/newsfirstlive-kannada/media/post_attachments/wp-content/uploads/2025/07/RAMYA-CASE-1.jpg)
ಬೆಂಗಳೂರು: ನಟಿ ರಮ್ಯಾ ಬೆಂಬಲಕ್ಕೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಬಂದಿದ್ದಾರೆ. ರಮ್ಯಾ ಪರ ಶಿವಣ್ಣ ಮತ್ತು ಗೀತಾ ದಂಪತಿ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದು, ಅದನ್ನು ರಮ್ಯಾ ಅವರು ಶೇರ್ ಮಾಡಿದ್ದಾರೆ. ನಿನ್ನೆಯಷ್ಟೇ ಡಾ.ರಾಜ್ ಕುಟುಂಬದ ವಿನಯ್ ರಾಜ್ಕುಮಾರ್ ರಮ್ಯಾಗೆ ಬೆಂಬಲ ವ್ಯಕ್ತಪಡಿಸಿದ್ದರು. ಇದೀಗ ಶಿವಣ್ಣ ದಂಪತಿ ಕೂಡ ರಮ್ಯಾ ಪರ ಬ್ಯಾಟ್ ಬೀಸಿದ್ದಾರೆ.
ಇದನ್ನೂ ಓದಿ: ಐ ಲವ್ ಯೂ ಹೇಳೋದ್ರಲ್ಲಿ ತಪ್ಪಿಲ್ಲ -ಪೋಕ್ಸೋ ಕೇಸ್ಗೆ ಸಂಬಂಧಿಸಿ ಹೈಕೋರ್ಟ್ನಿಂದ ಮಹತ್ವದ ತೀರ್ಪು
ಶಿವಣ್ಣ ಹೇಳಿದ್ದೇನು..?
ರಮ್ಯಾ ಅವರ ವಿರುದ್ಧ ಬಳಸಿರುವ ಪದಗಳು ಖಂಡನೀಯ. ಯಾವ ಮಹಿಳೆಯ ವಿರುದ್ಧವೂ ಆ ರೀತಿ ಮಾತನಾಡುವುದು ಸರಿಯಲ್ಲ; ಅದನ್ನು ನಾವು ಸಹಿಸಬಾರದು.
ಮಹಿಳೆಯರನ್ನು ತಾಯಿಯಾಗಿ, ಅಕ್ಕನಾಗಿ, ಮಗಳಾಗಿ, ಮಡದಿಯಾಗಿ ಮತ್ತು ಮೊಟ್ಟ ಮೊದಲು ಒಬ್ಬ ವ್ಯಕ್ತಿಯಾಗಿ ಗೌರವಿಸುವುದು ತುಂಬಾ ಮುಖ್ಯ.
ಸೋಶಿಯಲ್ ಮೀಡಿಯಾ ತುಂಬಾ ಬಲಿಷ್ಠವಾದ ಅಸ್ತ್ರ, ಅದನ್ನು ತಮ್ಮ ಏಳಿಗೆಗಾಗಿ ಬಳಸಬೇಕೇ ಹೊರತು, ಅವಾಚ್ಯ ಶಬ್ದಗಳಿಂದ ನಿಂದಿಸಿ, ದ್ವೇಷ- ಅಸೂಯೆಯನ್ನು ಬಿತ್ತಲು ಬಳಸಬಾರದು.
ನಿಮ್ಮ ನಿಲುವು ಸರಿಯಿದೆ, ರಮ್ಯಾ. ನಿಮ್ಮ ಜೊತೆಗೆ ನಾವು ಸದಾ ನಿಲ್ಲುತ್ತೇವೆ.
ಇಂತಿ,
ಶಿವರಾಜ್‌ಕುಮಾರ್
ಗೀತಾ ಶಿವರಾಜ್‌ಕುಮಾರ್
ಏನಿದು ಪ್ರಕರಣ..
ದರ್ಶನ್ ಅವರ ಜಾಮೀನು ರದ್ದು ಕೋರಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದೆ. ಅರ್ಜಿ ವಿಚಾರಣೆಯನ್ನು ಕೈಗೆತ್ತಿಕೊಂಡಿರುವ ಕೋರ್ಟ್, ವಾದ ಪ್ರತಿವಾದವನ್ನು ಪೂರ್ಣಗೊಳಿಸಿದ್ದು, ತೀರ್ಪನ್ನು ಕಾಯ್ದಿರಿಸಿದೆ. ವಿಚಾರಣೆ ನ್ಯಾಯಾಲಯವು ಪ್ರಕರಣಕ್ಕೆ ಸಂಬಂಧಿಸಿ ಕೆಲವು ವಿಚಾರಗಳನ್ನು ಪ್ರಸ್ತಾಪ ಮಾಡಿತ್ತು. ಸುಪ್ರೀಂ ಕೋರ್ಟ್ನ ಅಭಿಪ್ರಾಯ ಪ್ರಸ್ತಾಪಿಸಿ ರಮ್ಯಾ ಅವರು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಒಂದನ್ನು ಶೇರ್ ಮಾಡಿದ್ದರು.
ಇದನ್ನೂ ಓದಿ: ಪಂತ್ ಭಾವುಕ ಸಂದೇಶ.. ಟೆಸ್ಟ್ನಿಂದ ಹೊರಬಿದ್ದ ಬೆನ್ನಲ್ಲೇ ತಂಡಕ್ಕೆ ಬಿಗ್ ಮೆಸೇಜ್..!
ಅದರಲ್ಲಿ ರಮ್ಯಾ ಅವರು ಹೀಗೆ ಬರೆದಿದ್ದರು, ಏನೆಂದರೆ.. ಭಾರತದ ಸಾಮಾನ್ಯ ಪ್ರಜೆಗೂ ಸುಪ್ರೀಂ ಕೋರ್ಟ್ ಆಶಾಕಿರಣ. ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಬಹುದು ಎಂದು ನಾನು ನಂಬಿದ್ದೇನೆ ಅಂತ ಬರೆದುಕೊಂಡಿದ್ದರು. ಆ ಬೆನ್ನಲ್ಲೇ ನಟ ದರ್ಶನ್ ಅಭಿಮಾನಿಗಳು ಸೋಷಿಯಲ್ ಮೀಡಿಯಾದಲ್ಲಿ ನಟಿ ರಮ್ಯಾ ಅವರಿಗೆ ಕೆಟ್ಟದಾಗಿ ಕಾಮೆಂಟ್ಸ್ ಮಾಡಿದ್ದರು. ಇದರಿಂದ ಕೆರಳಿರುವ ರಮ್ಯಾ, ಸೋಶಿಯಲ್ ಮೀಡಿಯಾದಲ್ಲಿ ದರ್ಶನ್ ಅಭಿಮಾನಿಗಳಿಗೆ ಎಚ್ಚರಿಕೆ ನೀಡಿದ್ದರು. ಅಷ್ಟಕ್ಕೂ ಸುಮ್ಮನಾಗದ ಅವರು, ನಿನ್ನೆ ಬೆಂಗಳೂರು ಸೈಬರ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಿಸಿದ್ದಾರೆ. ಈ ಸಂಬಂಧ ಪೊಲೀಸರು ಎಫ್ಐಆರ್ ದಾಖಲಿಸಿ ತನಿಖೆ ನಡೆಸ್ತಿದ್ದಾರೆ.
ಇದನ್ನೂ ಓದಿ: ದರ್ಶನ್ ಅಭಿಮಾನಿಗಳ ವಿರುದ್ಧದ ತನಿಖೆ ಹೇಗೆ ನಡೆಯುತ್ತದೆ? ಕಮಿಷನರ್ ಹೇಳಿದ್ದೇನು..?
Thank you Shivanna! Means a lot! pic.twitter.com/EEyrpZYeSi
— Ramya/Divya Spandana (@divyaspandana) July 29, 2025
ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.30ಕ್ಕೆ ನ್ಯೂಸ್ಫಸ್ಟ್ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ