ಸನಾತನ ಧರ್ಮದ ಕುರಿತು ವಿವಾದಾತ್ಮಕ ಹೇಳಿಕೆ ಕೇಸ್
ಸಿಎಂ ಸ್ಟಾಲಿನ್ ಪುತ್ರನ ವಿರುದ್ಧ ಮುಗಿಬಿದ್ದ ಬಿಜೆಪಿಗರು
ಉದಯನಿಧಿ ಸ್ಟಾಲಿನ್ ವಿರುದ್ಧ ತೇಜಸ್ವಿ ಸೂರ್ಯ ಕಿಡಿ
ಬೆಂಗಳೂರು: ಸನಾತನ ಧರ್ಮದ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್ ಪುತ್ರ ಉದಯನಿಧಿ ಸ್ಟಾಲಿನ್ ವಿರುದ್ಧ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಟ್ವೀಟ್ (X) ಮಾಡಿದ್ದಾರೆ.
ಈ ಸಂಬಂಧ ಟ್ವೀಟ್ (X) ಮಾಡಿರೋ ಸಂಸದ ತೇಜಸ್ವಿ ಸೂರ್ಯ, ಸಹಸ್ರಾರು ವರ್ಷಗಳಿಂದ ಈ ರಾಷ್ಟ್ರದ ಬುನಾದಿಯಾಗಿರುವ ನಮ್ಮ ಸನಾತನ ಸಂಸ್ಕೃತಿಯನ್ನು ನಿರ್ಮೂಲನೆ ಮಾಡುತ್ತಾರಂತೆ. ಸನಾತನ ಧರ್ಮವನ್ನು ಅಳಿಸುವ ಪ್ರಯತ್ನ ಕಳೆದ 1 ಸಾವಿರ ವರ್ಷದಿಂದಲೂ ನಡೆಯುತ್ತಲೇ ಬಂದಿದೆ. ಉದಯ್ ಸ್ಟಾಲಿನ್ ಈ ಮಾತು ಅದೇ ವಿಕೃತ ಮನಸ್ಥಿತಿಯನ್ನು ದರ್ಶಿಸುತ್ತದೆ ಎಂದಿದ್ದಾರೆ.
ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟ ಎಷ್ಟೇ ಪ್ರಯತ್ನ ಪಟ್ಟರೂ, ಏನೇ ಮುಖವಾಡ ಧರಿಸಿದ್ರೂ ಬಯಲಿಗೆ ಬಂದೇ ಬರುತ್ತದೆ. ಈಗ ಇವರ ರಾಷ್ಟ್ರ ವಿರೋಧಿ ಮಾನಸಿಕತೆ ಉದಯ್ ಸ್ಟಾಲಿನ್ ಮೂಲಕ ಬಹಿರಂಗವಾಗಿದೆ. ಇಂತಹ ರಾಷ್ಟ್ರ ವಿರೋಧಿ ಶಕ್ತಿಗಳಿಗೆ ತಕ್ಕ ಪಾಠ ಕಲಿಸುವ ಜವಾಬ್ದಾರಿ ಪ್ರತಿಯೊಬ್ಬ ಭಾರತೀಯನ ಮೇಲಿದೆ ಎಂದು ಕಿಡಿಕಾರಿದ್ದಾರೆ.
ಉದಯನಿಧಿ ಸ್ಟಾಲಿನ್ ಹೇಳಿದ್ದೇನು..?
ಇತ್ತೀಚೆಗೆ ಚೆನ್ನೈನಲ್ಲಿ ನಡೆದ ಸಮಾವೇಶದಲ್ಲಿ ಭಾಗಿಯಾಗಿದ್ದ ತಮಿಳುನಾಡು ಸರ್ಕಾರದ ಕ್ರೀಡಾ ಮತ್ತು ಯುವಜನ ವ್ಯವಹಾರಗಳ ಸಚಿವ ಉದಯನಿಧಿ, ಸನಾತನ ಧರ್ಮದ ವಿರುದ್ಧ ಮಾತಾಡಿದರು. ಕೆಲವು ವಿಷಯಗಳನ್ನು ವಿರೋಧಿಸಲು ಸಾಧ್ಯವಿಲ್ಲ. ಬದಲಿಗೆ ಅವುಗಳನ್ನು ಕಿತ್ತೊಗೆಯಬೇಕು. ಸನಾತನ ಧರ್ಮ ಡೆಂಗ್ಯೂ, ಸೊಳ್ಳೆ, ಮಲೇರಿಯಾ, ಕರೋನಾ ಇದ್ದಂತೆ. ಅವುಗಳನ್ನು ನಿರ್ಮೂಲನೆ ಮಾಡಬೇಕು ಎಂದಿದ್ದರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ