newsfirstkannada.com

ಸುಮಲತಾ ಅಂಬರೀಶ್ ನೇತೃತ್ವದಲ್ಲಿ ಹೆದ್ದಾರಿ ಬಂದ್‌ಗೆ ಬಿಜೆಪಿಯಲ್ಲೇ ವಿರೋಧ; ಸಂಸದ ಪ್ರತಾಪ್ ಸಿಂಹ ಹೇಳಿದ್ದೇನು?

Share :

20-08-2023

    ಸುಮಲತಾ ಅಂಬರೀಶ್ ನೇತೃತ್ವದಲ್ಲಿ ಹೆದ್ದಾರಿ ಬಂದ್ ನಡೆಯಬೇಕಿತ್ತು

    ಸಂಸದ ಪ್ರತಾಪ್ ಸಿಂಹ ಆಕ್ಷೇಪ ಹಿನ್ನೆಲೆ ಹೋರಾಟದಲ್ಲಿ ಬದಲಾವಣೆ

    ಕಾವೇರಿ ಹೋರಾಟಕ್ಕೆ ಬಿ.ಎಸ್ ಯಡಿಯೂರಪ್ಪ ಎಂಟ್ರಿ ಕೊಡ್ತಾರಾ?

ಮಂಡ್ಯ: ಕಾವೇರಿ ನೀರನ್ನು ತಮಿಳುನಾಡಿಗೆ ಬಿಡುಗಡೆ ಮಾಡುತ್ತಿರೋದಕ್ಕೆ ಭಾರೀ ವಿರೋಧ ವ್ಯಕ್ತವಾಗುತ್ತಿದೆ. ರಾಜ್ಯ ಸರ್ಕಾರ ಕೂಡಲೇ ತಮಿಳುನಾಡಿಗೆ ನೀರು ಬಿಡುವುದನ್ನು ಸ್ಥಗಿತಗೊಳಿಸಬೇಕೆಂದು ರೈತರು ಹೋರಾಟ ನಡೆಸುತ್ತಿದ್ದಾರೆ. ಈ ಹೋರಾಟದ ಭಾಗವಾಗಿ ನಾಳೆ ಬಿಜೆಪಿ ನಾಯಕರು ಮಂಡ್ಯದಲ್ಲಿ ಪ್ರತಿಭಟನೆ ನಡೆಸಲು ಸಜ್ಜಾಗಿದ್ದಾರೆ. ಆದ್ರೆ, ಹೋರಾಟದ ವಿಚಾರದಲ್ಲಿ ಬಿಜೆಪಿ ನಾಯಕರು ದಿಢೀರ್ ಬದಲಾವಣೆ ಮಾಡಿದ್ದಾರೆ.
ನಾಳೆ ಬೆಳಗ್ಗೆ 11 ಗಂಟೆಗೆ ಬೆಂಗಳೂರು-ಮೈಸೂರು ಹೆದ್ದಾರಿ ತಡೆಗೆ ಬಿಜೆಪಿ ನಾಯಕರು ಕರೆ ಕೊಟ್ಟಿದ್ದರು. ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರ ನೇತೃತ್ವದಲ್ಲಿ ಹೆದ್ದಾರಿ ಬಂದ್ ನಡೆಯಬೇಕಿತ್ತು. ಆದರೆ, ಮೈಸೂರು

ಸಂಸದ ಪ್ರತಾಪ್ ಸಿಂಹ ಅವರು ನಾಳೆ ಬಿಜೆಪಿಯಿಂದ ಮೈಸೂರು-ಬೆಂಗಳೂರು ಹೆದ್ದಾರಿ ಬಂದ್ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಫೇಸ್‌ಬುಕ್‌ನಲ್ಲಿ ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಪ್ರತಾಪ್ ಸಿಂಹ್, ನಾಳೆ ಹೆದ್ದಾರಿ ತಡೆ ಮಾಡುವ ಬದಲು ಮಂಡ್ಯದ ಸಂಜಯ್ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಕಾವೇರಿದ ಕಾವೇರಿ ಕಿಚ್ಚು; ನಾಳೆ ಬಂದ್​​; ಕಾಂಗ್ರೆಸ್​ ಸರ್ಕಾರದ ವಿರುದ್ಧ ಬೀದಿಗಿಳಿದ ಸುಮಲತಾ ಅಂಬರೀಶ್​

ಬಿಜೆಪಿ ನಾಯಕರು ಪ್ಲಾನ್ ಮಾಡಿದ್ದಂತೆ ನಾಳೆ ಬೆಳಗ್ಗೆ ಸಂಸದೆ ಸುಮಲತಾ ಅಂಬರೀಶ್ ಅವರ ನೇತೃತ್ವದಲ್ಲಿ ಹೆದ್ದಾರಿ ಬಂದ್ ನಡೆಯಬೇಕಿತ್ತು. ಆದ್ರೆ ಹೆದ್ದಾರಿ ತಡೆಯಲು ಅನುಮತಿ ಸಿಕ್ಕಿಲ್ಲ. ಇದರ ಜೊತೆಗೆ ಹೆದ್ದಾರಿ ಬಂದ್‌ಗೆ ಸಂಸದ ಪ್ರತಾಪ್ ಸಿಂಹ ಕೂಡ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸ್ವಪಕ್ಷದ ಸಂಸದರಿಂದಲೇ ಆಕ್ಷೇಪ ಕೇಳಿ ಬಂದ ಹಿನ್ನೆಲೆ ಬಿಜೆಪಿ ಪಕ್ಷ ಹೆದ್ದಾರಿ ಬಂದ್ ಮಾಡುವ ಹೋರಾಟವನ್ನು ಕೈ ಬಿಟ್ಟಿದೆ.

ನಾಳೆ ಬೆಳಗ್ಗೆ 11 ಗಂಟೆಗೆ ಮಂಡ್ಯದ ಸಂಜಯ್ ವೃತ್ತದಲ್ಲಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಲಿದ್ದಾರೆ. ಈ ಹೋರಾಟದಲ್ಲಿ ಮಂಡ್ಯ, ಮೈಸೂರು, ಚಾಮರಾಜನಗರ, ಹಾಸನ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಬಿಜೆಪಿ ಕಾರ್ಯಕರ್ತರು ಭಾಗಿಯಾಗಲಿದ್ದಾರೆ. ಕಾವೇರಿ ಹೋರಾಟಕ್ಕೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರನ್ನು ಕರೆತರಲು ಬಿಜೆಪಿ ನಾಯಕರ ಚಿಂತನೆ ನಡೆಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಸುಮಲತಾ ಅಂಬರೀಶ್ ನೇತೃತ್ವದಲ್ಲಿ ಹೆದ್ದಾರಿ ಬಂದ್‌ಗೆ ಬಿಜೆಪಿಯಲ್ಲೇ ವಿರೋಧ; ಸಂಸದ ಪ್ರತಾಪ್ ಸಿಂಹ ಹೇಳಿದ್ದೇನು?

https://newsfirstlive.com/wp-content/uploads/2023/08/Pratap-Simha.jpg

Load More