newsfirstkannada.com

VIDEO: ವಾಟರ್ ಟ್ಯಾಂಕರ್ ಮತ್ತು ಬೈಕ್ ನಡುವೆ ಭೀಕರ ಅಪಘಾತ.. ಓರ್ವ ಸಾವು, ಮತ್ತೋರ್ವ ಗಂಭೀರ

Share :

Published April 17, 2024 at 11:59am

  ಕುಡಿದ ಅಮಲಿನಲ್ಲಿ ವಾಹನ ಚಲಾಯಿಸಿ ಅಪಘಾತ

  ಭೀಕರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಬೈಕ್​ ಸವಾರ

  ಅಪಘಾತದ ಸಿಸಿಟಿವಿ ದೃಶ್ಯ ನ್ಯೂಸ್​​ಫಸ್ಟ್ಗೆ ಲಭ್ಯ

ಬೆಂಗಳೂರು: ವಾಟರ್ ಟ್ಯಾಂಕರ್ ಮತ್ತು ಬೈಕ್ ನಡುಬೆ ಭೀಕರ ಅಪಘಾತ ಸಂಭವಿಸಿದ್ದು, ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಮಾಗಡಿ ರಸ್ತೆಯ ಕಾವೇರಿ ಫ್ಯಾಷನ್ಸ್ ಬಳಿ ಘಟನೆ ನಡೆದಿದೆ. ಬೈಕ್ ಹಾಗೂ ವಾಟರ್ ಟ್ಯಾಂಕರ್ ಮುಖಾಮುಖಿ ಡಿಕ್ಕಿ ಹೊಡೆದಿದೆ. ಭಾನುವಾರ ರಾತ್ರಿ ಈ ಭೀಕರ ಅಪಘಾತ ಸಂಭವಿಸಿದೆ.

ಕುಡಿದ ಅಮಲಿನಲ್ಲಿ ವಾಹನ ಚಲಾಯಿಸಿ ಅಪಘಾತ ನಡೆದಿದೆ. ಟ್ಯಾಂಕರ್ ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಹಿಂಬದಿ ಸವಾರ ಹರೀಶ್ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಮತ್ತೊಬ್ಬ ಸವಾರ ಸುಚಿತ್ ಗೆ ಗಂಭೀರ ಗಾಯವಾಗಿದೆ.

ಇದನ್ನೂ ಓದಿ: iPhone​ ಕೊಡಿಸಿಲ್ಲವೆಂದು ಮನೆಬಿಟ್ಟು ಹೋದ 10 ತರಗತಿ ಬಾಲಕ.. ಮಗನನ್ನು ನೆನೆದು ಕಣ್ಣೀರು ಹಾಕುತ್ತಿರುವ ಪೋಷಕರು

ಭೀಕರ ಅಪಘಾತದ ಸಿಸಿಟಿವಿ ದೃಶ್ಯಾವಳಿ ನ್ಯೂಸ್ ಫಸ್ಟ್ ಗೆ ಲಭ್ಯವಾಗಿದ್ದು, ದೃಶ್ಯದಲ್ಲಿ ಟ್ಯಾಂಕರ್ ಡಿಕ್ಕಿ ಹೊಡೆದ ರಭಸಕ್ಕೆ ಓರ್ವ ಸವಾರ ಹಾರಿ ಬಿದ್ದಿದ್ದಾನೆ. ವಾಟರ್ ಟ್ಯಾಂಕರ್ ಬೈಕ್ ಹಾಗೂ ಇನ್ನೊಬ್ಬ ಸವಾರನನ್ನ ಎಳೆದುಕೊಂಡು ಹೋಗಿದೆ. ಕಾಮಾಕ್ಷಿಪಾಳ್ಯ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

VIDEO: ವಾಟರ್ ಟ್ಯಾಂಕರ್ ಮತ್ತು ಬೈಕ್ ನಡುವೆ ಭೀಕರ ಅಪಘಾತ.. ಓರ್ವ ಸಾವು, ಮತ್ತೋರ್ವ ಗಂಭೀರ

https://newsfirstlive.com/wp-content/uploads/2024/04/Accident-5.jpg

Load More