newsfirstkannada.com

3 ಲಕ್ಷ ಲಂಚಕ್ಕೆ ಬೇಡಿಕೆಯಿಟ್ಟಿದ್ದ ಮಹಿಳಾ ತಹಶೀಲ್ದಾರ್; ಮನೆಗೆ ಕರೆಸಿ ಲಂಚ ಸ್ವೀಕರಿಸುವ ವೇಳೆ ಲಾಕ್​

Share :

Published March 21, 2024 at 7:30am

Update March 21, 2024 at 7:31am

    ಬೆಳಗ್ಗೆ 20 ಸಾವಿರ, ಸಂಜೆ 30 ಸಾವಿರ ರೂಪಾಯಿ ಲಂಚ ಸ್ವೀಕಾರ

    33 ಗುಂಟೆ ಜಮೀನನ್ನ ಭೂ ಪರಿವರ್ತನೆ ಮಾಡಲು ಲಂಚಕ್ಕೆ ಬೇಡಿಕೆ

    3 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟಿದ್ದ ಮಹಿಳಾ ತಹಶೀಲ್ದಾರ್​

ತುಮಕೂರು: ಲಂಚ ಸ್ವೀಕರಿಸುವ ವೇಳೆ ಮಹಿಳಾ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಚಿಕ್ಕನಾಯಕನಹಳ್ಳಿಯಲ್ಲಿ ಬೆಳಕಿಗೆ ಬಂದಿದೆ. ಗೀತಾ ಲೋಕಾಯುಕ್ತ ಬಲೆಗೆ ಬಿದ್ದ ತಹಶೀಲ್ದಾರ್.

ಚಿಕ್ಕನಾಯಕನಹಳ್ಳಿ ತಾಲೂಕಿನ ಗೋಡೆಕೆರೆ ಗ್ರಾಮದ ರೈತ ಮಲ್ಲಿಕಾರ್ಜುನ್ ಗೆ ಸೇರಿದ‌ 33 ಗುಂಟೆ ಜಮೀನನ್ನ ಭೂ ಪರಿವರ್ತನೆ ಮಾಡಿಕೊಡಲು 3 ಲಕ್ಷ ರೂಪಾಯಿ ಲಂಚಕ್ಕೆ ಗೀತಾ ಬೇಡಿಕೆಯಿಟ್ಟಿದ್ದರು. ಅದರಂತೆ ನಿನ್ನೆ ಬೆಳಗ್ಗೆ 20 ಸಾವಿರ ರೂಪಾಯಿ ಪಡೆದಿದ್ದರು. ಸಂಜೆ ವೇಳೆ 30 ಸಾವಿರ ರೂಪಾಯಿ ಸ್ವೀಕರಿಸುವಾಗ ರೇಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ತಹಶೀಲ್ದಾರ್ ಮನೆಗೆ ಕರೆಸಿಕೊಂಡು ಲಂಚ ಸ್ವೀಕರಿಸುವ ವೇಳೆ ಸಿಕ್ಕಿಬಿದ್ದಿದ್ದಾರೆ.

ತುಮಕೂರು ಲೋಕಾಯುಕ್ತ ಡಿವೈಎಸ್ ಪಿ ರಾಮಕೃಷ್ಣ ಹಾಗೂ ಉಮಾಶಂಕರ್ ನೇತೃತ್ವದಲ್ಲಿ ನಡೆದ ಕಾರ್ಯಚರಣೆ ವೇಳೆ ಗೀತಾ ಲಾಕ್ ಆಗಿದ್ದಾರೆ. ಸದ್ಯ ಚಿಕ್ಕನಾಯಕನಹಳ್ಳಿ ತಹಶೀಲ್ದಾರ್ ಗೀತಾ ರವರನ್ನ ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಲೋಕಾಯುಕ್ತ ಅಧಿಕಾರಿಗಳಿಂದ ತನಿಖೆ ಮುಂದುವರೆದಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

3 ಲಕ್ಷ ಲಂಚಕ್ಕೆ ಬೇಡಿಕೆಯಿಟ್ಟಿದ್ದ ಮಹಿಳಾ ತಹಶೀಲ್ದಾರ್; ಮನೆಗೆ ಕರೆಸಿ ಲಂಚ ಸ್ವೀಕರಿಸುವ ವೇಳೆ ಲಾಕ್​

https://newsfirstlive.com/wp-content/uploads/2024/03/gEETHA.jpg

Load More