/newsfirstlive-kannada/media/post_attachments/wp-content/uploads/2025/07/Telangana-1.jpg)
ತೆಲಂಗಾಣದ ಸಂಗಾರೆಡ್ಡಿ ಜಲ್ಲೆಯ ಪಾಶಮೈಲರಾಮ್‌ನಲ್ಲಿರುವ ಸಿಗಾಚಿ ರಾಸಾಯನಿಕ ಕಾರ್ಖಾನೆಯಲ್ಲಿ ಭಾರೀ ಸ್ಫೋಟ ಸಂಭವಿಸಿದೆ.. ದುರ್ಘಟನೆಯಲ್ಲಿ ಮೃತರ ಸಂಖ್ಯೆ 42ಕ್ಕೆ ಏರಿಕೆ ಆಗಿದೆ. ರಿಯಾಕ್ಟರ್‌ನಲ್ಲಿನ ಸ್ಫೋಟದಿಂದಾಗಿ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ.
ಸ್ಫೋಟದಲ್ಲಿ ಗಾಯಗೊಂಡ ಗಾಯಾಳುಗಳನ್ನ ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.. ಕಾರ್ಖಾನೆಯೊಳಗೆ ಮತ್ತಷ್ಟು ಕಾರ್ಮಿಕರು ಸಿಲುಕಿರುವ ಸಾಧ್ಯತೆ ಇದೆ ಎಂಬ ಶಂಕೆಗಳು ವ್ಯಕ್ತವಾಗಿದೆ.. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸ್ತಿದ್ದಾರೆ.
ಇದನ್ನೂ ಓದಿ: ಇವತ್ತಿನಿಂದ ಟೋಲ್ ದರ ಹೆಚ್ಚಳ.. ಬೆಂಗಳೂರು ಪ್ರಯಾಣಿಕರು ಓದಲೇಬೇಕಾದ ಸ್ಟೋರಿ..!
ರಾಸಾಯನಿಕ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟವು ಎಷ್ಟು ಪ್ರಬಲವಾಗಿತ್ತೆಂದರೆ, ಕೆಲವು ಕಾರ್ಮಿಕರು ಸುಮಾರು 100 ಮೀಟರ್ ದೂರದವರೆಗೂ ಹಾರಿ ಬಿದ್ದಿದ್ದಾರೆ. ಘಟನೆಗೆ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಸಂತಾಪ ಸೂಚಿಸಿದ್ದು, ಅವಶೇಷಗಳಡಿ ಸಿಲುಕಿರುವ ಕಾರ್ಮಿಕರನ್ನು ರಕ್ಷಿಸಲು ಮತ್ತು ಅವರಿಗೆ ಸೂಕ್ತ ವೈದ್ಯಕೀಯ ಆರೈಕೆಯನ್ನು ಒದಗಿಸಲು ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಇದನ್ನೂ ಓದಿ: ಇಂದಿನಿಂದ ರೈಲು ಪ್ರಯಾಣವೂ ದುಬಾರಿ.. ಐದು ವರ್ಷಗಳ ನಂತರ ಟಿಕೆಟ್ ರೇಟ್ ಹೆಚ್ಚಳ..
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ