/newsfirstlive-kannada/media/post_attachments/wp-content/uploads/2023/11/CKB_MURDER.jpg)
ಚಿಕ್ಕಬಳ್ಳಾಪುರ: ಗ್ರಾಮದ ಹಾಲಿನ ಡೈರಿಯಲ್ಲಿ ಹಾಲು ಹಾಕುವಾಗ ಸ್ವಂತ ಚಿಕ್ಕಪ್ಪನನ್ನೇ ಮಚ್ಚಿನಿಂದ ಕೊಚ್ಚಿ ಹತ್ಯೆ ಮಾಡಿ ಆರೋಪಿ ಎಸ್ಕೇಪ್ ಆಗಿರುವ ಘಟನೆ ಗೌರಿಬಿದನೂರು ತಾಲೂಕಿನ ಚೋಳಶೆಟ್ಟಿಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ನಿವಾಸಿ ರಾಮಕೃಷ್ಣಪ್ಪ ಹತ್ಯೆಯಾದ ವ್ಯಕ್ತಿ. ಗುಂಡ್ಲಕೊತ್ತೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ರತ್ನಮ್ಮ ಅವರ ಗಂಡ ಹತ್ಯೆಯಾಗಿರುವರು. ಎಂದಿನಂತೆ ಬೆಳಗ್ಗೆ 7:30ರ ಸುಮಾರಿಗೆ ಮೃತನು ಗ್ರಾಮದ ಹಾಲಿನ ಡೈರಿಗೆ ಬಂದು ಹಾಲು ಹಾಕುತ್ತಿದ್ದನು. ಈ ವೇಳೆ ಪ್ಲಾನ್ ರೂಪಿಸಿಕೊಂಡು ಬಂದಿದ್ದ ಆರೋಪಿಯು ಮಚ್ಚಿನಿಂದ ತನ್ನ ಚಿಕ್ಕಪ್ಪನನ್ನೇ ಕೊಚ್ಚಿ ಕೊಲೆ ಮಾಡಿ ಸ್ಥಳದಿಂದ ಪರಾರಿಯಾಗಿದ್ದಾನೆ. ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಕೊಲೆ ಮಾಡಿದ್ದಾನೆ ಎಂದು ಶಂಕೆ ವ್ಯಕ್ತಪಡಿಸಲಾಗಿದೆ.
ಇನ್ನು ಈ ಸಂಬಂಧ ಚೋಳಶೆಟ್ಟಿಹಳ್ಳಿ ಗ್ರಾಮಕ್ಕೆ ಚಿಕ್ಕಬಳ್ಳಾಪುರ ಎಸ್​​ಪಿ ಡಿ.ಎಲ್ ನಾಗೇಶ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us