯಶಸ್ವಿ ಜೈಸ್ವಾಲ್, ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಕೆ.ಎಲ್ ರಾಹುಲ್, ಸರ್ಫರಾಜ್ ಖಾನ್, ರಿಷಭ್ ಪಂತ್, ಧೃವ್ ಜುರೇಲ್, ಆರ್. ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್, ಜಸ್ಪ್ರೀತ್ ಬುಮ್ರಾ, ಯಶ್ ದಯಾಳ್.