newsfirstkannada.com

ರಾಮನೂರಿನಲ್ಲಿ ರಾಜ್ಯದ ವಿವಿಧ ಮಠಾಧಿಪತಿಗಳು.. ಅಯೋಧ್ಯೆಯಲ್ಲಿ ಗತಕಾಲದ ವೈಭವ!

Share :

Published January 20, 2024 at 4:19pm

Update January 20, 2024 at 6:57pm

    ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಯ ಸಂಭ್ರಮ

    ರಾಮ ಲಲ್ಲಾ ಪ್ರಾಣ ಪ್ರತಿಷ್ಠಾಪನೆಯ ಕಾರ್ಯಕ್ರಮದಲ್ಲಿ ಭಾಗಿ

    ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಯಿಂದ ಪ್ರಮುಖ ಮಠಾಧೀಶರು

ಅಯೋಧ್ಯೆ: ರಾಮಜನ್ಮಭೂಮಿಯಲ್ಲಿ ರಾಮ ಲಲ್ಲಾ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆಗೆ ಕ್ಷಣಗಣನೆ ಶುರುವಾಗಿದೆ. ದೈವಿಕ ನಗರಿ ಅಯೋಧ್ಯೆ ರಾಮಮಂದಿರದ ಉದ್ಘಾಟನೆಯ ಸಂಭ್ರಮದಲ್ಲಿ ತೇಲುತ್ತಿದೆ. ರಾಮನೂರಿಗೆ ಇಡೀ ದೇಶದ ಸಾಧು, ಸಂತರು, ಧಾರ್ಮಿಕ ಮುಖಂಡರ ಆಗಮನವಾಗುತ್ತಿದೆ.

ಜನವರಿ 22ರಂದು ಅಯೋಧ್ಯೆಯಲ್ಲಿ ರಾಮಮಂದಿರದ ಲೋಕಾರ್ಪಣೆ ನೆರವೇರಲಿದೆ. ಈ ಸಮಾರಂಭದ ಹಿನ್ನೆಲೆಯಲ್ಲಿ ಅಯೋಧ್ಯೆಗೆ ಕರ್ನಾಟಕದ ವಿವಿಧ ಮಠಗಳ ಪೀಠಾಧಿಪತಿಗಳು ಆಗಮಿಸಿದ್ದಾರೆ. ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಆಹ್ವಾನದ ಹಿನ್ನೆಲೆಯಲ್ಲಿ ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಯಿಂದ ಪ್ರಮುಖ ಮಠಾಧೀಶರು ಈಗಾಗಲೇ ಅಯೋಧ್ಯೆಯನ್ನು ತಲುಪಿದ್ದಾರೆ.

ಕಾಗಿನೆಲೆ ಮಹಾ ಸಂಸ್ಥಾನ ಕನಕ ಗುರುಪೀಠದ ಜಗದ್ಗುರು ಶ್ರೀ ನಿರಂಜನಾನಂದ ಮಹಾಸ್ವಾಮೀಜಿ, ಚಿತ್ರದುರ್ಗದ ಮಾದರ ಚನ್ನಯ್ಯ ಗುರುಪೀಠದ ಜಗದ್ಗುರು ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಮಹಾಸ್ವಾಮೀಜಿ, ಹೊಸದುರ್ಗದ ಶ್ರೀ ಜಗದ್ಗುರು ಕುಂಚಿಟಿಗ ಮಹಾಸಂಸ್ಥಾನ ಮಠದ ಜಗದ್ಗುರು ಶ್ರೀ ಶಾಂತವೀರ ಮಹಾಸ್ವಾಮೀಜಿ, ಸಿದ್ದರಾಮೇಶ್ವರ ಮಹಾ ಸಂಸ್ಥಾನ ಭೋವಿ ಗುರುಪೀಠದ ಜಗದ್ಗುರು ಶ್ರೀ ಇಮ್ಮಡಿ ಸಿದ್ದರಾಮಯ್ಯ ಮಹಾಸ್ವಾಮೀಜಿ, ಹರಿಹರದ ಶ್ರೀ ವಾಲ್ಮೀಕಿ ಗುರುಪೀಠದ ಜಗದ್ಗುರು ಶ್ರೀ ವಾಲ್ಮೀಕಿ ಪ್ರಸನ್ನಾನಂದ ಮಹಾಸ್ವಾಮೀಜಿ, ಪಂಚಮಸಾಲಿ ಗುರುಪೀಠದ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿ ಮಹಾಸ್ವಾಮೀಜಿ, ಮಧುರೆನ ಭಗೀರಥ ಪೀಠದ ಜಗದ್ಗುರು ಶ್ರೀ ಪುರುಷೋತ್ತಮಾನಂದ ಪುರಿ ಮಹಾಸ್ವಾಮೀಜಿ ಅಯೋಧ್ಯೆಯನ್ನು ತಲುಪಿದ್ದಾರೆ.

ರಾಜ್ಯದ ವಿವಿಧ ಮಠಾಧಿಪತಿಗಳು ಇದೇ ಜನವರಿ 22ರಂದು ರಾಮಮಂದಿರದಲ್ಲಿ ನಡೆಯಲಿರುವ ಶ್ರೀರಾಮ ಪ್ರಾಣ ಪ್ರತಿಷ್ಠಾಪನೆಯಲ್ಲಿ ಭಾಗಿಯಾಗುತ್ತಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ರಾಮನೂರಿನಲ್ಲಿ ರಾಜ್ಯದ ವಿವಿಧ ಮಠಾಧಿಪತಿಗಳು.. ಅಯೋಧ್ಯೆಯಲ್ಲಿ ಗತಕಾಲದ ವೈಭವ!

https://newsfirstlive.com/wp-content/uploads/2024/01/Ayodhya-Airport-2.jpg

Load More