18 ವರ್ಷಕ್ಕೆ ವಿಶ್ವ ಚೆಸ್ ಕಿರೀಟ ತೊಟ್ಟ ಗುಕೇಶ್; ಚೀನಾ​​ ಸೋಲಿಸಿ ಇತಿಹಾಸ ನಿರ್ಮಿಸಿದ ಭಾರತೀಯ

author-image
Veena Gangani
Updated On
18 ವರ್ಷಕ್ಕೆ ವಿಶ್ವ ಚೆಸ್ ಕಿರೀಟ ತೊಟ್ಟ ಗುಕೇಶ್; ಚೀನಾ​​ ಸೋಲಿಸಿ ಇತಿಹಾಸ ನಿರ್ಮಿಸಿದ ಭಾರತೀಯ
Advertisment
  • ಸಿಂಗಾಪುರದಲ್ಲಿ ನಡೆದ ವಿಶ್ವ ಚೆಸ್ ಚಾಂಪಿಯನ್‌ಶಿಪ್ 2024
  • ಚೀನಾದ ಡಿಂಗ್ ಲಿರೆನ್ ವಿರುದ್ಧವೇ ಗೆಲುವು ಸಾಧಿಸಿದ ಡಿ.ಗುಕೇಶ್
  • ಅತ್ಯಂತ ಕಿರಿಯ ವಿಶ್ವ ಚೆಸ್ ಚಾಂಪಿಯನ್ ಪಟ್ಟ ಸ್ವೀಕರಿಸಿದ ಡಿ.ಗುಕೇಶ್

ವಿಶ್ವ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ ಭಾರತ ಇತಿಹಾಸ ನಿರ್ಮಿಸಿದೆ. ಭಾರತದ ಚೆಸ್ ಆಟಗಾರ ಡಿ ಗುಕೇಶ್ ವಿಶ್ವ ಚಾಂಪಿಯನ್ ಆಗಿ ಹೊರ ಹೊಮ್ಮಿದ್ದಾರೆ. ಚೀನಾದ ಡಿಂಗ್ ಲಿರೆನ್​ನನ್ನು ಸೋಲಿಸುವ ಮೂಲಕ ಗುಕೇಶ್ ಡಿ ವಿಶ್ವ ಚಾಂಪಿಯನ್‌ಶಿಪ್ ಪ್ರಶಸ್ತಿಯನ್ನು ಗೆದ್ದುಕೊಂಡಿದ್ದಾರೆ.

ಇದನ್ನೂ ಓದಿ:ಅದ್ದೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕೀರ್ತಿ ಸುರೇಶ್​; ಬ್ಯೂಟಿಫುಲ್​ ಫೋಟೋಸ್​ ಇಲ್ಲಿವೆ

publive-image

ಸಿಂಗಾಪುರದಲ್ಲಿ ನಡೆದ ವಿಶ್ವ ಚೆಸ್ ಚಾಂಪಿಯನ್‌ಶಿಪ್ 2024 ಪ್ರಶಸ್ತಿಯನ್ನು ಭಾರತದ ಡಿ ಗುಕೇಶ್ 14ನೇ ಸುತ್ತಿನಲ್ಲಿ ಗೆದ್ದುಕೊಂಡಿದ್ದಾರೆ. ಭಾರತದ 18 ವರ್ಷದ ಗ್ರ್ಯಾಂಡ್ ಮಾಸ್ಟರ್ ಗುಕೇಶ್ 14ನೇ ಹಾಗೂ ಅಂತಿಮ ಪಂದ್ಯದಲ್ಲಿ ಚೀನಾದ ಡಿಂಗ್ ಲಿರೆನ್ ಅವರನ್ನು ಸೋಲಿಸಿ ವಿಶ್ವ ಚಾಂಪಿಯನ್ ಗೌರವಕ್ಕೆ ಪಾತ್ರರಾದರು. ಹಿಂದಿನ ವಿಶ್ವ ದಾಖಲೆಯನ್ನು ಗ್ಯಾರಿ ಕಾಸ್ಪರೋವ್ ಮಾಡಿದ್ದು 22ನೇ ವಯಸ್ಸಿಗೆ ಅನಾಟೊಲಿ ಕಾರ್ಪೋವ್ ಅವರನ್ನು ಸೋಲಿಸಿ 1985ರಲ್ಲಿ ವಿಶ್ವ ಚಾಂಪಿಯನ್ ಆಗಿದ್ದರು.


">December 12, 2024

ಇನ್ನು, ಗುಕೇಶ್ ವಿಶ್ವನಾಥನ್ ಆನಂದ್ ನಂತರ ಭಾರತದ ಎರಡನೇ ವಿಶ್ವ ಚೆಸ್ ಚಾಂಪಿಯನ್ ಆಗಿದ್ದಾರೆ. ಚೀನಾದ ಡಿಂಗ್ ಲಿರೆನ್ 55ನೇ ನಡೆಯಲ್ಲಿ ಒಂದು ಪ್ರಮಾದ ಮಾಡಿದ್ದು ಅವರು ಪಂದ್ಯದಿಂದ ನಿರ್ಗಮಿಸುವಂತೆ ಮಾಡಿತು. ಗುಕೇಶ್ 6.5ಕ್ಕೆ 7.5 ಅಂಕಗಳ ಅಂತರದಲ್ಲಿ ಜಯಗಳಿಸಿದರು. 14ನೇ ಗೇಮ್ ಡ್ರಾದಲ್ಲಿ ಅಂತ್ಯಗೊಂಡಿದ್ದರೆ ಪಂದ್ಯ ಟೈ-ಬ್ರೇಕ್‌ ಆಗುತ್ತಿತ್ತು. ಆದರೆ ಗುಕೇಶ್ 6.5ಕ್ಕೆ 7.5 ಅಂಕಗಳ ಅಂತರದಲ್ಲಿ ಜಯಗಳಿಸಿದರು.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment