ದೇವಸ್ಥಾನದಲ್ಲಿ ದರ್ಶನ್​ ಫೋಟೋಗೆ ಪೂಜೆ.. ಅಧಿಕ ಪ್ರಸಂಗಿ ಅರ್ಚಕನಿಗೆ ಸರಿಯಾಗಿ ಪಾಠ ಕಲಿಸಿದ ಧಾರ್ಮಿಕ ದತ್ತಿ ಇಲಾಖೆ

author-image
AS Harshith
Updated On
ದರ್ಶನ್ ಇಂದು ಜಾಮೀನು ಕೋರಿ ಅರ್ಜಿ ಸಲ್ಲಿಸುವ ಸಾಧ್ಯತೆ.. ಅದಕ್ಕೆ ಪೊಲೀಸರು ಏನ್ ಮಾಡಿದ್ದಾರೆ ಗೊತ್ತಾ?
Advertisment
  • ದೇವಸ್ಥಾನದಲ್ಲಿ ದರ್ಶನ್​ ಫೋಟೋ ಇಟ್ಟು ಪೂಜೆ ಮಾಡಿದ ಅರ್ಚಕ
  • ಪೂಜೆ ಮಾಡಿದ ಅರ್ಚಕನಿಗೆ ಮಹಾ ಮಂಗಳಾರತಿ ಮಾಡಿದ ಧಾರ್ಮಿಕ ದತ್ತಿ ಇಲಾಖೆ
  • ಫೋಟೋಗೆ ಮಂಗಳಾರತಿ ಎತ್ತಿ ದೇವಸ್ಥಾನದ ರೂಢಿ ಸಂಪ್ರದಾಯಕ್ಕೆ ವಿರುದ್ಧವಾಗಿ ನಡೆದುಕೊಂಡ ಅರ್ಚಕ

ಬಳ್ಳಾರಿ: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಸ್ಯಾಂಡಲ್​ವುಡ್​ ನಟ ದರ್ಶನ್​ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ವಿಚಾರಣಾಧೀನ ಕೈದಿಯಾಗಿ ಶಿಕ್ಷೆ ಅನುಭವಿಸುತ್ತಿದ್ದಾರೆ. ಹೀಗಿರುವಾಗ ಅರ್ಚಕರೊಬ್ಬರು ದೇವಸ್ಥಾನದಲ್ಲಿ ​ನಟ ದರ್ಶನ್​ ಫೋಟೋಗೆ ಪೂಜೆ ಮಾಡುವ ಮೂಲಕ ತನ್ನ ಸ್ಥಾನ ಕುತ್ತುತಂದುಕೊಂಡಿದ್ದಾರೆ.

ಇದನ್ನೂ ಓದಿ: ಚಿಕ್ಕಪ್ಪನಿಂದ ಮಗನ ಕೊಲೆ.. ಮಚ್ಚಿನಿಂದ ಕೊಚ್ಚಿ ರಸ್ತೆ ಬದಿಗೆ ತಂದು ಬಿಸಾಕಿದ ದುಷ್ಕರ್ಮಿಗಳು 

publive-image

ದೊಡ್ಡಬಸವೇಶ್ವರ ದೇವಸ್ಥಾನದಲ್ಲಿ ಮಲ್ಲಿ ಎಂಬ ಅರ್ಚಕ ನಟ ದರ್ಶನ್ ಪೋಟೊ ಇಟ್ಟು ಪೂಜೆ ಮಾಡಿದ್ದಾರೆ. ಪೂಜೆ ಮಾಡಿ ಮಂಗಳಾರತಿ ಎತ್ತಿದ್ದಾರೆ. ಆದರೀಗ ದೇವಸ್ಥಾನದ ಸಂಪ್ರದಾಯಕ್ಕೆ ವಿರುದ್ಧವಾಗಿ ನಡೆದುಕೊಂಡಿದ್ದಕ್ಕೆ ಅರ್ಚಕ ಸ್ಥಾನದಿಂದ ಅಮಾನತು ಆಗಿದ್ದಾರೆ.

ಇದನ್ನೂ ಓದಿ: ಅಂಗನವಾಡಿ ಬಾಲಕನ ಮೇಲೆ ಹರಿದ ಖಾಸಗಿ ಶಾಲಾ ವಾಹನ.. 5 ವರ್ಷದ ಪುಟಾಣಿ ಸಾವು

ಅರ್ಚಕ ಮಲ್ಲಿ ದೇವಸ್ಥಾನದ ರೂಢಿ ಸಂಪ್ರದಾಯಕ್ಕೆ ಧಕ್ಕೆ ಹಾಗೂ ಕರ್ತವ್ಯ ನಿರ್ಲಕ್ಷ್ಯದ ಹಿನ್ನೆಲೆ ಅಮಾನತು ಆಗಿದ್ದಾರೆ. ಧಾರ್ಮಿಕ ದತ್ತಿ ಇಲಾಖೆ ಕಾರ್ಯ ನಿರ್ವಾಹಕ ಅಧಿಕಾರಿ ಹನುಮಂತಪ್ಪರವರು ಅರ್ಚಕನನ್ನು ಅಮಾನತು ಮಾಡಿದ್ದಾರೆ. ಅಲ್ಲದೇ ವಿಚಾರಣೆ ಮುಗಿಯೋವರೆಗೂ ದೇವಸ್ಥಾನಕ್ಕೆ ಬಾರದಂತೆ ನಿಷೇಧ ಹೇರಿದ್ದಾರೆ ಎನ್ನಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment