newsfirstkannada.com

ಪೊಲೀಸ್​ ಠಾಣೆ ಆವರಣದಲ್ಲಿ ಅನುಮಾನಾಸ್ಪದ ವ್ಯಕ್ತಿಯ ಕೊಳೆತ ಶವ ಪತ್ತೆ; ಇದು ಕೊಲೆಯೋ? ಆತ್ಮಹತ್ಯೆಯೋ?

Share :

Published March 24, 2024 at 8:25am

Update March 24, 2024 at 8:27am

    ಸಂಚಾರಿ ಪೊಲೀಸ್ ಠಾಣಾ ಆವರಣದಲ್ಲಿ ಅನುಮಾನಾಸ್ಪದ ವ್ಯಕ್ತಿಯ ಶವ ಪತ್ತೆ

    ಜಪ್ತಿ ಮಾಡಿ ನಿಲ್ಲಿಸಿದ್ದ ಬಸ್ ಹಿಂಬದಿಯ ಸೀಟ್​ನಲ್ಲಿ ಸಿಕ್ತು ವ್ಯಕ್ತಿಯ ಕೊಳೆತ ಶವ

    40-45 ವರ್ಷದ ವ್ಯಕ್ತಿಯ ಮೃತದೇಹ, 15 ದಿನಗಳ ಹಿಂದೆಯೇ ಸಾವನ್ನಪ್ಪಿರುವ ಶಂಕೆ

ಬೆಳಗಾವಿ: ಪೊಲೀಸ್ ಠಾಣೆ ಆವರಣದಲ್ಲಿ ಅನುಮಾನಾಸ್ಪದ ವ್ಯಕ್ತಿಯ ಶವವೊಂದು ಪತ್ತೆಯಾಗಿದೆ. ಬೆಳಗಾವಿ ನಗರದ ಕ್ಯಾಂಪ್‌ ಪ್ರದೇಶದ ಸಂಚಾರಿ ಪೊಲೀಸ್ ಠಾಣಾ ಆವರಣದಲ್ಲಿ ಶವ ಸಿಕ್ಕಿದೆ.

ಜಪ್ತಿ ಮಾಡಿ ನಿಲ್ಲಿಸಿದ್ದ ಬಸ್ ಹಿಂಬದಿಯ ಸೀಟ್ ನಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು, ಅಂದಾಜು 40-45 ವರ್ಷದ ವ್ಯಕ್ತಿಯ ಮೃತದೇಹ ಎಂದು ಅಂದಾಜಿಸಲಾಗಿದೆ. ಕಳೆದ ಹದಿನೈದು ದಿನಗಳ ಹಿಂದೆಯೇ ಸಾವನ್ನಪ್ಪಿದ ಶಂಕೆ ವ್ಯಕ್ತವಾಗಿದೆ.

ಇದನ್ನೂ ಓದಿ: ‘ಲೋಕ’ ಚುನಾವಣೆ ಹೊತ್ತಲ್ಲೇ ಯಾಗಕ್ಕೆ ಮುಂದಾದ ಬಿಎಸ್​​ವೈ.. ಮಗ ವಿಜಯೇಂದ್ರ ಜೊತೆ ಹೊರನಾಡಿನಲ್ಲಿ ಮಾಜಿ ಸಿಎಂ

ಸ್ಥಳಕ್ಕೆ ಕ್ಯಾಂಪ್‌ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದು ಕೊಲೆಯೋ ಅಥವಾ ಅಸಹಜ ಸಾವೋ ಎಂಬುವುದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಬೆಳಗಾವಿ ಬೀಮ್ಸ್ ಆಸ್ಪತ್ರೆಗೆ ಮೃತದೇಹ ರವಾನಿಸಲಾಗಿದೆ. ಕ್ಯಾಂಪ್‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಪೊಲೀಸ್​ ಠಾಣೆ ಆವರಣದಲ್ಲಿ ಅನುಮಾನಾಸ್ಪದ ವ್ಯಕ್ತಿಯ ಕೊಳೆತ ಶವ ಪತ್ತೆ; ಇದು ಕೊಲೆಯೋ? ಆತ್ಮಹತ್ಯೆಯೋ?

https://newsfirstlive.com/wp-content/uploads/2024/03/Belagavi-2.jpg

Load More