/newsfirstlive-kannada/media/post_attachments/wp-content/uploads/2024/06/HVR_ATTACK.jpg)
ಹಾವೇರಿ: ಗ್ಯಾರೇಜ್ನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಮಚ್ಚಿನಿಂದ ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ಜಿಲ್ಲೆಯ ಸವಣೂರು ಪಟ್ಟಣದ ಗೋಕಾಕ್ ಸರ್ಕಲ್ನಲ್ಲಿ ನಡೆದಿದೆ.
ಆಬಿದ್ ಅಲ್ಲಾಭಕ್ಷ್ ಚೌದ್ರಿ (30) ಮೇಲೆ ಹಲ್ಲೆ. ಈ ವ್ಯಕ್ತಿಯು ತಮ್ಮ ಗ್ಯಾರೇಜ್ನಲ್ಲಿ ಕೆಲಸ ಮಾಡಿಕೊಂಡಿದ್ದರು. ಈ ವೇಳೆ ಎರಡು ಬೈಕ್ಗಳಲ್ಲಿ ಬಂದ ದುಷ್ಕರ್ಮಿಗಳು ಏನನ್ನು ಮಾತನಾಡದೇ ಏಕಾಏಕಿ ಮಚ್ಚಿನಿಂದ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆ. ಬಳಿಕ ಘಟನಾ ಸ್ಥಳದಿಂದ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.
ಮಚ್ಚಿನಿಂದ ಗಂಭೀರವಾಗಿ ಗಾಯಗೊಂಡಿರುವ ವ್ಯಕ್ತಿಯನ್ನು ಸವಣೂರು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆಸ್ಪತ್ರೆಯಲ್ಲಿ ವ್ಯಕ್ತಿಯ ಸ್ಥಿತಿ ಚಿಂತಾಜನಕವಾಗಿದೆ. ಸವಣೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ