3ನೇ ಆಷಾಢ ಶುಕ್ರವಾರ; ಮೈಸೂರು ಚಾಮುಂಡಿ ಬೆಟ್ಟಕ್ಕೆ ಹರಿದು ಬಂದ ಭಕ್ತ ಸಾಗರ

author-image
Ganesh
Updated On
3ನೇ ಆಷಾಢ ಶುಕ್ರವಾರ; ಮೈಸೂರು ಚಾಮುಂಡಿ ಬೆಟ್ಟಕ್ಕೆ ಹರಿದು ಬಂದ ಭಕ್ತ ಸಾಗರ
Advertisment
  • ಮುಂಜಾನೆ 3:30ಕ್ಕೆ ಜರುಗಿದ ವಿವಿಧ ಅಭಿಷೇಕ
  • ಬೆಳಗ್ಗೆ 6 ಗಂಟೆಯಿಂದ ಭಕ್ತರ ದರ್ಶನಕ್ಕೆ ಅವಕಾಶ
  • ಅಹಿತಕರ ಘಟನೆ ಜರುಗದಂತೆ ಪೊಲೀಸ್ ಭದ್ರತೆ

ಆಷಾಢ ಮಾಸ ಹಿನ್ನೆಲೆ ನಾಡಿನ ಅಧಿದೇವತೆ ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆಯಲು ರಾಜ್ಯ ಸೇರಿದಂತೆ ದೇಶದ ಇತರೆ ಭಾಗಗಳಿಂದಲೂ ಸಹ ಭಕ್ತರು ಮೈಸೂರಿಗೆ ಆಗಮಿಸುತ್ತಾರೆ.

ಶುಕ್ರವಾರ ಇಂದು ಮೂರನೇ ಆಷಾಢ ಮಾಸದ ಸಂಭ್ರಮ ಅದ್ಧೂರಿಯಾಗಿ ನೆರವೇರುತ್ತಿದ್ದು, ತಾಯಿ ಚಾಮುಂಡೇಶ್ವರಿ ಗಜ ಲಕ್ಷ್ಮಿ ಮತ್ತು ನಾಗ ಲಕ್ಷ್ಮಿ ಅಲಂಕಾರದಲ್ಲಿ ಕಂಗೊಳಿಸುತ್ತಿದ್ದಾಳೆ. ಆಷಾಢ ಶುಕ್ರವಾರದ ಹಿನ್ನೆಲೆ ದೇವಸ್ಥಾನದ ಒಳಾಂಗಣವನ್ನ ಕಮಲದ ಹೂವಿನಿಂದ ಅಲಂಕಾರ ಮಾಡಲಾಗಿದೆ.

ಇದನ್ನೂ ಓದಿ:ಅಮೆರಿಕ, ರಷ್ಯಾ, ಚೀನಾ ಅಲ್ಲವೇ ಅಲ್ಲ.. ಈ ದೇಶದ ಸೈನಿಕರಿಗೆ ವಿಶ್ವದಲ್ಲೇ ಅತಿ ಹೆಚ್ಚು ಸಂಬಳ..!

publive-image

ತಾಯಿ ದರ್ಶನ ಕಣ್ತುಂಬಿಕೊಳ್ಳಲು ಮುಂಜಾನೆ 5 ಗಂಟೆಯಿಂದಲೇ ಮೆಟ್ಟಿಲು ಮಾರ್ಗವಾಗಿ ಬರುತ್ತಿರುವ ಭಕ್ತರು ದರ್ಶನ ಪಡೆದು ದೇವಿ ಕೃಪೆಗೆ ಪಾತ್ರರಾಗುತ್ತಿದ್ದಾರೆ. ಇನ್ನು, ಮುಂಜಾನೆ 3:30 ರಿಂದಲೇ ವಿವಿಧ ಪೂಜಾ ಕಾರ್ಯಕ್ರಮಗಳು ಶುರುವಾಗಿದೆ. ಬೆಳಗ್ಗೆ 6ಗಂಟೆಯಿಂದ ಸಾರ್ವಜನಿಕ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆಯುತ್ತಿದ್ದಾರೆ.

ಇದನ್ನೂ ಓದಿ: ಆಂಗ್ಲರಿಗೆ ನಿತೀಶ್​ ರೆಡ್ಡಿ ಡಬಲ್​ ಶಾಕ್.. 3ನೇ ಟೆಸ್ಟ್​​ನ ಮೊದಲ ದಿನದ ಅಂತ್ಯಕ್ಕೆ ಆಗಿದ್ದೇ ಬೇರೆ..!

publive-image

ನೂಕು ನುಗ್ಗುಲು ಉಂಟಾಗದ ರೀತಿಯಲ್ಲಿ ಬ್ಯಾರಿಕೆಡ್ ವ್ಯವಸ್ಥೆ ಮಾಡಲಾಗಿದೆ. ಟಿಕೆಟ್ ಖರೀದಿ ಮಾಡಿ ಬರುವವರಿಗೆ ಪ್ರತ್ಯೇಕ ದರ್ಶನದ ವ್ಯವಸ್ಥೆ ಇಡಲಾಗಿದೆ. ಧರ್ಮ ದರ್ಶನ ಹಾಗೂ ಮೆಟ್ಟಿಲುಗಳ ಮೂಲಕವು ಭಕ್ತರು ಬರುತ್ತಿದ್ದಾರೆ. ಇನ್ನು ಚಾಮುಂಡಿ ಬೆಟ್ಟಕ್ಕೆ ಖಾಸಗಿ ವಾಹನಗಳ ನಿಷೇಧ ಮಾಡಲಾಗಿದೆ. ಲಲಿತಮಹಲ್ ಮೈದಾನದಿಂದ ಉಚಿತ ಸಾರಿಗೆ ಬಸ್ ವ್ಯವಸ್ಥೆ ಮಾಡಲಾಗಿದೆ.

ಇದನ್ನೂ ಓದಿ: ಅಮೆರಿಕ, ರಷ್ಯಾ, ಚೀನಾ ಅಲ್ಲವೇ ಅಲ್ಲ.. ಈ ದೇಶದ ಸೈನಿಕರಿಗೆ ವಿಶ್ವದಲ್ಲೇ ಅತಿ ಹೆಚ್ಚು ಸಂಬಳ..!

publive-image

ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.30ಕ್ಕೆ ನ್ಯೂಸ್‌ಫಸ್ಟ್‌ಚಾನೆಲ್​​ನಲ್ಲಿ ‘ರನ್ ಭೂಮಿ’ ವೀಕ್ಷಿಸಿ

Advertisment