/newsfirstlive-kannada/media/post_attachments/wp-content/uploads/2025/06/Temba_Bavuma.jpg)
2025ರ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಗೆಲ್ಲಿಸಿಕೊಟ್ಟ ಬೆನ್ನಲ್ಲೇ ದಕ್ಷಿಣ ಆಫ್ರಿಕಾ ತಂಡದ ನಾಯಕ ತೆಂಬಾ ಬವುಮಾ ಅವರು ಟೆಸ್ಟ್ ಸರಣಿಯಿಂದ ಹೊರಗುಳಿದಿದ್ದಾರೆ. ಬವುಮಾ ಅನುಪಸ್ಥಿತಿಯಲ್ಲಿ ಆಫ್ರಿಕಾ ತಂಡವನ್ನು ಕೇಶವ್ ಮಹರಾಜ್ ಅವರು ಮುನ್ನಡೆಸಲಿದ್ದಾರೆ.
ದಕ್ಷಿಣ ಆಫ್ರಿಕಾ ತಂಡ ಇದೇ ಜೂನ್ 28 ರಿಂದ ಜಿಂಬಾಬ್ವೆ ವಿರುದ್ಧ ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಲಿದೆ. ಈ ಟೆಸ್ಟ್ ಸರಣಿಯಿಂದ ನಾಯಕ ತೆಂಬಾ ಬವುಮಾ ಅವರನ್ನು ಹೊರಗಿಡಲಾಗಿದೆ. ತೆಂಬಾ ಬವುಮಾ ಸದ್ಯ ಎಡಗಾಲಿನ ಮಂಡಿನೋವು (Left Hamstring Strain) ನಿಂದ ತೀವ್ರವಾಗಿ ಬಳಲುತ್ತಿದ್ದು ಬ್ಯಾಟಿಂಗ್, ಫೀಲ್ಡಿಂಗ್ ಮಾಡುವ ಸ್ಥಿತಿಯಲ್ಲಿ ಅವರಿಲ್ಲ. ಹೀಗಾಗಿ ಜಿಂಬಾಬ್ವೆ ವಿರುದ್ಧದ ಸರಣಿಯಲ್ಲಿ ಆಡುತ್ತಿಲ್ಲ ಎಂದು ಹೇಳಲಾಗಿದೆ.
ಇದನ್ನೂ ಓದಿ:ಓಪನರ್ ಜೈಸ್ವಾಲ್, ಕ್ಯಾಪ್ಟನ್ ಗಿಲ್ ಸಿಡಿಲಬ್ಬರದ ಶತಕ.. ಬೃಹತ್ ಮೊತ್ತದತ್ತ ಟೀಮ್ ಇಂಡಿಯಾ
ಇತ್ತೀಚೆಗಷ್ಟೇ ತೆಂಬಾ ಬವುಮಾ ನೇತೃತ್ವದಲ್ಲಿ ಆಫ್ರಿಕಾ ತಂಡ ಐಸಿಸಿ 2025ರ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಟ್ರೋಫಿಗೆ ಮುತ್ತಿಕ್ಕಿತ್ತು. ಇಂಗ್ಲೆಂಡ್ನ ಲಾರ್ಡ್ಸ್ ಮೈದಾನದಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಫೈನಲ್ ಪಂದ್ಯದಲ್ಲಿ ಆಫ್ರಿಕಾ ತಂಡ ಭರ್ಜರಿ ಜಯಭೇರಿ ಬಾರಿಸಿತ್ತು. ಇದರಿಂದ ಬರೋಬ್ಬರಿ 27 ವರ್ಷಗಳ ಬಳಿಕ ಆಫ್ರಿಕಾ ತಂಡ ಐಸಿಸಿ ಟ್ರೋಫಿಯನ್ನು ಗೆದ್ದುಕೊಂಡು ಸಂಭ್ರಮಿಸಿತ್ತು.
ಫೈನಲ್ ಪಂದ್ಯದ ವೇಳೆ ತೀವ್ರ ಗಾಯಕ್ಕೆ ತುತ್ತಾಗಿದ್ದ ತೆಂಬಾ ಬವುಮಾ ಕ್ರೀಸ್ಗೆ ಬಂದು ಬ್ಯಾಟಿಂಗ್ ಮಾಡಿದ್ದರು. ಆಸ್ಟ್ರೇಲಿಯಾ ವಿರುದ್ಧ ಹಾಫ್ಸೆಂಚುರಿ ಬಾರಿಸಿ ಆಫ್ರಿಕಾ ಗೆಲುವಿಗೆ ಪ್ರಮುಖ ಪಾತ್ರವಹಿಸಿದ್ದರು. ಸದ್ಯ ಜಿಂಬಾಬ್ವೆ ವಿರುದ್ಧದ ಟೆಸ್ಟ್ ಪಂದ್ಯಗಳನ್ನು ಆಡುತ್ತಿಲ್ಲ. ಇವರ ಬದಲಿಗೆ ಕೇಶವ್ ಮಹಾರಾಜ್ ಅವರು ಆಫ್ರಿಕಾ ತಂಡದ ನಾಯಕತ್ವದ ಜವಾಬ್ದಾರಿಯನ್ನು ವಹಿಸಿಕೊಳ್ಳಲ್ಲಿದ್ದಾರೆ.
ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.30ಕ್ಕೆ ನ್ಯೂಸ್ಫಸ್ಟ್ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ