newsfirstkannada.com

ಭೀಕರ ಅಪಘಾತ.. ಕಾರಿಗೆ ಡಿಕ್ಕಿ ಹೊಡೆದು ಪರಾರಿಯಾದ ಲಾರಿ ಚಾಲಕ; ಪಾದಚಾರಿ ಸ್ಥಳದಲ್ಲೇ ಸಾವು

Share :

Published July 10, 2024 at 2:10pm

  ಲಾರಿ ಚಾಲಕ ಕಾರಿಗೆ ಡಿಕ್ಕಿ ಹೊಡೆದು ಪರಾರಿಯಾದ ಘಟನೆ

  ಅಪಘಾತದಲ್ಲಿ ಓರ್ವ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ

  ಲಾರಿ ಚಾಲಕನ ಅಜಾಗರೂಕತೆಯಿಂದ ಈ ಭೀಕರ ಅಪಘಾತ

ತುಮಕೂರು: ಕಂಟೈನರ್ ಲಾರಿಯೊಂದು ಪಾದಚಾರಿಗಳು ಹಾಗೂ ಕಾರಿಗೆ ಡಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ಮಧುಗಿರಿ ತಾಲೂಕಿನ ಮಿಡಿಗೇಶಿ ಬಳಿಯ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.
ಕಂಟೈನರ್‌ ಲಾರಿಯೊಂದು ಮಧುಗಿರಿ ಕಡೆಯಿಂದ ಪಾವಗಡಕ್ಕೆ ತೆರಳುತ್ತಿತ್ತು. ಲಾರಿ ಚಾಲಕನ ಅಜಾಗರೂಕತೆಯಿಂದ ಈ ಭೀಕರ ಅಪಘಾತ ಸಂಭವಿಸಿದೆ.

ಮಿಡಿಗೇಶಿ ಬಳಿಯ ಹೆದ್ದಾರಿಯಲ್ಲಿ ಪಾದಚಾರಿಗಳಿಬ್ಬರಿಗೆ ಕಂಟೈನರ್ ಲಾರಿ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಮತ್ತೊಬ್ಬನ ಸ್ಥಿತಿ ಗಂಭೀರವಾಗಿದೆ. ನಿಂಗಪ್ಪ (50) ಮೃತ ದುರ್ದೈವಿ.

ಇದನ್ನೂ ಓದಿ: ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಬೈಕ್​.. ಇಬ್ಬರು ಸ್ಥಳದಲ್ಲೇ ಸಾವು 

ಲಾರಿ ಚಾಲಕ ಪಾದಚಾರಿಗೆ ಡಿಕ್ಕಿ ಹೊಡೆದು ಬಳಿಕ ಇಂಡಿಕಾ ಕಾರಿಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದಾನೆ. ನಿಂಗಪ್ಪ ಸ್ಥಳದಲ್ಲೇ ಸಾವನ್ನಪ್ಪಿದ್ರೆ, ಗಾಯಾಳು ಸಿದ್ದಪ್ಪಗೆ ಮಧುಗಿರಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಿಡಿಗೇಶಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಭೀಕರ ಅಪಘಾತ.. ಕಾರಿಗೆ ಡಿಕ್ಕಿ ಹೊಡೆದು ಪರಾರಿಯಾದ ಲಾರಿ ಚಾಲಕ; ಪಾದಚಾರಿ ಸ್ಥಳದಲ್ಲೇ ಸಾವು

https://newsfirstlive.com/wp-content/uploads/2024/07/Tumkur-Accident-Death.jpg

Load More