IND vs AUS: ದುಃಖದಲ್ಲಿ ಟೀಂ ಇಂಡಿಯಾ.. ಕಪ್ಪುಪಟ್ಟಿ ಧರಿಸಿ ಮೈದಾನಕ್ಕೆ ಇಳಿದ ಆಟಗಾರರು..

author-image
Ganesh
Updated On
IND vs AUS: ದುಃಖದಲ್ಲಿ ಟೀಂ ಇಂಡಿಯಾ.. ಕಪ್ಪುಪಟ್ಟಿ ಧರಿಸಿ ಮೈದಾನಕ್ಕೆ ಇಳಿದ ಆಟಗಾರರು..
Advertisment
  • ಬಾರ್ಡರ್​ ಗವಾಸ್ಕರ್​ ಟ್ರೋಫಿಯ 4ನೇ ಟೆಸ್ಟ್ ಪಂದ್ಯ
  • ಆಸ್ಟ್ರೇಲಿಯಾದ ಮೆಲ್ಬೋರ್ನ್​​ನಲ್ಲಿ ಪಂದ್ಯ ನಡೆಯುತ್ತಿದೆ
  • ದುಃಖದ ವಿಚಾರವನ್ನು ಹಂಚಿಕೊಂಡ ಬಿಸಿಸಿಐ

ಭಾರತೀಯ ಅರ್ಥ ವ್ಯವಸ್ಥೆಯ ದಿಕ್ಕನ್ನೇ ಬದಲಿಸಿದ ಧೀಮಂತ ನಾಯಕ, ಕಾಂಗ್ರೆಸ್‌ ಮುಖಂಡ, ಮಾಜಿ ಪ್ರಧಾನಿ ಡಾ. ಮನಮೋಹನ್‌ ಸಿಂಗ್‌ ವಿಧಿವಶರಾಗಿದ್ದಾರೆ. ಅವರ ನಿಧನಕ್ಕೆ ಟೀಂ ಇಂಡಿಯಾ ಕಂಬನಿ ಮಿಡಿದಿದೆ.

ಬಾರ್ಡರ್ ಗವಾಸ್ಕರ್ ಟ್ರೋಫಿ ಹಿನ್ನೆಲೆಯಲ್ಲಿ ಭಾರತ ತಂಡ ಆಸ್ಟ್ರೇಲಿಯಾ ಪ್ರವಾಸದಲ್ಲಿದೆ. ಮೆಲ್ಬೋರ್ನ್​​ನಲ್ಲಿ 4ನೇ ಎರಡನೇ ದಿನದ ಪಂದ್ಯ ನಡೆಯುತ್ತಿದೆ. ಸಿಂಗ್ ನೀಧನಕ್ಕೆ ದುಃಖ ವ್ಯಕ್ತಪಡಿಸಿರುವ ಟೀಂ ಇಂಡಿಯಾ, ಗೌರವಾರ್ಥವಾಗಿ ಕಪ್ಪು ಪಟ್ಟಿ ಧರಿಸಿಕೊಂಡು ಮೈದಾನಕ್ಕೆ ಇಳಿದಿದೆ.

ಇದನ್ನೂ ಓದಿ:ಮನಮೋಹನ್ ಸಿಂಗ್ ಅಂತ್ಯಕ್ರಿಯೆ.. ಅಂತಿಮ ವಿಧಿವಿಧಾನ ನಾಳೆ ಯಾಕೆ ನಡೆಯುತ್ತಿದೆ ಗೊತ್ತಾ?

ಮನಮೋಹನ್​ ಸಿಂಗ್​.. ದೇಶದ ಮಾಜಿ ಪ್ರಧಾನಿ.. ಭಾರತದ ಕಂಡಂಥ ಅಪ್ರತಿಮ ನಾಯಕರಲ್ಲಿ ಒಬ್ಬರು.. ಭಾರತದ ಆರ್ಥಿಕತೆಗೆ ಭದ್ರ ಬುನಾದಿ ಹಾಕಿದ ಆರ್ಥಿಕ ತಜ್ಞ.. ಮಾಜಿ ಪ್ರಧಾನಿ ಮನಮೋಹನ್​ ಸಿಂಗ್​ ವಿಧಿವಶರಾಗಿದ್ದಾರೆ. 92 ವರ್ಷ ವಯಸ್ಸಿನ ಡಾ. ಮನಮೋಹನ್​ ಸಿಂಗ್ ಅವರ​ ಆರೋಗ್ಯ ಸ್ಥಿತಿ ಗಂಭೀರವಾದ ಹಿನ್ನೆಲೆ ಅವರನ್ನು ಕಳೆದ ರಾತ್ರಿ ದೆಹಲಿಯ ಏಮ್ಸ್​​ಗೆ ಕರೆತರಾಗಿತ್ತು. ಬಳಿಕ ಅವರನ್ನು ತುರ್ತು ನಿಗಾ ಘಟಕದಲ್ಲಿ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ವಿಧಿವಶರಾಗಿದ್ದಾರೆ.

ಮನಮೋಹನ್ ಸಿಂಗ್ ಅವರು 1991- 96ರ ಅವಧಿಯಲ್ಲಿ ಮಾಜಿ ಪ್ರಧಾನಿ ಪಿ.ವಿ. ನರಸಿಂಹರಾವ್ ಅವರ ನೇತೃತ್ವದ ಸರ್ಕಾರದಲ್ಲಿ ಹಣಕಾಸು ಸಚಿವರಾಗಿ ಕಾರ್ಯನಿರ್ವಹಿಸಿ ಮೆಚ್ಚುಗೆ ಗಳಿಸಿದ್ದರು. ಬಳಿಕ 2004ರಿಂದ 2014ರವರೆಗೆ ದೇಶದ ಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದರು.

ಇದನ್ನೂ ಓದಿ:ಪಾಕಿಸ್ತಾನದಲ್ಲಿ ಇದೆ ಮನಮೋಹನ್ ಸಿಂಗ್ ಹೆಸರಲ್ಲಿ ಒಂದು ಶಾಲೆ..!

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment