ನವೆಂಬರ್ 19ರಂದು ಅಹ್ಮದಾಬಾದ್‌ನಲ್ಲಿ ವಿಶ್ವಕಪ್ ಫೈನಲ್ ಮ್ಯಾಚ್
ಅಂದು ಏರ್ ಇಂಡಿಯಾ ವಿಮಾನದಲ್ಲಿ ಬಾಂಬ್ ಸ್ಫೋಟಿಸುವ ಬೆದರಿಕೆ
ಸಿಖ್ ಸಮುದಾಯದವರು ಅಂದು ವಿಮಾನದಲ್ಲಿ ಪ್ರಯಾಣ ಮಾಡಬೇಡಿ
ವಿಶ್ವಕಪ್ ಲೀಗ್ ಹಂತದ ಪಂದ್ಯಗಳು ಮುಗಿಯುತ್ತಾ ಬಂದಿದ್ದು, ಸೆಮಿಫೈನಲ್‌ಗೆ ತಂಡಗಳು ಸಜ್ಜಾಗಿವೆ. ಸೆಮಿಫೈನಲ್ ಮುಗಿದ ಬಳಿಕ ರೋಚಕ ಫೈನಲ್ ಪಂದ್ಯಕ್ಕೆ ದಿನಗಣನೆ ಶುರುವಾಗಲಿದೆ. ನವೆಂಬರ್ 19ರಂದು ಅಹ್ಮದಾಬಾದ್‌ನಲ್ಲಿ ವಿಶ್ವಕಪ್ ಫೈನಲ್ ಮ್ಯಾಚ್ ನಡೆಯಲಿದೆ. ಈ ಫೈನಲ್ ಹಣಾಹಣಿಯ ಕಾತರ ಹೆಚ್ಚಾಗಿರುವ ಮಧ್ಯೆ ಭಾರತದ ಮೇಲೆ ಉಗ್ರರ ಕರಿ ನೆರಳು ಬಿದ್ದಿದೆ.
ಖಲಿಸ್ತಾನಿ ಉಗ್ರ ನಾಯಕ ಗುರ್‌ಪತ್ವಂತ್ ಸಿಂಗ್ ಪನ್ ಅವರು ಭಾರತಕ್ಕೆ ಬೆದರಿಕೆ ಹಾಕಿರೋ ವಿಡಿಯೋ ರಿಲೀಸ್ ಮಾಡಿದ್ದಾರೆ. ನವೆಂಬರ್ 19 ರಂದು ಏರ್ ಇಂಡಿಯಾ ವಿಮಾನದಲ್ಲಿ ಬಾಂಬ್ ಸ್ಫೋಟ ಸಂಭವಿಸುತ್ತೇವೆ. ಅಂದು ಭಾರತದ ಸಿಖ್ ಸಮುದಾಯದವರು ಯಾರು ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣ ಮಾಡಬೇಡಿ ಎಂದು ಕರೆ ನೀಡಲಾಗಿದೆ.
ಈ ಬಾರಿಯ ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡ ಫೈನಲ್ ಪ್ರವೇಶಿಸುವ ಸಾಧ್ಯತೆ ಹೆಚ್ಚಾಗಿದೆ. ಹೀಗಾಗಿ ಭಯೋತ್ಪಾದನಾ ನಾಯಕ ಗುರ್‌ಪತ್ವಂತ್ ಸಿಂಗ್ ಅವರು ನವೆಂಬರ್ 19ರಂದು ಬಾಂಬ್ ಸ್ಫೋಟಿಸುವ ಬೆದರಿಕೆ ಹಾಕಿದ್ದಾರೆ. ಪ್ರಮುಖವಾಗಿ ದೆಹಲಿಯ ಇಂದಿರಾಗಾಂಧಿ ವಿಮಾನ ನಿಲ್ದಾಣವನ್ನು ಬಂದ್ ಮಾಡಬೇಕು ಎಂದು ಒತ್ತಾಯಿಸಿದ್ದಾನೆ. ಅಂದು ಯಾರಾದ್ರೂ ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣ ಯೋಜನೆ ಹಾಕಿದ್ದಾರೆ ರದ್ದು ಮಾಡಿ ಎಂದು ಹೇಳಿದ್ದಾರೆ.
ಪ್ರಮುಖವಾಗಿ ಸಿಖ್ ಸಮುದಾಯವನ್ನು ಎಚ್ಚರಿಸಿರುವ ಖಲಿಸ್ತಾನಿ ನಾಯಕ, ನವೆಂಬರ್ 19ರಂದು ನಿಮ್ಮ ಜೀವಕ್ಕೆ ಅಪಾಯವಿದೆ. ಯಾವುದೇ ಕಾರಣಕ್ಕೂ ಭಾರತಕ್ಕೆ ವಿಮಾನದಲ್ಲಿ ಪ್ರಯಾಣ ಮಾಡಬೇಡಿ ಎಂದು ಎಚ್ಚರಿಸಿದ್ದಾರೆ. ಖಲಿಸ್ತಾನಿ ನಾಯಕ ರಿಲೀಸ್ ಮಾಡಿರೋ ಬೆದರಿಕೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ವಿಶ್ವಕಪ್ ಫೈನಲ್ ಪಂದ್ಯಕ್ಕೆ ಹೆಚ್ಚಿನ ಭದ್ರತೆ ಒದಗಿಸುವ ಸಾಧ್ಯತೆ ಇದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ