Advertisment

25ಕ್ಕೂ ಹೆಚ್ಚು ಪ್ರಯಾಣಿಕರಿದ್ದ ಸಾರಿಗೆ ಬಸ್​ ಪಲ್ಟಿ.. ಡ್ರೈವರ್ ಸೇರಿ ಮೂವರು ಗಂಭೀರ; ಆಕ್ಸಿಡೆಂಟ್ ಆಗಿದ್ದೇಗೆ?

author-image
Bheemappa
Updated On
25ಕ್ಕೂ ಹೆಚ್ಚು ಪ್ರಯಾಣಿಕರಿದ್ದ ಸಾರಿಗೆ ಬಸ್​ ಪಲ್ಟಿ.. ಡ್ರೈವರ್ ಸೇರಿ ಮೂವರು ಗಂಭೀರ; ಆಕ್ಸಿಡೆಂಟ್ ಆಗಿದ್ದೇಗೆ?
Advertisment
  • ಬಸ್​ ಎಲ್ಲಿಂದ ಎಲ್ಲಿಗೆ ಹೋಗುವಾಗ ಈ ಘಟನೆ ನಡೆಯಿತು?
  • ಘಟನೆಯಲ್ಲಿ ಗಾಯಗೊಂಡವರು ಕೆ.ಆರ್.ಆಸ್ಪತ್ರೆಗೆ ದಾಖಲು
  • ದೊಡ್ಡ ಅನಾಹುತದಿಂದ ಜಸ್ಟ್​ ಮಿಸ್, ಜೀವ ಉಳಿಸಿಕೊಂಡ ಜನ

ಮೈಸೂರು: ವೇಗವಾಗಿ ಬಂದು ತಿರುವು ಪಡೆದುಕೊಳ್ಳುವಾಗ ಚಾಲಕನ ನಿಯಂತ್ರಣ ತಪ್ಪಿ ಸಾರಿಗೆ ಬಸ್​ವೊಂದು ಪಲ್ಟಿಯಾಗಿ ಕಂದಕಕ್ಕೆ ಬಿದ್ದಿದೆ. ಪರಿಣಾಮ ಚಾಲಕ ಸೇರಿ ಮೂವರ ಸ್ಥಿತಿ ಗಂಭೀರವಾಗಿದ್ದು ಕೆಲ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳು ಆಗಿವೆ.

Advertisment

publive-image

ಇದನ್ನೂ ಓದಿ: ವಿಶ್ವಕಪ್ ಗೆಲ್ಲಿಸಿಕೊಟ್ಟು ವಿದಾಯ.. 31 ತಿಂಗಳು, ಅಮೂಲಾಗ್ರ ಬದಲಾವಣೆ.. ಕನ್ನಡದ ಕಣ್ಮಣಿಗೆ ಬಿಗ್ ಸೆಲ್ಯೂಟ್​..!

ನಂಜನಗೂಡು ತಾಲೂಕಿನ ಮರಡಿಹುಂಡಿ ಗ್ರಾಮದ ಬಳಿ ವೇಗವಾಗಿ ಬಂದು ತಿರುವು ಪಡೆದುಕೊಳ್ಳುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿ ಕಂದಕಕ್ಕೆ ಬಿದ್ದಿದೆ. ಇದರಿಂದ ಬಸ್​ನಲ್ಲಿದ್ದ 25ಕ್ಕೂ ಹೆಚ್ಚು ಪ್ರಯಾಣಿಕರ ಪೈಕಿ ಚಾಲಕ ಸೇರಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಉಳಿದ ಕೆಲ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳು ಆಗಿವೆ. ಗಾಯಾಳುಗಳನ್ನು ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ. 346 ನಂಬರ್ ಇರುವ ಸಾರಿಗೆ ಬಸ್ ಬಿಳುಗಲಿ ಗ್ರಾಮದಿಂದ ಎಸ್.ಹೊಸಕೋಟೆ ಮಾರ್ಗವಾಗಿ ಮೈಸೂರಿಗೆ ತೆರಳುವಾಗ ಈ ಅಪಘಾತ ಸಂಭವಿಸಿದೆ. ವರುಣ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Advertisment

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment
Advertisment
Advertisment