ಹೊರವಲಯದ ಜಪ್ಪಿನ ಮೊಗರು ಎಂಬಲ್ಲಿ ನಡೆದ ಘಟನೆ
ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನುಜ್ಜುಗುಜ್ಜು!
ಭೀಕರ ಸರಣಿ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಮಂಗಳೂರು: ಮಿನಿ ಲಾರಿ, ಕಾರು ಹಾಗೂ ಸಾರಿಗೆ ಬಸ್ ನಡುವೆ ಸರಣಿ ಅಪಘಾತ ಸಂಭವಿಸಿರೋ ಘಟನೆ ಹೊರವಲಯದ ಜಪ್ಪಿನ ಮೊಗರು ಎಂಬಲ್ಲಿ ನಡೆದಿದೆ.
ಈ ಭೀಕರ ಸರಣಿ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಕಾರು ಚಾಲಕನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ತಲಪಾಡಿಯಿಂದ ಮಂಗಳೂರಿಗೆ ಬರುತ್ತಿದ್ದ ಮಿನಿ ಲಾರಿಯು ವ್ಯಾಗನರ್ ಕಾರಿಗೆ ಡಿಕ್ಕಿ ಹೊಡೆದಿದೆ. ಇದೇ ವೇಳೆ ಹಿಂದಿನಿಂದ ವೇಗವಾಗಿ ಬರುತ್ತಿದ್ದ ಕೇರಳ ಸಾರಿಗೆ ಬಸ್ಗೆ ಕಾರು ಡಿಕ್ಕಿ ಹೊಡೆದಿದೆ. ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಮಿನಿ ಲಾರಿ ಹಾಗೂ ಬಸ್ ನಡುವೆ ಸಿಲುಕಿದ ಕಾರು ಸಂಪೂರ್ಣ ನುಜ್ಜುಗುಜ್ಜು ಆಗಿದೆ. ಇನ್ನೂ ಈ ಅಪಘಾತದ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ